ಪೃಥ್ವಿನಾಥ್ ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರ ಬೊಲೆರೋ ಕಾರು ಅಪಘಾತಕ್ಕೀಡಾದ ಘಟನೆ ನಡದಿದೆ. ನಿಯಂತ್ರಣ ತಪ್ಪಿ ಕಾರು ಸರಯು ಕಾಲುವೆಗೆ ಉರುಳಿ ಬಿದ್ದಿದೆ. ಇದರ ಪರಿಣಾಮ 11 ಭಕ್ತರು ಮೃತಪಟ್ಟಿದ್ದಾರೆ.

ಗೊಂಡಾ (ಆ.-03) ಪೃಥ್ವಿನಾಥ್ ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರು ಅಪಘಾತಕ್ಕೀಡಾಗಿ ದುರಂತ ಸಂಭವಿಸಿದೆ. ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ತುಂಬಿ ಹರಿಯುತ್ತಿದ್ದ ಕಾಲುವೆಗೆ ಉರಳಿ ಬಿದ್ದ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ. ಸರಯು ಕಾಲುವೆಗೆ ಉರುಳಿದ ಬಿದ್ದು ಭೀಕರ ಅಪಘಾತ ಸಂಭವಿಸಿದೆ. 15 ಭಕ್ತರು ಈ ಕಾರಿನಲ್ಲಿ ಪ್ರಯಾಣಿಸಿದ್ದರೆ. ಈ ಘಟನೆಯಲ್ಲಿ 11 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಘಟನೆಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಇತ್ತ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಪೃಥ್ವಿನಾಥ ದೇವಸ್ಥಾನಕ್ಕೆ ತೆರಳುವಾಗ ಘಟನೆ

ಉತ್ತರ ಪ್ರದೇಶದ ಶಿಹಗಾಂವ್ ಗ್ರಾಮ ಕುಟುಂಬವೊಂದು ಖರ್ಗಪುರ್‌ದ ಪೃಥ್ವಿನಾಥ ದೇವಸ್ಥಾನ ಅತ್ಯಂತ ಪ್ರಸಿದ್ಧಿಯಾಗಿದೆ. ಶ್ರಾವಣ ಮಾಸದಲ್ಲ ಇಲ್ಲಿ ತೀರ್ಥ ಸ್ನಾನ ಮಾಡಲು ಸಾವಿರಾರು ಭಕ್ತರು ಆಗಮಿಸುತ್ತಾರೆ. ಪವಿತ್ರ ಮಾಸದಲ್ಲಿ ತೀರ್ಥಸ್ನಾನಕ್ಕಾಗಿ 15 ಭಕ್ತರು ಮಹೀಂದ್ರ ಬೊಲೆರೋ ಕಾರಿನಲ್ಲಿ ಪ್ರಯಾಣಿಸಿದ್ದಾರೆ. ಬೆಲ್ವಾ ಬಹುಟಾ ಬಳಿ ಕಾರು ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದಿದೆ.

11 ಭಕ್ತರು ಸಾವು, ನಾಲ್ವರ ಪರಿಸ್ಥಿತಿ ಗಂಭೀರ

ಚಾಲಕ ಸೇರಿ ಕಾರಿನಲ್ಲಿ ಒಟ್ಟು 16 ಮಂದಿ ಪ್ರಯಾಣ ಬೆಳೆಸಿದ್ದರು. ಕಾರು ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ. ತಕ್ಷದಲ್ಲೇ ರಕ್ಷಣಾ ಕಾರ್ಯಾಚರಣೆಗಳು ಆರಂಭಗೊಂಡಿದೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ನಾಲ್ವರನ್ನು ರಕ್ಷಿಸಿ ಆಸ್ಪತ್ರೆ ದಾಖಲಿಸಿದ್ದಾರೆ. ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ. 11 ಮಂದಿ ಮೃತಪಟ್ಟಿದ್ದಾರೆ.

ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

ಘಟನೆ ಕುರಿತು ಆಘಾತ ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮೃತರ ಕುಟುಬಂಕ್ಕೆ ತಲಾ 5 ಲಕ್ಷ ರೂಪಾಯಿ ಹರಿಹಾರ ಘೋಷಿಸಿದ್ದಾರೆ. ಇತ್ತ ಅಸ್ವಸ್ಥರಾಗಿರುವ ನಾಲ್ವರು ಭಕ್ತರಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ. ಸ್ಥಳೀಯ ಜಿಲ್ಲಾಡಳಿತ, ಪೊಲೀಸ್ ಹಾಗೂ ರಕ್ಷಣಾ ತಂಡ ಕಾರ್ಯಾಚರಣೆ ಮೂಲಕ ನಾಲ್ವರನ್ನು ರಕ್ಷಿಸಿತ್ತು.

Scroll to load tweet…

ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಗೊಂಡಾ ಕಾರು ಅಪಘಾತಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಗೊಂಡಾದಲ್ಲಿ ನಡೆದ ಆಪಘಾತದ ಮಾಹಿತಿ ತಿಳಿದಿ ತೀವ್ರ ನೋವುಂಟಾಗಿದೆ. ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ನನ್ನ ಸಂತಾಪಗಳು, ಇದೇ ವೇಳೆ ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಮೋದಿ ಹೇಳಿದ್ದಾರೆ.

ಘಟನಗೆ ಸೂಕ್ತ ಕಾರಣಗಳು ತಿಳಿದು ಬಂದಿಲ್ಲ. 15 ಮಂದಿ ಪ್ರಯಾಣಿಸುತ್ತಿದ್ದ ವೇಳೆ ಕಾರು ನಿಯಂತ್ರ ತಪ್ಪಿ ಕಾಲುವೆಗೆ ಉರುಳಿದೆ ಎಂಬ ಮಾಹಿತಿಗಳು ತಿಳಿದುಬಂದಿದೆ. ಸ್ಥಳೀಯ ಜಿಲ್ಲಾಡಳಿತ ಹಾಗೂ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.