ಗುಜರಾತ್‌ನ ಪಾವಗಡ ಬೆಟ್ಟದಲ್ಲಿ ರೋಪ್‌ವೇ ಟ್ರಾಲಿ ಕೇಬಲ್ ತುಂಡಾಗಿ ಆರು ಜನರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ದುರಂತದ ಕುರಿತು ತನಿಖೆ ಆರಂಭವಾಗಿದೆ.

ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಪಾವಗಡ ಬೆಟ್ಟದ ದೇವಾಲಯದಲ್ಲಿ ಶನಿವಾರ ಭೀಕರ ರೋಪ್‌ವೇ ಅಪಘಾತ ಸಂಭವಿಸಿದ್ದು, ಆರು ಜನರು ಸಾವನ್ನಪ್ಪಿದ್ದಾರೆ. ನಿರ್ಮಾಣ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಟ್ರಾಲಿಯ ಕೇಬಲ್ ವೈರ್ ತುಂಡಾಗಿ ಮುರಿದು ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪಂಚಮಹಲ್ ಡಿಎಸ್‌ಪಿ ಡಾ. ಹರ್ಷ ದುಧತ್ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪೊಲೀಸ್ ವರಿಷ್ಠಾಧಿಕಾರಿ ಹರೇಶ್ ದುಧತ್ ಆರು ಸಾವುಗಳನ್ನು ದೃಢಪಡಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ತಂಡಗಳು ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.

Scroll to load tweet…

ಪಾವಗಡ ಬೆಟ್ಟದ ದೇವಾಲಯವು ಸುಮಾರು 800 ಮೀಟರ್ ಎತ್ತರದಲ್ಲಿದ್ದು, ಯಾತ್ರಿಕರು ಶಿಖರವನ್ನು ತಲುಪಲು ಸುಮಾರು 2,000 ಮೆಟ್ಟಿಲುಗಳನ್ನು ಹತ್ತುವುದು ಅಥವಾ ಕೇಬಲ್ ಕಾರುಗಳನ್ನು ಬಳಸುವುದು ಸಾಮಾನ್ಯ. ಆದರೆ, ಪ್ರತಿಕೂಲ ಹವಾಮಾನದಿಂದಾಗಿ ಶನಿವಾರ ಬೆಳಿಗ್ಗೆಯಿಂದ ಸಾರ್ವಜನಿಕರ ಬಳಕೆಗೆ ರೋಪ್‌ವೇಯನ್ನು ಮುಚ್ಚಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ದುರಂತದ ಕುರಿತು ತನಿಖೆ ಆರಂಭವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ.