ಶೃಂಗೇರಿ ಮಠಕ್ಕೆ ಗಾಂಧಿ ಕುಟುಂಬ ಭೇಟಿ: 45 ವರ್ಷದ ಹಿಂದೆ ಅಜ್ಜಿ- ಈಗ ಮೊಮ್ಮಗಳ ಆಗಮನ

ಕಳೆದ 45 ವರ್ಷಗಳ ಹಿಂದೆ ಇಂದಿರಾಗಾಂಧಿ ಶೃಂಗೇರಿಯ ಶಾರದಾಪೀಠಕ್ಕೆ ಆಗಮಿಸಿದ್ದರು. ಈಗ ಅವರ ಮೊಮ್ಮಗಳು ಪ್ರಿಯಾಂಕ ಗಾಂಧಿ ಶಾರದಾ ಪೀಠಕ್ಕೆ ಭೇಟಿ ಮಾಡಿ ಆಶೀರ್ವಾದ ಪಡೆದರು.

Gandhi family visit to Sringeri Mutt 45 years ago Grandmother now grand daughter arrival sat

ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ 

ಚಿಕ್ಕಮಗಳೂರು (ಏ.26): ದೇಶದ 1978ರ ಲೋಕಸಭಾ ಚುನಾವಣೆ ವೇಳೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಮಾಜಿ ಪ್ರಧಾನಮಂತ್ರಿ ಇಂದಿರಾಗಾಂಧಿ ಅವರು ಜಿಲ್ಲೆಯ ಐತಿಹಾಸಿಕ ಶೇಂಗೇರಿ ಶಾರದಾ ಮಠಕ್ಕೆ ಆಗಮಿಸಿದ್ದರು. ಈಗ 45 ವರ್ಷಗಳ ಬಳಿಕ ಅವರ ಮೊಮ್ಮಗಳು ಪ್ರಿಯಾಂಕಾ ಗಾಂಧಿ ಶಾರದಾಂಬೆ ದರ್ಶನ ಮಾಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗಮಿಸಿದ್ದು, ಅಜ್ಜಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಆಗಮಿಸಿ 45 ವರ್ಷಗಳ ಬಳಿಕ ಇವರು ಬಂದಂತಾಗಿದೆ. 1978 ರಲ್ಲಿ ಇಂದಿರಾ ಗಾಂಧಿ ಅವರು ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದರು. ಈಗ 2023 ಗಾಂಧಿಯವರು ಆಗಮಿಸಿದ್ದಾರೆ. ಶ್ರೀಮಠದಲ್ಲಿ ಶಾರದಾಂಬೆಯ ದರ್ಶನ ಪಡೆದು ಹಾಗೂ ಗುರುಗಳ ದರ್ಶನ ಪಡೆದರು.ಶೃಂಗೇರಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಿಯಾಂಕಾಗಾಂಧಿ ಕೆಲ ಹೊತ್ತು ಪ್ರಾರ್ಥಿಸಿದರು. ಅಲ್ಲಿಂದ ಶೃಂಗೇರಿ ನರಸಿಂಹವನದಲ್ಲಿರುವ ಹಿರಿಯ ಸ್ವಾಮೀಜಿಯ ಭಾರತೀ ತೀರ್ಥ ಶ್ರೀಗಳು ಹಾಗೂ ವಿಧುಶೇಖರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಶೃಂಗೇರಿ ಆನೆಗೆ ಸೇಬು ತಿನ್ನಿಸಿದ ಪ್ರಿಯಾಂಕ ಗಾಂಧಿ: ಕೆಲವು ವಿಶೇಷ ಫೋಟೋಗಳು ಇಲ್ಲಿವೆ ನೋಡಿ.!

