ಮುಂಬೈ (ಡಿ.11): 2021ರ ಹಜ್‌ ಯಾತ್ರೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದ್ದು, ಜನವರಿ 1ರ ವರೆಗೂ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ ಎಂದು ಕೇಂದ್ರ ಹಜ್‌ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿ ಹೇಳಿದ್ದಾರೆ. 

ಮುಂಬೈನಲ್ಲಿ ನಡೆದ ಭಾರತೀಯ ಹಜ್‌ ಸಮಿತಿಯ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.

ಹಜ್‌ ಯಾತ್ರೆಗೆ ಕೂಡಿಟ್ಟ ಹಣದಿಂದ ಬಡವರ ಹೊಟ್ಟೆ ತುಂಬಿಸಿದ ಅಬ್ದುಲ್..!

 ಇದೇ ವೇಳೆ ಹಜ್‌ ವೆಚ್ಚ ಈ ಹಿಂದೆ ಅಂದಾಜಿಸಿದ್ದಕ್ಕಿಂತ ಇಳಿಕೆಯಾಗಿದ್ದು, ಬೆಂಗಳೂರಿನಿಂದ ಹೊರಡುವವರಿಗೆ .3.6 ಲಕ್ಷ ನಿಗದಿ ಮಾಡಲಾಗಿದೆ. ಅಲ್ಲದೇ ಬಾರಿಯ ಸೌದಿ ಅರೇಬಿಯಾ ಹಾಗೂ ಭಾರತ ಸರ್ಕಾರ ರಚಿಸಿರುವ ಕೋವಿಡ್‌ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಹೇಳಿದ್ದಾರೆ.