ಮೋದಿ ಖಾಸಗಿ ಕಾರ್ಯದರ್ಶಿಯಾಗಿ  IAS ಅಧಿಕಾರಿ ಹಾರ್ದಿಕ್ ಸತೀಶ್ಚಂದ್ರ ಶಾ ನೇಮಕ| 2010ನೇ ಬ್ಯಾಚ್‌ನ ಗುಜರಾತ್ ಕೇಡರ್‌ನ ಐಎಎಸ್ ಅಧಿಕಾರಿ ಶಾ

ನವದೆಹಲಿ(ಜು.31): ಪ್ರಧಾನ ಮಂತ್ರಿ ಕಾರ್ಯಾಲಯದಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆಸಲ್ಲಿಸುತ್ತಿದ್ದ ಹಾರ್ದಿಕ್ ಸತೀಶ್ಚಂದ್ರ ಶಾ, ಪಿಎಂ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಶಾರವರು 2010ನೇ ಬ್ಯಾಚ್‌ನ ಗುಜರಾತ್ ಕೇಡರ್‌ನ ಐಎಎಸ್ ಅಧಿಕಾರಿ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಪ್ಪು- ಬಿಳುಪು ಡಿಸ್ಕ್ರಿಮಿನೇಶನ್ ಭಾರತದಲ್ಲೇಕಿದೆ? ಸರಿ ಉತ್ತರ ಕೊಟ್ಟು IAS ಆದ ಹಳ್ಳಿ ಹುಡುಗ

ಪ್ರಧಾನ ಮಂತ್ರಿ ಕಚೇರಿಯಲ್ಲಿ ಉಪ ಕಾರ್ಯದರ್ಶಿಯಾಗಿದ್ದ ಶಾರವರನ್ನು ಕೋ- ಟರ್ಮಿನಸ್ ಆಧಾರದ್ಲಿ ಪ್ರಧಾನ ಮಂತ್ರಿಯ ಖಾಸಗಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಇನ್ನು 2018ರಲ್ಲಿ ಪ್ರಧಾನ ಮಂತ್ರಿ ಕಚೇರಿಗೆ ಉಪ ಕಾರ್ಯದರ್ಶಿಯಾಗಿ ನೇಮಕಗೊಳ್ಳುವುದಕ್ಕೂ ಮೊದಲು, ಹಾರ್ದಿಕ್ ಶಾ ಪರಿಸರ, ಅರಣ್ಯ ಮತ್ತು ಹವಾಮಾನ ಇಲಾಖೆ ಸಚಿವ ಪ್ರಕಾಶ್ ಜಾವ್ಡೇಕರ್‌ರವರ ಖಾಸಗಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.