ಆನೆ ಸೊಂಡಿಲನ್ನು ಮುದ್ದು ಮಾಡಿದ ನಾಯಕಿ :  ಶೃಂಗೇರಿ ಮಠಕ್ಕೆ ಭೇಟಿ ನೀಡಿದ ವೇಳೆ ಮಠದ ಆನೆ ಬಳಿಗೆ ಬಂದು ಅವರು, ಬಾಳೆಹಣ್ಣು ಹಾಗೂ ಸೇಬನ್ನು ಕೊಟ್ಟರು. ಆದರೆ, ಆನೆ ಸೇಬನ್ನು ಮಾವುತನಿಗೆ ಕೊಟ್ಟಿದೆ. ಈ ವೇಳೆ ಪ್ರಿಯಾಂಕಾ ಆನೆಯೊಂದಿಗೆ ಕೆಲಕಾಲ ಸಮಯ ಕಳೆದರು. ಆನೆ ಸೊಂಡಿಲನ್ನು ಸವರಿ ಮುದ್ದು ಮಾಡಿದರು. ಬಳಿಕ ಆನೆ ಸಹ ಪ್ರಿಯಾಂಕಾ ಅವರಿಗೆ ಆಶೀರ್ವಾದ ಮಾಡಿದೆ. ಲಕ್ಷ್ಮಿ, ಜಯಲಕ್ಷ್ಮಿ ಎಂಬ ಎರಡು ಆನೆಗಳೊಂದಿಗೆ ಸಮಯ ಕಳೆದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ : ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಬಗ್ಗೆ ಜನರಿಗೆ ಒಲವಿದೆ. ಬಿಜೆಪಿ ದುರಾಡಳಿತದ ವಿರುದ್ಧ ಜನ ಬೇಸತ್ತಿದ್ದಾರೆ. ಹೀಗಾಗಿ ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ ಎಂದು ಹೇಳಿದರುಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಯಾರು ಆಗುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಯಾವುದೇ ಉತ್ತರವನ್ನು ನೀಡಿಲ್ಲ. ಈ ಬಾರಿ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ. ಜನರಿಗೋಸ್ಕರ ಬಿಜೆಪಿ ಸರ್ಕಾರ ಯಾವ ಕೆಲಸವನ್ನೂ ಮಾಡಿಲ್ಲ. ಬಿಜೆಪಿ ಸರ್ಕಾರದ ವೈಫಲ್ಯವನ್ನು ಕರ್ನಾಟಕದ ಜನ ಗುರುತಿಸಿದ್ದಾರೆ. ನನ್ನ ಪ್ರಕಾರ ಕರ್ನಾಟಕದ ಜನ ಬದಲಾವಣೆಯನ್ನು ಬಯಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.ಬಿಜೆಪಿಯವರು ಯಾವ ಕೆಲಸವನ್ನೂ ಮಾಡಿಲ್ಲ. ಜನರಿಗೂ ನೋಡಿ ನೋಡಿ ಸಾಕಾಗಿದೆ. ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದರು.

ಬಾಳೆಹೊನ್ನೂರು ಮಠಕ್ಕೂ ಭೇಟಿ ನೀಡಿದ ಪ್ರಿಯಾಂಕ: ಚಿಕ್ಕಮಗಳೂರು ಜಿಲ್ಲೆ ಗೆ ಪ್ರವಾಸ ಕೈಗೊಂಡಿದ್ದ ಪ್ರಿಯಾಂಕ ಗಾಂಧಿ ಬಾಳೆಹೊನ್ನೂರು ಮಠಕ್ಕೂ ಭೇಟಿ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ  ಬಾಳೆಹೊನ್ನೂರು ಮಠಕ್ಕೆ ಭೇಟಿ ನೀಡಿದ ಅವರು ಮಠದ ಆವರಣದಲ್ಲಿ ರುವ ವೀರಭದ್ರೇಶ್ವರ ಸ್ವಾಮಿ ಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.  ವೀರಭದ್ರೇಶ್ವರ ಸ್ವಾಮಿ ದರ್ಶನ ಪಡೆದಿದ್ದಾರೆ. ಗುರುಗಳು ಮಠದಲ್ಲಿ ಇರದ ಕಾರಣ ಶ್ರೀ ಆಶೀರ್ವಾದ ಪಡೆಯಲು ಸಾಧ್ಯ ವಾಗಲಿಲ್ಲ. ಇನ್ನು ನಂತರ ಬಹಿರಂಗ ಸಮಾವೇಶದಲ್ಲಿ ಭಾಗವಹಿಸಿದರು. 

ಸಂಕಷ್ಟದ ಕಾಲದಲ್ಲಿ ಅಜ್ಜಿಯ ಕೈ ಹಿಡಿದಿದ್ರು : ನನ್ನ ಅಜ್ಜಿಯ ಸಂಕಷ್ಟದ ಕಾಲದಲ್ಲಿ ಚಿಕ್ಕಮಗಳೂರು ಜನ  ನನ್ನ ಅಜ್ಜಿಯ ಕೈ ಹಿಡಿದಿದ್ದರು, ಈಗ ರಾಜ್ಯದ ಜನ ಕಾಂಗ್ರೆಸ್ ಸಂಕಷ್ಟ ಸಮಯದಲ್ಲಿ ಕಾಂಗ್ರೆಸ್ ಕೈ ಹಿಡಿಯಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ತಿಳಿಸಿದರು.ಅಂದು ಸಂಕಷ್ಟದಲ್ಲಿದ್ದಾಗ ಚಿಕ್ಕಮಗಳೂರುಜನರು ನನ್ನ ಅಜ್ಜಿಯ ಕೈ ಹಿಡಿದಿದ್ರು. ಈಗಲೂ ನಮ್ಮ ಕುಟುಂಬ ಸಂಕಷ್ಟದ ಸಮಯವನ್ನು ಅನುಭವಿಸುತ್ತಿದೆ.  ಚಿಕ್ಕಮಗಳೂರನ್ನು ನಾನು ಯಾವತ್ತಿಗೂ ಮರೆಯೋದಿಲ್ಲ ಎಂದರು.ಚಿಕ್ಕಮಗಳೂರಿನಲ್ಲಿ ಬಾಳೆಹೊನ್ನೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬೃಹತ್ ಬಹಿರಂಗ ಸಮಾವೇಶದಲ್ಲಿ ಟಿ.ಡಿ.ರಾಜೇಗೌಡ ಪರ ಮತಯಾಚನೆ ಮಾತನಾಡಿದ ಅವರು, ಮಳೆ ಬರ್ತಾ ಇದೆ ನೋಡಿ ಇದು ಭಗವಂತನ ಆಶೀರ್ವಾದ. ಅಜ್ಜಿ ಬಂದಾಗ ಹೇಗಿತ್ತೋ, ಅದೇ ರೀತಿ ಸೌಂದರ್ಯ ಈಗಲೂ ಇದೆ. ಚಿಕ್ಕಮಗಳೂರನ್ನು ಜೀವಮಾನದಲ್ಲಿ ನಾನು ಯಾವತ್ತು ಮರೆಯಲ್ಲ ಎಂದು ಹೇಳಿದರು.

