Sharad Yadav Passes Away: 10 ಬಾರಿ ಸಂಸತ್‌ಗೆ ಆಯ್ಕೆಯಾಗಿದ್ದ ಜೆಡಿಯು ಮಾಜಿ ಅಧ್ಯಕ್ಷ ಶರದ್ ಯಾದವ್ ನಿಧನ
ಹಿರಿಯ ಸಮಾಜವಾದಿ ನಾಯಕ, ಮಾಜಿ ಕೇಂದ್ರ ಸಚಿವ ಶರದ್ ಯಾದವ್ (75) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶರದ್ ಯಾದವ್ ನಿಧನದ ಬಗ್ಗೆ ಪುತ್ರಿ ಸುಭಾಷಿಣಿ ಶರದ್ ಯಾದವ್ ಸಾಮಾಜಿಕ ಜಾಲತಾಣದ ಮೂಲಕ ಖಚಿತಪಡಿಸಿದ್ದಾರೆ.
ನವದೆಹಲಿ (ಜ.12): ಜೆಡಿಯು ಮಾಜಿ ಅಧ್ಯಕ್ಷ, ಮಾಜಿ ಕೇಂದ್ರ ಸಚಿವ ಶರದ್ ಯಾದವ್ (75) ಗುರುವಾರ ಕೊನೆಯುಸಿರೆಳೆದರು. ಶರದ್ ಗುರುವಾರ ದಿಢೀರ್ ತೀವ್ರ ಅನರೋಗ್ಯಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಗುರುಗ್ರಾಮದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ ನಿಧನರಾದರು. ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಶರದ್ ಯಾದವ್ ನಿಧನದ ಬಗ್ಗೆ ಪುತ್ರಿ ಸುಭಾಷಿಣಿ ಶರದ್ ಯಾದವ್ ಸಾಮಾಜಿಕ ಜಾಲತಾಣದ ಮೂಲಕ ಖಚಿತಪಡಿಸಿದ್ದಾರೆ.
ಶರದ್ ನಿಧನಕ್ಕೆ ಜೆಡಿಯು ಹಾಲಿ ಅಧ್ಯಕ್ಷ ನಿತೀಶ್ ಕುಮಾರ್, ಆರ್‌ಜೆಡಿ ನಾಯಕ ಲಾಲು, ಪ್ರಧಾನಿ ನರೇಂದ್ರ ಮೋದಿಯಾಗಿ ಗಣ್ಯರು ಕಂಬನಿ ಮಿಡಿದಿದ್ದಾರೆ. ಮಧ್ಯಪ್ರದೇಶ ಮೂಲದ ಶರದ್ ಎಂಜಿನಿಯರಿಂಗ್ ಪದವೀಧರರಾಗಿ, ಕೃಷಿಕರಾಗಿ, ಶಿಕ್ಷಣ ತಜ್ಞರಾಗಿಯೂ ಗುರುತಿಸಿಕೊಂಡಿದ್ದರು. ಜೆಡಿಯು ಸಂಸ್ಥಾಪಕ ಅಧ್ಯಕ್ಷರಾಗಿದ್ದರು. 1974ರಲ್ಲಿ ಮೊದಲ ಬಾರಿಗೆ ಮಧ್ಯಪ್ರದೇಶ ಜಬಲ್ಪುರದಿಂದ ಲೋಕಸಭೆಗೆ ಆಯ್ಕೆಯಾದ ಶರದ್, ನಂತರ 1979, 1981ರಲ್ಲಿ ಅಲ್ಲಿಂದಲೇ ಪುನರಾಯ್ಕೆಯಾಗಿದ್ದರು.
Pele Passed Away: ಫುಟ್ಬಾಲ್ ದಂತಕಥೆ ಬ್ರೆಜಿಲ್‌ನ ಪೀಲೆ ಇನ್ನಿಲ್ಲ
1984ರಲ್ಲಿ ಉ.ಪ್ರದೇಶ ಬದೌನ್‌ನಿಂದ ಸ್ಪರ್ಧಿಸಿ ಸೋತರು. ನಂತರ 1991ರಿಂದ ಬಿಹಾರ ಮಾಧೇಪುರದಿಂದ ಸತತವಾಗಿ 4 ಬಾರಿ ಲೋಕಸಭೆಗೆ ಆಯ್ಕೆಯಾದರು. ಬಳಿಕ 3 ಬಾರಿ ರಾಜ್ಯಸಭೆಗೂ ಆಯ್ಕೆಯಾಗಿದ್ದರು. ತಮ್ಮ ರಾಜಕೀಯ ಜೀವನದಲ್ಲಿ ಜವಳಿ, ಆಹಾರ, ವಿಮಾನಯಾನ ಸೇರಿದಂತೆ ಹಲವು ಖಾತೆಗಳನ್ನು ನಿರ್ವಹಿಸಿದ್ದರು. 5 ದಶಕಗಳ ರಾಜಕೀಯ ಜೀವನದಲ್ಲಿ ಜನತಾ ಪಕ್ಷ, ಲೋಕದಳ, ಜೆಡಿಯು, ಲೋಕತಾಂತ್ರಿಕ ಜನತಾದಳ, ಆರ್‌ಜೆಡಿ ಪಕ್ಷಗಳಿಗೂ ಕಾಲಿಟ್ಟಿದ್ದರು.