ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಪ್ರಧಾನಿ ನರೇಂದ್ರ ಮೋದಿ ಜರನ್ನುದ್ದೇಶಿ ಭಾಷಣ ಮಾಡಿದ್ದಾರೆ. ದೆಹಲಿ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಹಿಮಾಚಲ ಪ್ರದೇಶ ಹಾಗೂ ಗುಜರಾತ್ ಜನತೆಗೆ ಧನ್ಯವಾದ ಹೇಳಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅತೀ ಕಡಿಮೆ ಅಂತರದಿಂದ ಸೋತಿದೆ. ಆದರೆ ಗುಜರಾತ್‌ನಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ ಎಂದಿದ್ದಾರೆ.
- Home
- News
- India News
- Election Results 2022:ಮೋದಿ ತವರಲ್ಲಿ ಬಿಜೆಪಿ ಕೈಹಿಡಿದ ಮತದಾರ, ಹಿಮಾಚಲದಲ್ಲಿ ಕೈಜಾರಿತು ಅಧಿಕಾರ
Election Results 2022:ಮೋದಿ ತವರಲ್ಲಿ ಬಿಜೆಪಿ ಕೈಹಿಡಿದ ಮತದಾರ, ಹಿಮಾಚಲದಲ್ಲಿ ಕೈಜಾರಿತು ಅಧಿಕಾರ

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಹೊಸ ದಾಖಲೆಯ ಗೆಲುವು ಕಂಡಿದೆ. ಈ ಹಿಂದಿನ ಎಲ್ಲಾ ದಾಖಲೆ ಮುರಿದು ಬರೋಬ್ಬರಿ 156 ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೇರಿದೆ. ಕಳೆದ 27 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ಮತ್ತೆ ಅಧಿಕಾರ ಉಳಿಸಿಕೊಂಡಿದೆ. ಆದರೆ ಕಾಂಗ್ರೆಸ್ ಹೀನಾಯ ಸ್ಛಿತಿಗೆ ತಲುಪಿದೆ. ಕಾಂಗ್ರೆಸ್ 17 ಸ್ಥಾನದಲ್ಲಿ ಗೆಲುವು ದಾಖಲಿಸಿದೆ. ಗುತರಾತ್ ವಿರೋಧ ಪಕ್ಷ ಸ್ಥಾನ ಪಡೆಯಲು ಕನಿಷ್ಠ 18 ಸ್ಥಾನ ಗೆಲ್ಲಬೇಕು. ಆದರೆ ಕಾಂಗ್ರೆಸ್ ಕಳಪೆ ನಿರ್ವಹಣೆ ತೋರಿದೆ. ಇತ್ತ ಆಮ್ ಆದ್ಮಿ ಪಾರ್ಟಿ ಗುಜರಾತ್‌ನಲ್ಲಿ ಖಾತೆ ತೆರೆದಿದೆ. 5 ಸ್ಥಾನ ಗೆಲ್ಲುವ ಮೂಲಕ ಹೊಸ ಇತಿಹಾಸ ರಚಿಸಿದೆ. ಇತ್ತ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಬಿಜೆಪಿಗೆ ತೀವ್ರ ಪೈಪೋಟಿ ನೀಡಿದ ಕಾಂಗ್ರೆಸ್ 5 ವರ್ಷಗಳ ಬಳಿಕ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 25 ಸ್ಥಾನ ಗೆದ್ದುಕೊಂಡಿದೆ. ಆದರೆ ಕಾಂಗ್ರೆಸ್ 40 ಸ್ಥಾನ ಗೆಲ್ಲುವ ಮೂಲಕ ಬಹುಮತದೊಂದಿಗೆ ಸರ್ಕಾರ ರಚಿಸಲು ಸಜ್ಜಾಗಿದೆ. ಆಮ್ ಆದ್ಮಿ ಪಾರ್ಟಿ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಎರಡುರಾಜ್ಯಗಳ ಚುನಾವಣೆಯ ಇಂಚಿಂತು ಮಾಹಿತಿ, ಗೆಲುವು ಸೋಲಿನ ವಿವರ, ಮತಗಳ ಅಂತರ, ಕ್ಷೇತ್ರಗಳ ವಿವರ, ರಾಜಕೀಯ ನಾಯಕರ ಹೇಳಿಕೆ ಸೇರಿದಂತೆ ಚುನಾವಣಾ ಅಖಾಡದ ಸಂಪೂರ್ಣ ವಿವರ ಇಲ್ಲಿದೆ.
