ಛತ್ತೀಸ್‌ಗಢದ ಗೌರೆಲಾ ಪೆಂಡ್ರಾ-ಮರ್ವಾಹಿ ಜಿಲ್ಲೆಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ 35 ವರ್ಷದ ವಿವಾಹಿತ ಮಹಿಳೆಯ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾ*ಚಾರ ಎಸಗಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ತಲೆಮರೆಸಿಕೊಂಡಿದ್ದಾನೆ.
ವಿವಾಹಿತ ಮಹಿಳೆಯೊಬ್ಬರು ತಾನು ಸಂಜೆ ವೇಳೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ರಸ್ತೆ ಬದಿಯಲ್ಲಿಯೇ ಕಾದು ಕುಳಿತಿದ್ದ ನಾಲ್ವರು ಯುವಕರು ಮಹಿಳೆಯನ್ನು ಎಳೆದುಕೊಂಡು ಕಣ್ಣಿಗೆ ಬಟ್ಟೆಕಟ್ಟಿ, ಬಾಯಿ ಮುಚ್ಚಿ ನಿರ್ಜನ ಪ್ರದೇಶಕ್ಕೆ ಎತ್ತಿಕೊಂಡು ಹೋಗಿದ್ದಾರೆ. ಅಲ್ಲಿ ಮಹಿಳೆಯ ಮೇಲೆ ಮೃಗಗಳಂತೆ ಒಬ್ಬರಾದ ಮೇಲೆ ಒಬ್ಬರಂತೆ ಸರದಿ ಸಾಲಿನಲ್ಲಿ ಅತ್ಯಾ*ಚಾರ ಎಸಗಿದ್ದಾರೆ. ಸಾಮೂಹಿಕ ಅತ್ಯಾಚಾರದಿಂದ ಮಹಿಳೆ ಜರ್ಜಿರಿತಳಾಗಿದ್ದಾಳೆ.
ಈ ಘಟನೆ ಛತ್ತೀಸ್‌ಗಢ ರಾಜ್ಯದ ಗೌರೆಲಾ ಪೆಂಡ್ರಾ-ಮರ್ವಾಹಿ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ 35 ವರ್ಷದ ವಿವಾಹಿತ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ನಡೆದಿದೆ. ವಿವಾಹಿತ ಮಹಿಳೆಯ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣವು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಮಹಿಳೆ ಆರೋಪಿಗಳಿಂದ ತಪ್ಪಿಸಿಕೊಂಡು ಬಂದು ಮನೆ ಸೇರಿದ್ದಾಳೆ. ಅಲ್ಲಿಂದ ಕುಟುಂಬಸ್ಥರ ಜೊತಗೆ ತೆರಳಿ ಮಾರ್ವಾಹಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುವುದಕ್ಕೂ ಸುರಕ್ಷತೆ ಒದಗಿಸದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡದ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಅತ್ಯಾ*ಚಾರ ಮಾಡಿದ ನಾಲ್ವರು ಆರೋಪಿಗಳನ್ನು ಬಂಧಿಸಿ ಗಲ್ಲಿಗೇರಿಸುವಂತೆ ಆಗ್ರಹ ಮಾಡಿದ್ದಾರೆ.
ಇದೀಗ ಮಹಿಳೆ ಕೊಟ್ಟಿರುವ ದೂರಿನ ಆಧಾರದಲ್ಲಿ ಗ್ಯಾಂಗ್ ರೇಪ್ ಆರೋಪದ ಮೇಲೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಅಪ್ರಾಪ್ತ ಬಾಲಕನಾಗಿದ್ದಾನೆ. ಬಂಧಿತ ಆರೋಪಿಗಳನ್ನು 35 ವರ್ಷದ ಅಮೋಲ್ ಪ್ರಜಾಪತಿ, 25 ವರ್ಷದ ರಾಜಾ ಅಲಿಯಾಸ್ ರಾಜ್‌ಕುಮಾರ್ ಮತ್ತು 25 ವರ್ಷದ ಪ್ರೇಮ್‌ಚಂದ್ ಭೇನಾ ಎಂದು ಗುರುತಿಸಲಾಗಿದೆ. ಮರ್ವಾಹಿ ಪೊಲೀಸರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.
ಇನ್ನು ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ. ಗೌರೆಲಾ ಪೆಂಡ್ರಾ ಮರ್ವಾಹಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಓಂ ಚಂದೇಲ್ ಅವರು, ಪೊಲೀಸರು ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಮುಂದಿನ ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆ ಕುಟುಂಬದವರು ನಾಲ್ವರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ತಲೆಮರೆಸಿಕೊಂಡಿರುವ ನಾಲ್ಕನೇ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.


