ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್‌ಗೆ ಕೊರೋನಾ| ಟ್ವೀಟ್ ಮಾಡಿ ಮಾಹಿತಿ ನೀಡಿದ ಮಾಜಿ ಸಿಎಂ ಯಾದವ್| ಕೆಲ ದಿನಗಳ ಹಿಂದಷ್ಟೇ ಉತ್ತರಾಖಂಡ್‌ಗೆ ಭೇಟಿ ನೀಡಿದ್ದ ಅಖಿಲೇಶ್ ಯಾದವ್
ಲಕ್ನೋ(ಏ.14): ಸಮಾಜವಾದಿ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಹಾಗೂ ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್‌ಗೆ ಕೊರೋನಾ ಸೋಂಕು ತಗುಲಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಯಾದವ್ 'ನನ್ನ ಕೊರೋನಾ ಟೆಸ್ಟ್ ವರದಿ ಪಾಸಿಟಿವ್ ಬಂದಿದೆ. ನಾನು ಸದ್ಯ ಐಸೋಲೇಟ್ ಆಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೊರೋನಾ ತಪಾಸಣೆ ನಡೆಸಿ, ಕೆಲ ದಿನಗಳ ವರೆಗೆ ಐಸೋಲೇಟ್ ಆಗುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ' ಎಂದಿದ್ದಾರೆ.
Scroll to load tweet…
ಇನ್ನು ಇತ್ತೀಚೆಗಷ್ಟೇ ಅಖಿಲೆಶ್ ಯಾದವ್ ಉತ್ತರಾಖಂಡ್‌ಗೆ ಭೇಟಿ ನೀಡಿದ್ದರು. ಈ ವೇಳೆ ಅಖಿಲ ಭಾರತೀಯ ಅಧ್ಯಕ್ಷ ಅಖರಾ ಪರಿಷತ್ ಮಹಾನತ್ ನರೇಂದ್ರ ಗಿರಿ ಅವರನ್ನು ಭೇಟಿ ಮಾಡಿದ್ದರು. ಇನ್ನು ನರೇಂದ್ರ ಗಿರಿಯವರ ಕೊರೋನಾ ವರದಿಯೂ ಪಾಸಿಟಿವ್ ಬಂದಿದೆ ಎಂಬುವುದು ಉಲ್ಲೇಖನೀಯ.