ನರೇಂದ್ರನ ದಾಖಲೆ ಭೂಪೇಂದ್ರ ಮುರಿಯಲಿ, ಜನರ ಆಶೀರ್ವಾದಿಂದ ಹೊಸ ರೆಕಾರ್ಡ್ ಸೃಷ್ಟಿ
ಬಿಜೆಪಿ ಪ್ರಧಾನ ಕಚೇರಿಗೆ ಮೋದಿ ಆಗಮನ, ಬಿಜೆಪಿ ಸರ್ಕಾರ ರಚನೆ ಕುರಿತು ಸಭೆ
ದೆಹಲಿ ಬಿಜೆಪಿ ಪ್ರಧಾನ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಹಲವು ಪ್ರಮುಖರು ಈ ಸಭೆಗೆ ಆಗಮಿಸಿದ್ದಾರೆ. ಗುಜರಾತ್‌ನಲ್ಲಿ ಹೊಸ ಸರ್ಕಾರ ರಚನೆ ಹಾಗೂ ಹಿಮಾಚಲ ಪ್ರದೇಶದ ಸೋಲಿನ ಕುರಿತು ಚರ್ಚೆ ನಡೆಯಲಿದೆ.
ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆದಿಂದ ಹಿಮಾಚಲದಲ್ಲಿ ಗೆಲುವು, ಖರ್ಗೆ!
ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಹಿಮಾಚಲ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ನಡೆಸಿದ್ದರು. ಇದು ಗೆಲುವಿಗೆ ಕಾರಣವಾಗಿದೆ ಎಂದು ಖರ್ಗೆ
ಗುಜರಾತ್: ಮೋದಿ ಮಾಡಿದ್ದು 36 ರೋಡ್ ಶೋ, ರಾಹುಲ್ ಗಾಂಧಿ ಮಾಡಿದ್ದು 2!
ಮೋದಿ ರೋಡ್ ಶೋ ಮಾಡಿಯೇ ಗೆದ್ದರು, ಎಂಬುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಒಪ್ಪಿಕೊಂಡಿದ್ದಾರೆ. ಇದೇ ಕಾಂಗ್ರೆಸ್ ಸೋಲಿಗೆ ಕಾರಣವೆಂದೂ ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ. ಮೋದಿ 36 ರೋಡ್ ಶೋ ಮಾಡಿ, ಪ್ರತಿಯೊಬ್ಬ ಗುಜರಾತಿಯ ಮನ ಮುಟ್ಟಲು ಯಶಸ್ವಿಯಾದರೆ, ರಾಹುಲ್ ಗಾಂಧಿ ತಮ್ಮ ಭಾರತ್ ಜೋಡೋ ಯಾತ್ರೆಯ ಅಂಗವಾಗಿ ರಾಜ್‌ಕೋಟ್ ಮತ್ತು ಸೂರತ್‌ನಲ್ಲಿ ಮಾತ್ರ ರೋಡ್ ಶೋ ಮಾಡಿದ್ದರು.
ಅಷ್ಟಕ್ಕೂ ಕಾಂಗ್ರೆಸ್ ಸೋಲಿಗೆ ಮತ್ತೇನಿವೆ ಕಾರಣಗಳು?

ಹಿಮಾಚಲಪ್ರದೇಶದಲ್ಲಿ ಕಾಂಗ್ರೆಸ್ ಗೆಲುವು, ಪ್ರಿಯಾಂಕಾ ಶ್ರಮ ಎಂದ ಖರ್ಗೆ
ಹಿಮಾಚಲದಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆಯಲ್ಲಿ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ
ಆ ರಾಜ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮದ ಪಟ್ಟಿ ಕೊಟ್ಟಿದ್ದೆವು. ಅದಕ್ಕೆ ನಮಗೆ ಅಲ್ಲಿನ ಜನ ಒಗ್ಗೂಡಿಸಿ ಗೆಲ್ಲಿಸಿದ್ದಾರೆ. ಇದರಲ್ಲಿ ಹೆಚ್ಚಿನ ಪಾತ್ರ ಪ್ರಿಯಾಂಕಾ ವಾದ್ರಾ ಅವರದ್ದು ಇದೆ. ಸಾಕಷ್ಟು rally, ಸಮಾವೇಶ ಮಾಡಿದ್ದಾರೆ. ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ. ಭಾರತ್ ಜೋಡೋ ಯಾತ್ರೆ ಬಗ್ಗೆ ಹಿಮಾಚಲ ಜನ ಬಗ್ಗೆ ಮೆಚ್ವುಗೆ ವ್ಯಕ್ತ ಪಡಿಸಿದ್ರು. ನಾನು ಹೋದಾಗ ಕೂಡ ಉತ್ತಮ ಸ್ಪಂದನೆ ಸಿಕ್ಕಿತ್ತು. ಹೀಗಾಗಿ ಉತ್ತಮ ಬಹುಮತದಿಂದ ಪಕ್ಷಕ್ಕೆ ಗೆಲುವು ಬಂದಿದೆ, ಎಂದಿದ್ದಾರೆ.
ಗುಜರಾತ್ ಸೋಲು ಕಾರಣ ಸಾಕಷ್ಟು ಇವೆ. ಪಕ್ಷ ಇಷ್ಟು ಕೆಳ ಮಟ್ಟಕ್ಕೆ ಬರಲು ಕ್ಯಾಂಪೇನ್ ಮಾಡಿಲ್ಲ. ಕಳೆದ ಬಾರಿ ಅತೀ ಹೆಚ್ವು ಕ್ಷೇತ್ರಗಳಿಗೆ ಭೇಟಿ ಕೊಟ್ಟಿದ್ದೆವು. ಆದ್ರೆ ಹಲವು ಕಡೆ ಕಡಿಮೆ ಅಂತರದಲ್ಲಿ ಸೋತಿದ್ದೇವು. ಈ ಸಲ ಕೆಲವು ಪಕ್ಷ ಹೊಸದಾಗಿ ಬಂದು ನಮ್ಮ ಮತ ಕೆಡಿಸಿವೆ. ವೈಚಾರಿಕವಾಗಿ, ಸೈಂದಾಂತಿಕ ಕಾರಣಗಳೂ ಇವೆ. ಒಂದು ವರ್ಷದಿಂದ ಮೋದಿ ಪ್ರಚಾರ ಮಾಡಿದ್ದಾರೆ. ಮಣ್ಣಿನ ಮಗ ಅಂತಾ ಹೇಳಿದ್ದು, ದಾಖಲೆಯ ರೋಡ್ ಶೋ, ಮತದಾನದ ದಿನ ನಡೆದುಕೊಂಡು ಬಂದು ಮತದಾನ ಮಾಡಿದ ಗಿಮಿಕ್‌ಗಳು ನಮ್ಮ ಸೋಲಿಗೆ ಕಾರಣ. ಅವರ ಪ್ರಚಾರದ ಹಕ್ಕು ಅವರು ಮಾಡಿದ್ದಾರೆ. ಅಸ್ತಿತ್ವದಲ್ಲಿ ಇಲ್ಲದ ಪಕ್ಷ ಬಂದು ಮತಗಳ ವಿಭಜನೆ ಮಾಡಿದೆ, ಎಂದಿದ್ದಾರೆ.

