ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಕಾರಣ ಕಠಿಣ ನಿರ್ಬಂಧಗಳು ಜಾರಿಯಾಗುತ್ತಿದೆ. ಶಾಲಾ-ಕಾಲೇಜು ಬಂದ್ ಆಗುತ್ತಿದೆ. ಪರೀಕ್ಷೆಗಳನ್ನು ಮುಂದೂಡಲಾಗುತ್ತಿದೆ. ಇದರ ನಡುವೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. NEET ಪರೀಕ್ಷೆ ಮುಂದೂಡಿದೆ.

ನವದೆಹಲಿ(ಏ.15): ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಕಾರಣ ಏಪ್ರಿಲ್ 18 ರಂದು ನಡೆಯಬೇಕಿದ್ದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ(NEET) ಮುಂದೂಡಲಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಸ್ಪಷ್ಟಪಡಡಿಸಿದ್ದಾರೆ.

ಬಿಗ್ ಇಂಪ್ಯಾಕ್ಟ್; ಕೊರೋನಾದಿಂದ ಮೃತಪಟ್ಟವರ ಶವಸಂಸ್ಕಾರ ಉಚಿತ

ಕೊರೋನಾ ವೈರಸ್ ಕಾರಣ ವಿದ್ಯಾರ್ಥಿಗಳ ಆರೋಗ್ಯ ಗಮನದಲ್ಲಿಟ್ಟುಕೊಂಡು ಕೇಂದ್ರ ಈ ನಿರ್ಧಾರ ತೆಗೆದುಕೊಂಡಿದೆ. ಕೊರೋನಾ ಪರಿಸ್ಥಿತಿ ನೋಡಿಕೊಂಡು ಮುಂದಿನ ದಿನಾಂಕವನ್ನು ನಿರ್ಧರಿಸಲಾಗುವುದು ಎಂದು ಹರ್ಷವರ್ಧನ್ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮೂಲಕವೂ ಮಾಹಿತಿ ಹಂಚಿಕೊಂಡಿದ್ದಾರೆ. 

Scroll to load tweet…

ಸರ್ವಪಕ್ಷ ಸಭೆ ಬಳಿಕ ಕರ್ನಾಟಕದಲ್ಲಿ ಲಾಕ್‌ಡೌನ್? ತಜ್ಞರ ಸಲಹೆ ತಂದಿಟ್ಟ ಆತಂಕ

ಕೊರೋನಾ ಕಾರಣ ಇದೀಗ NEET ಪರೀಕ್ಷೆಯನ್ನು 2ನೇ ಬಾರಿಗೆ ಮುಂದೂಡಲಾಗಿದೆ. ಜನವರಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಯನ್ನು ಏಪ್ರಿಲ್ 18ಕ್ಕೆ ಮುಂದೂಡಲಾಗಿತ್ತು. ಇದೀಗ 2ನೇ ಬಾರಿ ಮುಂದೂಡಲಾಗಿದೆ. 

ಭಾರತದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಇಂದು ಭಾರತದಲ್ಲಿ 2,00,739 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದೆ. ಇನ್ನು 1,038 ಸಾವು ಸಂಭವಿಸಿದೆ. ಕರ್ನಾಟಕದಲ್ಲಿ 14,738 ಕೊರೋನಾ ಪ್ರಕರಣ ದಾಖಲಾಗಿದೆ. ಇದು ಕರ್ನಾಟಕದಲ್ಲಿ ಅತ್ಯಂತ ಗರಿಷ್ಠ ಪ್ರಕರಣಗಳಾಗಿದೆ.