ಸರ್ಕಾರ ಖಾಸಗಿ ಆಸ್ತಿ ಸ್ವಾಧೀನಪಡಿಸಿಕೊಳ್ಳುವಂತಿಲ್ಲ; 46 ವರ್ಷದ ಹಿಂದಿನ ತೀರ್ಪು ರದ್ದುಗೊಳಿಸಿದ ಸುಪ್ರೀಂ
ಖಾಸಗಿ ಆಸ್ತಿಯನ್ನು ರಾಜ್ಯ ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ಒಂಬತ್ತು ನ್ಯಾಯಾಧೀಶರ ಪೀಠ ತೀರ್ಪು ನೀಡಿದೆ. ಸಮುದಾಯದ ಒಳಿತಿಗಾಗಿ ಕೆಲವು ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಬಹುದಾದರೂ, ವ್ಯಕ್ತಿಯ ಒಡೆತನದ ಆಸ್ತಿಯನ್ನು ಸಾರ್ವಜನಿಕ ಆಸ್ತಿ ಎಂದು ಪರಿಗಣಿಸಲಾಗುವುದಿಲ್ಲ.
ನವದೆಹಲಿ: ಖಾಸಗಿ ಆಸ್ತಿಯನ್ನು ರಾಜ್ಯ ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ಒಂಬತ್ತು ನ್ಯಾಯಾಧೀಶರ ಸಂವಿಧಾನ ಪೀಠ ಹೇಳಿದೆ. ಯಾವುದೇ ಸರ್ಕಾರ ಖಾಸಗಿ ಆಸ್ತಿಯನ್ನು ಬಲವಂತವಾಗಿ ತೆಗೆದುಕೊಳ್ಳಲು ಬರಲ್ಲ. ಕೆಲವು ಖಾಸಗಿ ಆಸ್ತಿಗಳು ಸಮುದಾಯದ ಆಸ್ತಿಯಾಗಿರಬಹುದು. ಅದನ್ನು ಸಮಾಜದ ಒಳಿತಿಗಾಗಿ ಸರ್ಕಾರವು ಸ್ವಾಧೀನಪಡಿಸಿಕೊಳ್ಳಬಹುದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಒಂಬತ್ತು ನ್ಯಾಯಾಧೀಶರ ಪೀಠವು ಮಂಗಳವಾರ ತೀರ್ಪು ನೀಡಿದ್ದು, ಇದರ ಜೊತೆಯಲ್ಲಿಯೇ ಸಂವಿಧಾನದ 39 ಬಿ ವಿಧಿಯ ಅಡಿಯಲ್ಲಿ ವ್ಯಕ್ತಿಯ ಒಡೆತನದ ಖಾಸಗಿ ಆಸ್ತಿಯನ್ನು ಸಾರ್ವಜನಿಕ ಆಸ್ತಿ ಎಂದು ಪರಿಗಣಿಸಲಾಗುವುದಿಲ್ಲ ಎಂದು ಪೀಠ ಹೇಳಿದೆ. ನ್ಯಾಯಾಲಯ ತೀರ್ಪನ್ನು ಮೂರು ಭಾಗಗಳಾಗಿ ವಿಂಗಡಿಸಿದ್ದು, ಖಾಸಗಿ ಆಸ್ತಿಯು ಸಮುದಾಯದ ಸಮುದಾಯದ ಆಸ್ತಿಯಾಗಬಹುದು. ಆದರೆ ಒಬ್ಬ ವ್ಯಕ್ತಿಯ ಒಡೆತನದ ಪ್ರತಿಯೊಂದು ಆಸ್ತಿಯನ್ನು ಸಮುದಾಯದ ಆಸ್ತಿ ಎಂದು ಕರೆಯಲಾಗುವುದಿಲ್ಲಎಂದು ಹೇಳಿದೆ.
9 ನ್ಯಾಯಮೂರ್ತಿಗಳ ಸಂವಿಧಾನ ಪೀಠ ಈ ತೀರ್ಪಿನ ಮೂಲಕ 1978ರ ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪನ್ನು ರದ್ದುಗೊಳಿಸಿದೆ. ಸಂವಿಧಾನದ 39 (ಬಿ) ವ್ಯಾಪ್ತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. 1978ರಲ್ಲಿ ನ್ಯಾಯಮೂರ್ತಿ ಕೃಷ್ಣ ಅಯ್ಯರ್ ಅವರ ತೀರ್ಪು, ಖಾಸಗಿ ವ್ಯಕ್ತಿಗಳ ಎಲ್ಲಾ ಆಸ್ತಿಗಳನ್ನು ಸಮುದಾಯದ ಆಸ್ತಿ ಎಂದು ಕರೆಯಬಹುದು ಎಂದು ಅಭಿಪ್ರಾಯಪಟ್ಟಿತ್ತು
ವ್ಯಕ್ತಿಯ ಒಡೆತನದ ಪ್ರತಿಯೊಂದು ಸಂಪನ್ಮೂಲವನ್ನು ಸಮುದಾಯದ ವಸ್ತು ಸಂಪನ್ಮೂಲವೆಂದು ಪರಿಗಣಿಸಲಾಗುವುದಿಲ್ಲ ಎಂದು ನಾವು ನಂಬುತ್ತೇವೆ ಏಕೆಂದರೆ ಅದು ವಸ್ತು ಅಗತ್ಯಗಳಿಗೆ ಅರ್ಹವಾಗಿದೆ ಮುಖ್ಯನ್ಯಾಯಮೂರ್ತಿಗಳು ಹೇಳಿದ್ದಾರೆ.