Breaking: ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು: ನೂರಾರು ಜನರನ್ನು ಬಲಿ ತೆಗೆದುಕೊಂಡ 3 ದಿನಗಳಲ್ಲಿ ಮತ್ತೊಂದು ಅವಘಡ
ಬಾಲಸೋರ್ ಜಿಲ್ಲೆಯಲ್ಲಿ ಅಪಘಾತ ನಡೆದಿದ್ದ 3 ದಿನಗಳ ಬಳಿಕ ಮತ್ತೊಂದು ಅವಘಡ ಸಂಭವಿಸಿದೆ. ಈ ಬಾರಿ ಗೂಡ್ಸ್ ರೈಲು ಹಳಿ ತಪ್ಪಿದೆ. ಗೂಡ್ಸ್ ರೈಲಿನ 5 ಬೋಗಿಗಳು ಹಳಿ ತಪ್ಪಿವೆ ಎಂದು ತಿಳಿದುಬಂದಿದೆ.
ನವದೆಹಲಿ (ಜೂನ್ 5, 2023): ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಕನಿಷ್ಠ 275 ಜನ ಮೃತಪಟ್ಟಿದ್ದು, 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ತ್ರಿವಳಿ ರೈಲು ದುರಂತದಿಂದ ರೈಲ್ವೆ ಇಲಾಖೆ ಇನ್ನಷ್ಟೇ ಚೇತರಿಸಿಕೊಳ್ಳಬೇಕಿದೆ. ಆದರೆ, ಈ ನಡುವೆ ಒಡಿಶಾದಲ್ಲಿ ಮತ್ತೊಂದು ಅವಘಡ ನಡೆದಿದೆ. ಮತ್ತೊಂದು ರೈಲು ಹಳಿ ತಪ್ಪಿದೆ.
ಹೌದು, ಒಡಿಶಾದ ಬರ್ಗಢ ಜಿಲ್ಲೆಯಲ್ಲಿ ರೈಲು ಹಳಿ ತಪ್ಪಿದೆ. ಬಾಲಸೋರ್ ಜಿಲ್ಲೆಯಲ್ಲಿ ಅಪಘಾತ ನಡೆದಿದ್ದ 3 ದಿನಗಳ ಬಳಿಕ ಮತ್ತೊಂದು ಅವಘಡ ಸಂಭವಿಸಿದೆ. ಈ ಬಾರಿ ಗೂಡ್ಸ್ ರೈಲು ಹಳಿ ತಪ್ಪಿದೆ. ಗೂಡ್ಸ್ ರೈಲಿನ 5 ಬೋಗಿಗಳು ಹಳಿ ತಪ್ಪಿವೆ ಎಂದು ತಿಳಿದುಬಂದಿದೆ. ಅದರೆ, ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ.
ಇದನ್ನು ಓದಿ: ಮೋದಿ ಹಿಂಬದಿ ಮಿರರ್ ಮಾತ್ರ ನೋಡೋದ್ರಿಂದ ಕಾರು ಅಪಘಾತವಾಗಿದೆ: ಒಡಿಶಾ ರೈಲು ದುರಂತದ ಬಗ್ಗೆ ರಾಹುಲ್ ಗಾಂಧಿ ವ್ಯಾಖ್ಯಾನ
ಇನ್ನು, ಈ ಬಗ್ಗೆ ಮಾಹಿತಿ ನೀಡಿದ ರೈಲ್ವೆ ಇಲಾಖೆ, ಇದು ಖಾಸಗಿ ರೈಲು ಹಳಿಯಾಗಿದ್ದು, ಈ ಹಿನ್ನೆಲೆ ಇದರಿಂದ ರೈಲು ಸಂಚಾರಕ್ಕೆ ಯಾವುದೇ ಅಸ್ತವ್ಯಸ್ತವಾಗಿಲ್ಲ. ಇದು ಸಿಮೆಂಟ್ ಕಂಪನಿಯ ರೈಲು ಎನ್ನಲಾಗಿದ್ದು, ಅವರದ್ದೇ ಪ್ರತ್ಯೆಕ ಹಳಿಯಾಗಿದ್ದು, ಈ ಹಿನ್ನೆಲೆ ದೇಶದ ಇತರೆ ರೈಲು ಸಂಚಾರಕ್ಕೆ ಯಾವುದೇ ತೊಂದರೆಯಾಗಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದೆ.
