ಪಣಜಿ(ಫೆ.21): ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಜರುಗಿದ ನೀತಿ ಆಯೋಗದ ಸಭೆಯಲ್ಲಿ ಕರ್ನಾಟಕದ ಜತೆಗಿನ ಮಹದಾಯಿ ನದಿ ನೀರು ಹಂಚಿಕೆ ವಿವಾದ ಕೆದಕಿದ್ದಾರೆ. 

ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನೀತಿ ಆಯೋಗದ ಸಭೆಯಲ್ಲಿ ಮಹದಾಯಿ ವಿಷಯ ಪ್ರಸ್ತಾಪಿಸಿ, ವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ ಎಂದು ತಿಳಿಸಿದೆ ಎಂದು ಹೇಳಿದ್ದಾರೆ.

'ಮಹದಾಯಿ ಕಾಮಗಾರಿ ಆರಂಭಿಸದಿದ್ದರೆ ಬೆಂಗಳೂರು ಚಲೋ'

ಮಹದಾಯಿ ನದಿಯನ್ನು ಕರ್ನಾಟಕ ತಿರುಗಿಸಿದರೆ ಗೋವಾ ಪರಿಸರ ಹಾಗೂ ಕುಡಿಯುವ ನೀರಿನ ಲಭ್ಯತೆ ಮೇಲೆ ಭಾರೀ ದುಷ್ಪರಿಣಾಮ ಬೀರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದೆ. ಈಗ ನೀರಿನ ಕೊರತೆ ಆಗದಿದ್ದರೂ ಮುಂದಿನ ದಿನಗಳಲ್ಲಿ ನೀರು ಕೊರತೆ ಆಗಲಿದೆ ಎಂದು ತಿಳಿಸಿದ್ದಾರೆ.