ಸಿದ್ದರಾಮಯ್ಯ ಸರ್ಕಾರ ಅನ್ನ ಭಾಗ್ಯ ಯೋಜನೆಯಲ್ಲಿ ಭಾರೀ ರಾಜಕೀಯ ನಡೆಯುತ್ತಿದೆ. ಇದೀಗ ಕೇಂದ್ರ ಅಕ್ಕಿ ಕೊಡುತ್ತಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿ ದ್ವೇಷದ ರಾಜಕಾರಣ ಎನ್ನುತ್ತಿದೆ. ಇದರ ಬೆನ್ನಲ್ಲೇ FCI ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. 

ನವದೆಹಲಿ(ಜೂ.15): ಕಾಂಗ್ರೆಸ್ ಉಚಿತ ಭಾಗ್ಯದ ಅನ್ನ ಭಾಗ್ಯ ಯೋಜನೆಯಲ್ಲಿ ರಾಜಕೀಯ ಜೋರಾಗಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದೆ ಅನ್ನೋ ಆರೋಪ ಇದೀಗ ಗಂಭೀರವಾಗಿದೆ. ಇದು ದ್ವೇಷದ ರಾಜಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಜೊತೆಗೆ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ತನ್ನ ಆಕ್ರೋಶ ಹೊರಹಾಕಿದೆ. ಇದರ ಬೆನ್ನಲ್ಲೇ ಫುಡ್ ಕಾರ್ಪೋರೇಶನ್ ಆಫ್ ಇಂಡಿಯಾ ಅಧಿಕಾರಿಗಳು ರಾಜ್ಯ ಕಾಂಗ್ರೆಸ್ ಆರೋಪಕ್ಕೆ ಸ್ಪಷ್ಟನೆ ನೀಡಿದೆ. ಪ್ರಾದೇಶಿಕ ಕಚೇರಿ ಅಧಿಕಾರಿಗಳು ಹೆಚ್ಚುವರಿ ಧಾನ್ಯ ನೀಡಲು ಒಪ್ಪಿಗೆ ಸೂಚಿಸಿದ್ದರು. ಆದರೆ ನೀತಿ ಬದಲಾವಣೆ ಆಗಿರುವ ಮಾಹಿತಿ ಇಲ್ಲದೆ ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರ ಆರೋಪಕ್ಕೆ ಸ್ಪಷ್ಟನೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹೆಚ್ಚುವರಿ ಅಕ್ಕಿಗಾಗಿ ಕರ್ನಾಟಕ ಸರ್ಕಾರದಿಂದ ಮನವಿ ಬಂದಿತ್ತು. ನಮ್ಮ ಪ್ರಾದೇಶಿಕ ಕಚೇರಿ ಅಧಿಕಾರಿಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದರು. ಆದರೆ ನಮ್ಮ ನೀತಿಯಲ್ಲಿ ಬದದಲಾವಣೆಯಾಗಿದೆ. ರಾಜ್ಯಗಳಿಗೆ ನೇರವಾಗಿ ಅಕ್ಕಿ ಮಾರಾಟ ನಿಲ್ಲಿಸಲಾಗಿದೆ. ಅಕ್ಕಿ, ಗೋಧಿ ಬೆಲೆ ನಿಯಂತ್ರಿಸಲು ಮುಕ್ತ ಮಾರುಕಟ್ಟೆಗೆ ಮಮಾರಾಟ ಮಾಡಲಾಗುತ್ತಿದೆ. ಹೀಗಾಗಿ ರಾಜ್ಯಗಳಿಗೆ ನೀಡುತ್ತಿದ್ದ ಹೆಚ್ಚುವರಿ ಆಹಾರ ಧಾನ್ಯ ಸರಬರಾಜು ತಡೆ ಹಿಡಿಯಲಾಗಿದೆ ಎಂದಿದ್ದಾರೆ.

ಕಾಂಗ್ರೆಸ್‌ನಿಂದ ಮುಂದುವರೆದ ದೋಖಾ ಸಿರೀಸ್: ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ‌ ವಾಗ್ದಾಳಿ

ಈ ಹಿಂದೆ ರಾಜ್ಯಗಳಿಗೆ ಹೆಚ್ಚುವರಿ ಆಹಾರ ಧಾನ್ಯ ಪೂರೈಕೆ ಮಾಡಲಾಗುತ್ತಿದೆ. ಇದರ ನಡುವೆ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಗೋಧಿ ಬೆಲೆ ಏರಿಕೆಯಾಗುತ್ತಿದೆ. ಬೆಲೆ ನಿಯಂತ್ರಿಸುವ ಅನಿವಾರ್ಯತೆ ಎದರಾಗಿದೆ. ಪ್ರಧಾನಮಂತ್ರಿ ಗರೀಬ್ ಗಲ್ಯಾಣ ಯೋಜನೆ ಅಡಿಯಲ್ಲಿ ಆಯಾ ರಾಜ್ಯಗಳಿಗೆ ನೀಡಬೇಕಿರುವ ಅಕ್ಕಿಯನ್ನು ಯಾವುದೇ ಕೊರತೆ ಇಲ್ಲದೆ ಕೇಂದ್ರ ನೀಡುತ್ತಿದೆ. 80 ಕೋಟಿ ಜನರು ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಫಲಾನುಭವಿಗಳಾಗಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ 80 ಕೋಟಿ ಜನರ ಬಗ್ಗೆ ಯೋಚಿಸಬೇಕು. ಈ 80 ಕೋಟಿ ಜನರ ಆಹಾರ ಧಾನ್ಯ ಸರಬರಾಜಿನಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಲು ನಿಯಮ ಬದಲಾಯಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಾದೇಶಿಕ ಅಧಿಕಾರಿಗಳಿಗೆ ಈ ಮಾಹಿತಿ ಇರಲಿಲ್ಲ. ಈ ರೀತಿ ಒಪ್ಪಿಗೆ ಸೂಚಿಸಿರುವ ಮಾಹಿತಿ ತಿಳಿದ ಕೂಡಲೇ ನಾವು ಪರಿಷ್ಕರಿಸಿದ್ದೇವೆ. ಆಹಾರ ಧಾನ್ಯ ಸರಬರಾಜು, ವಿತರಣೆ, ಪೂರೈಕೆ ಫುಡ್ ಕಾರ್ಪೋರೇಶನ್ ಇಂಡಿಯಾ ನಿರ್ವಹಣೆ ಮಾಡುತ್ತದೆ. ಇದರಲ್ಲಿ ರಾಜಕೀಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪನೆ ನೀಡಿದ್ದಾರೆ.

ಅಕ್ಕಿ ಕೊಡುತ್ತೇವೆಂದು ಒಪ್ಪಿ ಈಗ ಕೈ ಕೊಟ್ಟ ಕೇಂದ್ರ ಸರ್ಕಾರ: ಸಿಎಂ ಸಿದ್ದು ಗಂಭೀರ ಆರೋಪ

ಇತ್ತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ. ಇದು ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಎಂದಿದೆ. 10 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ. ಕೇಂದ್ರ ಸರ್ಕಾರ 5ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಕಾಂಗ್ರೆಸ್ ಹೇಳಿದ 10 ಕೆಜಿ ಅಕ್ಕಿಯನ್ನು ನೀಡಿ, ಅಕ್ಕಿ ಇಲ್ಲದಿದ್ದರೆ ಅದರ ದುಡ್ಡನ್ನು ಫಲಾನುಭವಿಗಳ ಖಾತೆಗೆ ಹಾಕಿ ಎಂದು ಬಿಜೆಪಿ ಟೀಕಿಸಿದೆ.