ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ ಬೆನ್ನಲ್ಲೇ ಬಿಜೆಪಿಗೆ ಹಿನ್ನಡೆಯಾಗಿದೆ. ಗುಜರಾತ್ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ರಾಜೀನಾಮೆ ಸಲ್ಲಿಸಿದ್ದಾರೆ. ದಿಢೀರ್ ಬೆಳವಣಿಗೆ ಪ್ರಧಾನಿ ಮೋದಿ ತವರಿನ ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದೆ
ಅಹಮ್ಮದಾಬಾದ್(ಆ.05) ಲೋಕಸಭಾ ಚುನಾವಣೆಗೆ ತಯಾರಿಗಳು ಆರಂಭಗೊಂಡಿದೆ. ಒಂದೆಡೆ I-N-D-I-A ಒಕ್ಕೂಟ ಸತತ ಸಭೆಗಳನ್ನು ನಡೆಸಿ ರಣತಂತ್ರ ರೂಪಿಸುತ್ತಿದೆ. ಇತ್ತ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟ ಚುನಾವಣೆ ಗೆಲ್ಲಲು ಕಸರತ್ತು ನಡೆಸುತ್ತಿದೆ. ಈ ಬೆಳವಣಿಗೆ ನಡೆವೆಯೆ ಪ್ರಧಾನಿ ಮೋದಿ ತವರು, ಬಿಜೆಪಿಯ ಭದ್ರಕೋಟೆ ಎಂದೇ ಗುರುತಿಸಿಕೊಂಡಿರುವ ಗುಜರಾತ್‌ನಲ್ಲಿ ಪಕ್ಷದಲ್ಲಿ ಮಹತ್ತರ ಬದಲಾವಣೆಯಾಗಿದೆ. ಗುಜರಾತ್ ಬಿಜೆಪಿಯ ಪ್ರಧಾನ ಕಾರ್ಯದರ್ಸಿ ಪ್ರದೀಪ್ ಸಿನ್ಹ ವಘೇಲಾ ರಾಜೀನಾಮೆ ನೀಡಿದ್ದಾರೆ.
ಗುಜರಾತ್ ಬಿಜೆಪಿ ಮಹಾ ಜನ ಸಂಪರ್ಕ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಸುತ್ತಿದೆ. ಹಲವು ಜಿಲ್ಲೆಗಳಲ್ಲಿ ಮಹಾ ಜನ ಸಂಪರ್ಕ ಅಭಿಯಾನ ನಡೆಸುತ್ತಿದೆ. ಈ ಮೂಲಕ ಲೋಕಸಭಾ ಚುನಾವಣೆಗೂ ಮುನ್ನ ಮತಗಳನ್ನು ಭದ್ರಪಡಿಸಲು ಯತ್ನಿಸುತ್ತಿದೆ.ಇದೇ ವೇಳೆ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ವಿರುದ್ಧ ಬಂಡಾಯ ಎದ್ದಿರುವ ಬೆನ್ನಲ್ಲೇ ಇದೀಗ ರಾಜೀನಾಮೆ ಬೆಳವಣಿಗೆ ಬಿಜೆಪಿಗೆ ಹಿನ್ನಡೆ ತಂದಿದೆ.
I.N.D.I.A ಮೈತ್ರಿಯಲ್ಲಿ ಆಮ್ ಆದ್ಮಿ ನರಿ ಇದ್ದಂತೆ, ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ವಾಗ್ದಾಳಿ!
2016, ಆಗಸ್ಟ್ 10 ರಂದು ಗುಜರಾತ್ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ವಹಿಸಿಕೊಂಡ ವಘೆಲಾ ಕಳೆದ ವಿಧಾನಸಭಾ ಚುನಾವಣೆ ಗೆಲುವಿನಲ್ಲಿ ಪ್ರಮುಕ ಪಾತ್ರ ನಿರ್ವಹಿಸಿದ್ದರು. ಇದೀಗ ರಾಜೀಮೆಗೆ ನಿಖರ ಕಾರಣ ಬಹಿರಂಗವಾಗಿಲ್ಲ. ಕೆಲ ದಿನಗಳ ಹಿಂದೇ ರಾಜೀನಾಮೆ ನೀಡಿದ್ದರು. ಇದೀಗ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ವಘೆಲಾ ಗುಡ್ ಬೈ ಹೇಳಿದ್ದಾರೆ.