ಮೈಲಾರಿ ಹೋಟೆಲ್‌ನಲ್ಲಿ ದೋಸೆ ತಯಾರಿಸಿ ಸವಿದ ಪ್ರಿಯಾಂಕಾ ಗಾಂಧಿ!

ಸುಳ್ಳು ಕೇಸ್‌ ಹಾಕಿ ಸಂಸತ್ತಿನಿಂದ ಹೊರಹಾಕಿದ ಬಿಜೆಪಿ: ರಾಹುಲ್ ಗಾಂಧಿ ಮೇಲೆ ಸುಳ್ಳು ಕೇಸ್ ಹಾಕಿ ಲೋಕಸಭೆಯಿಂದ ಹೊರಹಾಕಿದ್ದಾರೆ ಎಂದ ಪ್ರಿಯಾಂಕ ಗಾಂಧಿ, ರಾಹುಲ್ ಗಾಂಧಿ ಮತ್ತೆ ಲೋಕಸಭಾ ಸದಸ್ಯರಾಗಿ ಬರ್ತಾರೆ ಅಂತಾ ನಮಗೆ ವಿಶ್ವಾಸ ಇದೆ. ಪರಶಿವನ ಆಶೀರ್ವಾದ ಇದೆ, ಸತ್ಯಕ್ಕೆ ಜಯ ಸಿಕ್ಕೆ ಸಿಗುತ್ತದೆ. ಕರ್ನಾಟಕದ ಚುನಾವಣೆ ಸತ್ಯ ಮತ್ತು ಜಯದ ಹೋರಾಟ. ಒಂದು ಮಾತು ಹೇಳ್ತೇನೆ, ನಮಗೆ ಎಲ್ಲ ಕಡೆ ಮೋಸ ಆಗ್ತಿದೆ. ನಿಮ್ಮ ಮತವನ್ನು ನೀಡಿ ವಿಶ್ವಾಸ ತುಂಬಿ. ಕರ್ನಾಟಕದಲ್ಲಿ ಹೇಳುವವರು ಕೇಳುವವರು ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ಎಂದು ಜನರಲ್ಲಿ ಮನವಿ ಮಾಡಿದರು.

ಭಾಷಣದ ಉದ್ದಕ್ಕೂ  ಸ್ವಾಭಿಮಾನದ ಕಿಚ್ಚು ಪ್ರಸ್ತಾಪ :  ಇದು ಕರ್ನಾಟಕ ಸ್ವಾಭಿಮಾನ ಪರಿಚಯ ಮಾಡುವಂತಹ ಸಮಯ ಎಂದ ಪ್ರಿಯಾಂಕ ಗಾಂಧಿ, ಕರ್ನಾಟಕ ಸ್ವಾಭಿಮಾನ ದ ರಾಜ್ಯ. ಈ ರಾಜ್ಯದ ಪರಿಸ್ಥಿತಿ ಏನು ಅಂತಾ ಪ್ರತಿಯೊಬ್ಬರಿಗೂ ಗೊತ್ತಿದೆ. ನಾವು ಈ ಪರಿಸ್ಥಿತಿಯನ್ನು ಬದಲಾಯಿಸುತ್ತೇವೆ. ನಾವು ನಿಮ್ಮಿಂದ ಲೂಟಿ ಮಾಡುವುದಿಲ್ಲ, ನಾವು ನಿಮ್ಮ ಹಣವನ್ನ ನಿಮಗೆ ವಾಪಸ್ಸು ನೀಡುತ್ತೇವೆ. ಬೆಲೆ ಏರಿಕೆ ಕಡಿಮೆ ಮಾಡುತ್ತೇವೆ. ಕರ್ನಾಟಕವನ್ನ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ನಮ್ಮ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರಬೇಕು ಎಂದು ಹೇಳಿದರು.

Latest Videos
Follow Us:
Download App:
  • android
  • ios