ಗುಜರಾತ್ ಕೇಸರಿಮಯ, ಆಪ್ ಸಾಧನೆ ಏನೂ ಕಡಿಮೆ ಇಲ್ಲ
ನಿರೀಕ್ಷೆಯಂತೆ ಬಿಜೆಪಿ ಗುಜರಾತಿನಲ್ಲಿ ಗೆಲುವಿನ ನಗೆ ಬೀರಿದೆ. ಆಪ್ ನಿರೀಕ್ಷೆಯಷ್ಟು ಕ್ಷೇತ್ರಗಳನ್ನು ಗೆಲ್ಲುವಲ್ಲಿ ವಿಫಲವಾಗಿದ್ದರೂ, 5 ಕ್ಷೇತ್ರಗಳನ್ನು ಗೆದ್ದು, ಜಯದ ನಗೆ ಬೀರಿದೆ. ಆದರೆ, ಕಾಂಗ್ರೆಸ್ ಮಾತ್ರ 61 ಸ್ಥಾನಗಳನ್ನು ಕಳೆದು ಕೊಳ್ಳುವ ಮೂಲಕ ನೆಲ ಕಚ್ಚಿದೆ. ಆಪ್ ಬಂದು ಪಕ್ಷದ ಸ್ಥಾನಗಳನ್ನು ಕಸಿದುಕೊಂಡಿದೆ ಎಂದು ಗೋಳಿಡುತ್ತಿದೆ ಕೈ. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನೆಪದಲ್ಲಿ ಕೇವಲ ಎರಡು ರೋಡ್ ಶೋ ಹಮ್ಮಿಕೊಂಡಿದ್ದರೆ, ಪ್ರಧಾನಿ ನರೇಂದ್ರ ಮೋದಿ ನಿರಂತರವಾಗಿ 30ಕ್ಕೂ ಹೆಚ್ಚು ರೋಡ್ ಶೋ ಮಾಡಿದ್ದು, ಹಳ್ಳಿ ಹಳ್ಳಿಗೂ ಕಾಲಿಟ್ಟಿದ್ದು ಕಮಲದ ಗೆಲುವಿಗೆ ಮುಖ್ಯ ಕಾರಣವೆಂದು ವಿಶ್ಲೇಷಿಸಲಾಗುತ್ತಿದೆ.

ಗುಜರಾತ್‌ನಲ್ಲಿ ಬಿಜೆಪಿ ಗಳಿಸಿದ್ದು 58 ಸೀಟ್ಸ್, ಕೈ ಕಳೆದುಕೊಂಡಿದ್ದು 61 ಕ್ಷೇತ್ರಗಳು
1985ರಲ್ಲಿ ಕಾಂಗ್ರೆಸ್ ಗಳಿಸಿದ ಐತಿಹಾಸಿಕ ಜಯದ ಪುನಾರವರ್ತನೆಯನ್ನು 2022ರಲ್ಲಿ ಬಿಜೆಪಿ ಸಾಧಿಸಿದೆ. ಆಗ 148 ಕ್ಷೇತ್ರಗಳನ್ನು ಗೆದ್ದು ಗೆಲುವಿನ ನಗೆ ಬೀರಿದ್ದು, ಕಾಂಗ್ರೆಸ್ ಇದೀಗ ವಿರೋಧ ಪಕ್ಷದಲ್ಲಿ ಕೂರುವಷ್ಟು ಸ್ಥಾನಗಳನ್ನು ಗಳಿಸುವಲ್ಲಿಯೂ ವಿಫಲವಾಗುವಂತೆ ಕಾಣಿಸುತ್ತಿದೆ.

ಕಾಂಗ್ರೆಸ್‌ನ ಜಿಗ್ನೇಶ್ ಮೆವಾನಿಗೆ ಗೆಲವು
ವದ್ಗಮ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿಗ್ನೇಶ್ ಮೆವಾನಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಮಣಿಬಾಯ್ ವಾಘೇಲ್ ವಿರುದ್ಧ 1500 ಮತಗಳ ಅಂತರದಲ್ಲಿ ಜಯದ ನಗೆ ಬೀರಿದ್ದಾರೆ.

Gujarat Election Result 2022: ಮೋದಿ-ಅಮಿತ್ ಶಾ ತವರಲ್ಲಿ ಅರಳಿದ ಕಮಲ, ಆರೆಸ್ಸೆಸ್ ತಂತ್ರಗಾರಿಕೆಗೆ ಸಿಕ್ಕ ಫಲ!