ಸಿಆರ್ ಪಾಟೀಲ್ ವಿರುದ್ಧ ಧ್ವನಿ ಎತ್ತಿದ ಕಾರಣ ಸೂರತ್‌ನ ಕೆಲ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದರು. ಬಿಜೆಪಿ ನಾಯಕ ಜಿನೇಂದ್ರ ಶಾರನ್ನು ಸೂರತ್ ಪೊಲೀಸರು ಬಂಧಿಸಿದ್ದರು. ಈ ಬೆಳವಣಿಗೆ ಬಿಜೆಪಿ ಪಕ್ಷದೊಳಗೆ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಇದೀದ ವಘೆಲಾ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಇದೆ. I-N-D-I-A ಒಕ್ಕೂಟವಾಗಿ
ಲೋಕಸಭೆಗೆ ಈಗಲೇ ಸಾರ್ವತ್ರಿಕ ಚುನಾವಣೆ ನಡೆದರೆ 318 ಸ್ಥಾನಗಳನ್ನು ಗೆದ್ದು ಆಡಳಿತಾರೂಢ ಎನ್‌ಡಿಎ ಮಿತ್ರಕೂಟ ಸತತ ಮೂರನೆಯ ಬಾರಿಗೆ ಅಧಿಕಾರಕ್ಕೇರಲಿದೆ ಎಂದು ಟೀವಿ ವಾಹಿನಿಯೊಂದರ ಸಮೀಕ್ಷೆ ಭವಿಷ್ಯ ನುಡಿದಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ‘ಇಂಡಿಯಾ’ ಹೆಸರಿನಲ್ಲಿ ಮೈತ್ರಿಕೂಟ ಮಾಡಿಕೊಂಡಿದ್ದರೂ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಸದ್ಯಕ್ಕೆ ಸಾಧ್ಯವಿಲ್ಲ ಎಂಬಂತೆ ಕಂಡುಬರುತ್ತಿದೆ ಎಂದು ‘ಇಂಡಿಯಾ ಟೀವಿ-ಸಿಎನ್‌ಎಕ್ಸ್’ ಸಮೀಕ್ಷೆ ಹೇಳಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಐತಿಹಾಸಿಕ 303 ಸ್ಥಾನ ಗೆದ್ದು ಬೀಗಿದ್ದ ಬಿಜೆಪಿಯ ಸೀಟು ಗಳಿಕೆ ಈಗ ಚುನಾವಣೆ ನಡೆದರೆ 290ಕ್ಕೆ ಕುಸಿತ ಕಾಣಲಿದೆ. 353 ಸ್ಥಾನ ಗಳಿಸಿದ್ದ ಎನ್‌ಡಿಎ ಕೂಟ 318 ಸ್ಥಾನಗಳನ್ನು ಸಂಪಾದಿಸಲಿದೆ. 543 ಸದಸ್ಯ ಬಲದ ಲೋಕಸಭೆಯಲ್ಲಿ ಬಹುಮತಕ್ಕೆ 272 ಸ್ಥಾನಗಳು ಬೇಕು. ಬಿಜೆಪಿ 290 ಸ್ಥಾನ ಗಳಿಸುವುದರಿಂದ ಏಕಾಂಗಿಯಾಗಿ 3ನೇ ಬಾರಿ ಅಧಿಕಾರಕ್ಕೇರಲು ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಸಮೀಕ್ಷೆ ತಿಳಿಸಿದೆ.
