ರಾಜಕೀಯಕ್ಕೆ ಬೈಬೈ ಹೇಳಿದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ಕಾರಣ ಇಲ್ಲಿದೆ..
ಮಾಜಿ ಟೀಂ ಇಂಡಿಯಾ ಕ್ರಿಕೆಟಿಗೆ, ಬಿಜೆಪಿ ಸಂಸದ ಗೌತಮ್ ಗಂಭೀರ್ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮನ್ನು ರಾಜಕೀಯ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಬಿಜೆಪಿಗೆ ಕೇಳಿದ್ದಾರೆ.
ಬಿಜೆಪಿ ಸಂಸದ ಗೌತಮ್ ಗಂಭೀರ್ ಸಕ್ರಿಯ ರಾಜಕೀಯ ತ್ಯಜಿಸಲು ನಿರ್ಧರಿಸಿದ್ದಾರೆ. ಪೂರ್ವ ದೆಹಲಿ ಕ್ಷೇತ್ರವನ್ನು ಪ್ರತಿನಿಧಿಸುವ ಮಾಜಿ ಕ್ರಿಕೆಟಿಗ, ತಮಗೆ ಕ್ರಿಕೆಟ್ ಕಮಿಟ್‌ಮೆಂಟ್‌ಗಳಿರುವ ಕಾರಣ ತಾವು ರಾಜಕೀಯದಿಂದ ಹೊರ ಹೋಗಲು ಬಯಸಿರುವುದಾಗಿ ತಿಳಿಸಿದ್ದಾರೆ.
ಗಂಭೀರ್ ಮಾರ್ಚ್ 2019ರಲ್ಲಿ ಬಿಜೆಪಿ ಸೇರಿದರು ಮತ್ತು ಅಂದಿನಿಂದ ದೆಹಲಿಯಲ್ಲಿ ಪಕ್ಷದ ಪ್ರಮುಖ ಮುಖವಾಗಿದ್ದಾರೆ. ಈ ತಿಂಗಳ ಕೊನೆಯಲ್ಲಿ ಪ್ರಾರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮುಂಬರುವ ಆವೃತ್ತಿಯಲ್ಲಿ ಅವರು ಕೋಲ್ಕತ್ತಾ ನೈಟ್ ರೈಡರ್ಸ್ ಮಾರ್ಗದರ್ಶಕರಾಗಿ ಕಾಣಿಸಿಕೊಳ್ಳಲಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜಕೀಯ ತೊರೆಯಲು ನಿರ್ಧರಿಸುವ ಸಂಸದ, ಬಿಜೆಪಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರ ಬಳಿ ತಮ್ಮನ್ನು ರಾಜಕೀಯ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಒತ್ತಾಯಿಸಿದ್ದಾಗಿ ಕೇಳಿರುವುದಾಗಿ X ನಲ್ಲಿ ತಿಳಿಸಿದ್ದಾರೆ.
ದಕ್ಷಿಣದ ಚಿತ್ರದಲ್ಲಿ ಅಭಿನಯಿಸಲು 'ನಿರ್ಮಾಪಕರೊಂದಿಗೆ ಮಲಗಲು' ಕೇಳಿದ್ರು; ಕರಾಳ ಅನುಭವ ಬಿಚ್ಚಿಟ್ಟ ಅಂಕಿತಾ
'ನನ್ನ ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ನಾನು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಜೀ ಅವರಿಗೆ ಮನವಿ ಮಾಡಿದ್ದೇನೆ. ಇದರಿಂದಾಗಿ ನಾನು ನನ್ನ ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ಗಮನ ಕೇಂದ್ರೀಕರಿಸುತ್ತೇನೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳು. ಜೈ ಹಿಂದ್,' ಎಂದು ಗಂಭೀರ್ ಎಕ್ಸ್ ನಲ್ಲಿ ಬರೆದಿದ್ದಾರೆ.
ಅನಂತ್- ರಾಧಿಕಾ ವಿವಾಹಕ್ಕೆ ಎನರ್ಜಿ ತುಂಬಿದ ರಿಹಾನಾ; ಒಂದು ಪ್ರದರ್ಶನದ ...
ಗಂಭೀರ್ ಮಾರ್ಚ್ 2019ರಲ್ಲಿ ಬಿಜೆಪಿ ಸೇರಿದರು ಮತ್ತು ಅಂದಿನಿಂದ ದೆಹಲಿಯಲ್ಲಿ ಪಕ್ಷದ ಪ್ರಮುಖ ಮುಖವಾಗಿದ್ದಾರೆ. ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಪೂರ್ವ ದೆಹಲಿ ಸ್ಥಾನಕ್ಕೆ ಸ್ಪರ್ಧಿಸಿ 6,95,109 ಮತಗಳ ಗಣನೀಯ ಅಂತರದಿಂದ ಗೆದ್ದರು. ಎರಡು ವಿಶ್ವಕಪ್ ವಿಜೇತ ಭಾರತ ತಂಡಗಳ ಸದಸ್ಯರಾಗಿರುವ ಗಂಭೀರ್ ಅವರು ಈ ತಿಂಗಳ ಕೊನೆಯಲ್ಲಿ ಪ್ರಾರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮುಂಬರುವ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮೆಂಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.