Asianet Suvarna News Asianet Suvarna News

ಗೌರ್ನರ್‌ಗಳು ಮಸೂದೆ ಇಟ್ಟು ಕೂರಬಾರದು: ನ್ಯಾ. ನಾಗರತ್ನ

ರಾಜ್ಯ ಸರ್ಕಾರಗಳು ಕಳುಹಿಸುವ ಮಸೂದೆಗಳಿಗೆ ಅಂಕಿತ ಹಾಕದೆ ತಮ್ಮಲ್ಲೇ ಇಟ್ಟುಕೊಳ್ಳುವ ರಾಜ್ಯಪಾಲರುಗಳ ನಡೆಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು ಪ್ರಶ್ನಿಸಿದ್ದಾರೆ. ರಾಜ್ಯಪಾಲರು ಸಂವಿಧಾನಬದ್ಧವಾಗಿ ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ.

governor should work according to the constitution There should be no delay in signing the bills Supreme Court Justice B V Nagaratna akb
Author
First Published Apr 1, 2024, 9:00 AM IST

ಹೈದರಾಬಾದ್‌: ರಾಜ್ಯ ಸರ್ಕಾರಗಳು ಕಳುಹಿಸುವ ಮಸೂದೆಗಳಿಗೆ ಅಂಕಿತ ಹಾಕದೆ ತಮ್ಮಲ್ಲೇ ಇಟ್ಟುಕೊಳ್ಳುವ ರಾಜ್ಯಪಾಲರುಗಳ ನಡೆಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು ಪ್ರಶ್ನಿಸಿದ್ದಾರೆ. ರಾಜ್ಯಪಾಲರು ಸಂವಿಧಾನಬದ್ಧವಾಗಿ ಕೆಲಸ ಮಾಡಬೇಕು. ವಿಧೇಯಕಗಳಿಗೆ ಅಂಕಿತ ಹಾಕುವುದಕ್ಕೆ ವಿಳಂಬ ಮಾಡಬಾರದು. ಸಂವಿಧಾನದಡಿ ಸೂಚಿಸಲಾಗಿರುವ ಕರ್ತವ್ಯವನ್ನು ನಿರ್ವಹಿಸುವಂತೆ ರಾಜ್ಯಪಾಲರಿಗೆ ಹೇಳುವುದಕ್ಕೆ ನ್ಯಾಯಾಲಯಗಳಿಗೆ ಮುಜುಗರವಾಗುತ್ತದೆ ಎಂದಿದ್ದಾರೆ.

ಹೈದರಾಬಾದ್‌ನ ನಾಲ್ಸರ್‌ ವಿಶ್ವವಿದ್ಯಾಲಯದಲ್ಲಿ ನ್ಯಾಯಾಲಯಗಳು ಹಾಗೂ ಸಂವಿಧಾನ ಕುರಿತ ಸಮ್ಮೇಳನದ ಐದನೇ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ ಮಾತನಾಡಿದ ಅವರು, ರಾಜ್ಯಪಾಲರ ಕಾರ್ಯನಿರ್ವಹಣೆಯನ್ನು ಸಾಂವಿಧಾನಿಕ ನ್ಯಾಯಾಲಯಗಳ ಮುಂದೆ ತರುವುದು ಆರೋಗ್ಯಯುತ ಬೆಳವಣಿಗೆಯಲ್ಲ. ರಾಜ್ಯಪಾಲರ ಹುದ್ದೆ ಗಂಭೀರ ಸಾಂವಿಧಾನಿಕ ಸ್ಥಾನ. ಸಂವಿಧಾನ ಬದ್ಧವಾಗಿ ರಾಜ್ಯಪಾಲರು ಕಾರ್ಯನಿರ್ವಹಣೆ ಮಾಡಬೇಕು. ತನ್ಮೂಲಕ ನ್ಯಾಯಾಲಯಗಳ ಮುಂದೆ ಇರುವ ಪ್ರಕರಣಗಳ ಸಂಖ್ಯೆಯನ್ನು ಕಡಿತಗೊಳಿಸಬೇಕು ಎಂದು ಸಲಹೆ ಮಾಡಿದ್ದಾರೆ. ತಮಿಳುನಾಡು ಹಾಗೂ ಪಂಜಾಬ್‌ ರಾಜ್ಯಪಾಲರು ರಾಜ್ಯ ಸರ್ಕಾರದ ಜತೆ ಸಂಘರ್ಷಕ್ಕೆ ಇಳಿದ ಹಿನ್ನೆಲೆಯಲ್ಲಿ ನಾಗರತ್ನ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಕುಟುಂಬ ಪಾಲನೆ ಮುಖ್ಯ, ಹಾಗಂತ ಮಹಿಳೆಯೊಬ್ಬಳೇ ಏಕೆ ತ್ಯಾಗ ಮಾಡಬೇಕು? ಜಸ್ಟೀಸ್‌ ನಾಗರತ್ನ ಪ್ರಶ್ನೆ

ಬೆಳಗಾವಿ ಗಡಿ ವಿವಾದ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾ.ಬಿವಿ ನಾಗರತ್ನ!

 

Follow Us:
Download App:
  • android
  • ios