ದೇಶವನ್ನೆಲ್ಲಾ ಗೆದ್ದು ತನ್ನ ನೆಲದಲ್ಲಿ ರಾಜ ಸೋತಂತ ಪರಿಸ್ಥಿತಿ 2017ರ ಗುಜರಾತ್ ವಿಧಾನಸಭೆ ಚುನಾವಣೆಯ ವೇಳೆ ನಡೆದಿತ್ತು. ಇಡೀ ದೇಶದಲ್ಲಿ ಮೋದಿ ಹಾಗೂ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೆ, 2017ರ ಗುಜರಾತ್ ಚುನಾವಣೆಯಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ತವರು ವಿಧಾನಸಭಾ ಕ್ಷೇತ್ರದಲ್ಲಿಯೇ ಬಿಜೆಪಿ ನೆಲಕಚ್ಚಿತ್ತು. ಆದರೆ, ಈ ಬಾರಿ ಆರೆಸ್ಸೆಸ್ ತಂತ್ರಗಾರಿಕೆಯೊಂದಿಗೆ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಸಾಧಿಸಿದೆ.
RSS ತಂತ್ರಗಾರಿಕೆ ಏನಿತ್ತು?
ಕಾಂಗ್ರೆಸ್ ಪರಿವರ್ತನಾ ಕ್ಲಾಕ್ ಬಂದ್, ಗುಜರಾತಿಗಳು ಬದಲಾಗಬೇಕೋ, ಕಾಂಗ್ರೆಸ್ ಬದಲಾಗಬೇಕೋ?
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೇಳ ಹೆಸರಿಲ್ಲದಂತಾಗಿದೆ. ಉತ್ತರ ಪ್ರದೇಶದಲ್ಲಿ ಮುಖಭಂಗವಾದ ಬಳಿಕ ಇದೀಗ ಗುಜರಾತ್‌ನಲ್ಲಾದ ಹಿನ್ನಡೆ ಕಾಂಗ್ರೆಸ್ ಪಕ್ಷದ ಬುಡವನ್ನೇ ಅಲುಗಾಡಿಸಿದೆ. ಈ ಫಲಿತಾಂಶ ಪ್ರಕಟವಾಗುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಕಚೇರಿಯಲ್ಲಿ ಹಾಕಿದ್ದ ಪರಿವರ್ತನ್ ಕ್ಲಾಕ್ ಬಂದ್ ಮಾಡಲಾಗಿದೆ.
ಏನಿದು ಪರವರ್ತನಾ ಕ್ಲಾಕ್?
ಆಡಳಿತ ವಿರೋಧಿ ಅಲೆಯೇ ಹಿಮಾಚಲ ಪ್ರದೇಶದಲ್ಲಿ ಸೋಲಿಗೆ ಕಾರಣ
ಈ ಬಾರಿಯೂ ಆಡಳಿತ ವಿರೋಧಿ ಅಲೆ ವರ್ಕೌಟ್ ಆದಂತಿದೆ. ಕಳೆದ ಕೆಲ ಚುನಾವಣೆಗಳಿಂದಲೂ ಹಿಮಾಚಲ ಪ್ರದೇಶ ಮತದಾರರು ಒಂದೇ ಪಕ್ಷದ ಪರ ವಾಲುವುದಿಲ್ಲ ಎನ್ನುವುದನ್ನು ಮತ್ತೆ ಸಾಬೀತುಪಡಿಸುತ್ತಿದ್ದಾರೆ.
ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ
ಡಿ.12ಕ್ಕೆ ಭೂಪೇಂದ್ರ ಪಟೇಲ್ ಗುಜರಾತ್ ಸಿಎಂ ಆಗಿ ಪ್ರಮಾಣವಚನ
ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿ ಭರ್ಜರಿ ವಿಜಯ ಖಚಿತವಾಗುತ್ತಿದ್ದ ಬೆನ್ನಲ್ಲಿಯೇ ಪಕ್ಷದಲ್ಲಿ ಮುಂದಿನ ಪ್ರಕ್ರಿಯೆಗಳು ಆರಂಭವಾಗಿದೆ. ಗುಜರಾತ್‌ನ ಒಟ್ಟು 182 ಸ್ಥಾನಗಳ ಪೈಕಿ 152ರಲ್ಲಿ ಬಿಜೆಪಿ ಶೇ.54ರಷ್ಟು ಮತ ಹಂಚಿಕೆಯೊಂದಿಗೆ ಮುಂದಿರುವ ಕಾರಣ ಗೆಲುವು ಕೂಡ ಸರಳ ಎನ್ನಲಾಗಿದೆ.
ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಕ್ರಿಕೆಟಿಗ ರವಿಂದ್ರ ಜಡೇಜಾ ಪತ್ನಿಯೊಂದಿಗೆ ರೋಡ್ ಶೋ
ಗುಜರಾತ್‌ನಲ್ಲಿ ಸತತ ಏಳನೇ ಬಾರಿಗೆ ಬಿಜೆಪಿ ಜಯಭೇರಿ ಬಾರಿಸಿದ್ದು, ದಾಖಲೆ ಕ್ಷೇತ್ರಗಳನ್ನು ಗೆಲ್ಲುತ್ತಿದೆ. 1985ರಲ್ಲಿ ಕಾಂಗ್ರೆಸ್ 149 ಕ್ಷೇತ್ರಗಳನ್ನು ಗೆದ್ದು ಸರಕಾರ ರಚಿಸಿದ ನಂತರ, ಇಷ್ಟು ಅದ್ಭುತ ಸಾಧಿಸುವಲ್ಲಿ ಕೇಸರಿ ಪಕ್ಷ ಇದೀಗ ಅದಕ್ಕಿಂತಲೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದೆ. ಜಾಮ್‌ನಗರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕ್ರಿಕೆಟಿಗ ರವೀಂದ್ರ ಜಡೇಜ ಪತ್ನಿ ರಿವಾಬಾ ಗೆಲುವಿನ ನಗೆ ಬೀರಿದ್ದಾರೆ. ಪತ್ನಿಯೊಂದಿಗೆ ಜಡೇಜಾ ರೋಡ್ ಶೋ ಮಾಡಿದ್ದಾರೆ.
Gujarat election results: ಸೋಲಿಗೆ ಹೆದರಿ ಸಾಯಲು ಯತ್ನಿಸಿದ ಕಾಂಗ್ರೆಸ್ ಅಭ್ಯರ್ಥಿ
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಮಲ ಪಾಳಯ ಭರ್ಜರಿ ಗೆಲುವಿನೊಂದಿಗೆ ಹೊಸ ದಾಖಲೆ ನಿರ್ಮಿಸಿದೆ. ಆದರೆ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಸೋಲಿಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುಜರಾತ್‌ನಲ್ಲಿ ನಡೆದಿದೆ.
ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ
ಶೀಘ್ರವೇ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುತ್ತೇನೆ: ಹಿಮಾಚಲ ಪ್ರದೇಶ ಸಿಎಂ
ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಬಹುಮತ ಸಾಧಿಸುವಲ್ಲಿ ವಿಫಲವಾಗಿದ್ದು, ಕಾಂಗ್ರೆಸ್‌ಗೆ ಮಣೆ ಹಾಕಿದ್ದಾರೆ ಮತದಾರರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಇನ್ನು ಸ್ವಲ್ಪ ಹೊತ್ತಲ್ಲೇ ರಾಜೀನಾಮೆ ನೀಡಲಿದ್ದಾರೆ.
ಗುಜರಾತ್ ಚುನಾವಣೆ: ಏಷ್ಯಾನೆಟ್ ನ್ಯೂಸ್ ಪ್ರೆಡಿಕ್ಷನ್ ಸರಿಯಾಯ್ತು!
ಗುಜರಾತ್ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಮತ್ತೆ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಈ ಗೆಲುವು ಹಾಗೂ ಬಿಜೆಪಿ ಕೈಹಿಡಿಯುವ ಮತಗಳು, ಜಾತಿಗಳ ಕುರಿತು ಏಷ್ಯಾನೆಟ್ ನ್ಯೂಸ್ ನೆಟ್‌ವರ್ಕ್ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ ವರದಿ ನೀಡಿತ್ತು. ಇದೀಗ ಏಷ್ಯಾನೆಟ್ ಸಮೀಕ್ಷೆ ನಿಜವಾಗಿದೆ.
ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
'ಗುಜರಾತ್ ಮಾಡೆಲ್'ಗೆ ಜನರಿಂದ ಅಧಿಕೃತ ಮುದ್ರೆ: ಪ್ರಹ್ಲಾದ್ ಜೋಶಿ
ನವದೆಹಲಿ: ಗುಜರಾತ್‌ನಲ್ಲಿ ಪಕ್ಷದ ಜಯ ಖಚಿತವಾಗುತ್ತಿದ್ದಂತೆ, ಬಿಜೆಪಿ ನಾಯಕರು ಈ ಗೆಲುವನ್ನು ಐತಿಹಾಸಿಕ ಎಂದು ಬಣ್ಣಿಸಲಾರಂಭಿಸಿದ್ದಾರೆ. ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು 'ಗುಜರಾತ್ ಮಾಡೆಲ್'ಗೆ ಸಂದ ಜಯ ಎಂದು ಬಣ್ಣಿಸಿದ್ಧಾರೆ.
ನವದೆಹಲಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಪ್ರಲ್ಹಾದ್ ಜೋಶಿ, 'ಗುಜರಾತ್ ಮಾಡೆಲ್'ಗೆ ಜನರಿಂದ ಅಧಿಕೃತ ಮುದ್ರೆ ದೊರೆತಿದೆ. ಈ ಐತಿಹಾಸಿಕ ಗೆಲುವನ್ನು ನಮಗೆ ವರದಾನವಾಗಿ ನೀಡಿರುವ ಗುಜರಾತ್ ಜನರಿಗೆ ನಾನು ತುಂಬು ಹೃದಯದ ಧನ್ಯವಾದ ಅರ್ಪಿಸುತ್ತೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವ, ದೇಶದ ಅಭಿವೃದ್ಧಿಗೆ ಬಿಜೆಪಿ ಪ್ರಸ್ತುತಪಡಿಸಿದ 'ಗುಜರಾತ್ ಮಾಡೆಲ್'ನ್ನು ಜನರು ಮೆಚ್ಚಿಕೊಂಡಿದ್ದಾರೆ. ಇದೇ ಕಾರಣಕ್ಕೆ 27 ವರ್ಷಗಳ ಬಳಿಕ ಬಿಜೆಪಿ ಗುಜರಾತ್‌ನಲ್ಲಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ ಎಂಬ ವಿಶ್ಲೇಷಣೆಗಳೆಲ್ಲಾ ತಲೆ ಕೆಳಗಾಗಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.
ಅದೇ ರೀತಿ ಹಿಮಾಚಲ ಪ್ರದೇಶದಲ್ಲೂ ಬಿಜೆಪಿ ಉತ್ತಮ ಪ್ರದರ್ಶನ ತೋರುತ್ತಿದ್ದು ಅಲ್ಲಿಯೂ ಪಕ್ಷ ಸ್ಪಷ್ಟ ಬಹುಮತ ಗಳಿಸುವ ನಿರೀಕ್ಷೆ ಇದೆ. ಏನೇ ಆದರೂ ಅಂತಿಮ ಫಲಿತಾಂಶ ಬಂದ ಬಳಿಕಷ್ಟೇ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಜೋಶಿ ಸ್ಪಷ್ಟಪಡಿಸಿದರು.
ದೇಶದಲ್ಲಿ ಈಗ ಆಡಳಿತ ಪರ ಟ್ರೆಂಡ್ ಇದೆ: ಸಿಎಂ ಬೊಮ್ಮಾಯಿ
ದೇಶದಲ್ಲಿ ಈಗ ಆಡಳಿತ ಪರ ಟ್ರೆಂಡ್ ಇದೆ: ಸಿಎಂ ಬೊಮ್ಮಾಯಿ
ಮೈನ್‌ಪುರಿ ಉಪಚುನಾವಣೆಯಲ್ಲಿ ಎಸ್‌ಪಿಯದ್ದೇ ಕಾರುಬಾರು: ‘ಸೊಸೆ’ ಡಿಂಪಲ್ ಯಾದವ್ ಎದುರು ಮಂಕಾದ ಕಮಲ..!
ಸಮಾಜವಾದಿ ಪಕ್ಷದ ಭದ್ರಕೋಟೆಯಲ್ಲಿ ಡಿಂಪಲ್ ಯಾದವ್ ಭಾರಿ ಮುನ್ನಡೆಯಲ್ಲಿದ್ದು, ಬಿಜೆಪಿ ಅಭ್ಯರ್ಥಿ ಎರಡನೇ ಸ್ಥಾನದಲ್ಲಿದ್ದರೂ ತೀರಾ ಹಿಂದುಳಿದಿದ್ದಾರೆ.
ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