ಸುಣ್ಣದ ಕಲ್ಲು ತೆಗೆದುಕೊಂಡು ಹೋಗುತ್ತಿದ್ದ ಗೂಡ್ಸ್ ರೈಲಿನ 5 ಬೋಗಿಗಳು ಹಳಿ ತಪ್ಪಿದೆ. ಡುಂಗ್ರಿ ಸುಣ್ಣದ ಗಣಿಗಳು ಮತ್ತು ಎಸಿಸಿ ಬರ್ಗಢ್‌ನ ಸಿಮೆಂಟ್ ಸ್ಥಾವರದ ನಡುವೆ ಖಾಸಗಿ ನ್ಯಾರೋ ಗೇಜ್ ರೈಲು ಮಾರ್ಗವಿದೆ. ಈ ಲೈನ್, ವ್ಯಾಗನ್‌ಗಳು ಮತ್ತು ಲೋಕೋಮೋಟಿವ್ ಎಲ್ಲವೂ ಖಾಸಗಿಯಾಗಿದ್ದು, ಭಾರತೀಯ ರೈಲ್ವೆ ವ್ಯವಸ್ಥೆಯೊಂದಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿಲ್ಲ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ವಿಧ್ವಂಸಕ ಕೃತ್ಯವೋ? ಅಪಘಾತವೋ?: ಒಡಿಶಾ ರೈಲು ದುರಂತದ ಹಿಂದಿನ ಸತ್ಯವೇನು..
ಇನ್ನು, ಈ ಘಟನೆಯಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಕೆಲವು ಬೋಗಿಗಳು ಮಾತ್ರ ಹಳಿತಪ್ಪಿವೆ ಎಂದೂ ವರದಿಯಾಗಿದೆ.
ತಮಿಳುನಾಡಲ್ಲೂ ಅಪಘಾತಕ್ಕೆ ಸಂಚು
ಮಿಳುನಾಡಲ್ಲೂ ಭೀಕರ ರೈಲು ದುರಂತ ಸಂಭವಿಸುವುದು ದೇವರ ಕೃಪೆಯಿಂದ ಮಿಸ್ ಆಗಿತ್ತು.. ರೈಲು ಅಪಘಾತವಾಗಲೆಂದು ರೈಲು ಹಳಿ ಮೇಲೆ ಟೈರ್ ಇಡಲಾಗಿತ್ತಾದರೂ ಲೋಕೋ ಪೈಲಟ್‌ಗಳ ಸಮಯ ಪ್ರಜ್ಞೆಯಿಂದ ಅಪಘಾತ ತಪ್ಪಿದೆ.
ಇದನ್ನೂ ಓದಿ: ರೈಲು ಹಳಿ ಮೇಲೆ ಟೈರ್ ಇಟ್ಟ ಕಿಡಿಗೇಡಿಗಳು: ತಮಿಳುನಾಡಲ್ಲಿ ತಪ್ಪಿದ ಮತ್ತೊಂದು ಭೀಕರ ರೈಲು ದುರಂತ!
ಹೌದು, ತಮಿಳುನಾಡಿನ ತಿರುಚ್ಚಿ ಬಳಿ ರೈಲ್ವೆ ಟ್ರ್ಯಾಕ್ ಮೇಲೆ ಇಡಲಾಗಿದ್ದ ಲಾರಿ ಟೈರ್‌ಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಆದರೆ, ಯಾರಿಗೂ ಗಾಯಗಳಾಗಿಲ್ಲ. ಇದಕ್ಕೆ ಕಾರಣ ಲೋಕೋ ಪೈಲಟ್‌ಗಳ ಸಮಯ ಪ್ರಜ್ಞೆ. ಕನ್ಯಾಕುಮಾರಿ-ಚೆನ್ನೈ ಎಗ್ಮೋರ್ ಎಕ್ಸ್‌ಪ್ರೆಸ್‌ನ ಲೋಕೋ ಪೈಲಟ್‌ಗಳು ಎರಡು ಟ್ರಕ್‌ಗಳ ಟೈರ್‌ಗಳನ್ನು ರೈಲ್ವೆ ಟ್ರ್ಯಾಕ್‌ನಲ್ಲಿ ಇರಿಸಿರುವುದನ್ನು ಗಮನಿಸಿದ್ದಾರೆ. ಈ ಹಿನ್ನೆಲೆ ಶನಿವಾರ ನಸುಕಿನಲ್ಲಿ ರೈಲನ್ನು ಕ್ರಮೇಣ ನಿಧಾನಗೊಳಿಸಿದ ನಂತರ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಎಂಜಿನ್ ಟೈರ್‌ಗೆ ಡಿಕ್ಕಿ ಹೊಡೆದಿದ್ದರೂ, ಅದು ನಿಧಾನ ವೇಗದಲ್ಲಿತ್ತು ಮತ್ತು ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಒಡಿಶಾ ರೈಲು ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ ವಿಶ್ವದ ದೊಡ್ಡಣ್ಣ ಜೋ ಬೈಡೆನ್, ಕ್ಸಿ ಜಿನ್‌ಪಿಂಗ್