ಭಾರತ್ ಜೋಡೋ ಯಾತ್ರೆ ಜತೆ ನನ್ನ ಇನ್ನಿಂಗ್ಸ್‌ ಅಂತ್ಯವಾಗ್ಬಹುದು: ರಾಜಕೀಯ ನಿವೃತ್ತಿ ಸುಳಿವು ನೀಡಿದ ಸೋನಿಯಾ..!

ನನ್ನ ಇನ್ನಿಂಗ್ಸ್ ಭಾರತ್ ಜೋಡೋ ಯಾತ್ರೆಯೊಂದಿಗೆ ಮುಕ್ತಾಯಗೊಳ್ಳಬಹುದು. ಯಾತ್ರೆಯು ಒಂದು ಮಹತ್ವದ ತಿರುವು ನೀಡಿದೆ. ಭಾರತದ ಜನರು ಅಗಾಧವಾಗಿ ಸಾಮರಸ್ಯ, ಸಹಿಷ್ಣುತೆ ಮತ್ತು ಸಮಾನತೆಯನ್ನು ಬಯಸುತ್ತಾರೆ ಎಂಬುದನ್ನು ಇದು ಸಾಬೀತುಪಡಿಸಿದೆ ಎಂದು ಸೋನಿಯಾ ಗಾಂಧಿ ಹೇಳಿದರು. 

happy my innings could conclude with bharat jodo yatra sonia gandhi ash

ನಯಾ ರಾಯ್‌ಪುರ (ಫೆಬ್ರವರಿ 25, 2023): ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶನಿವಾರ ರಾಜಕೀಯದಿಂದ ನಿವೃತ್ತಿಯಾಗುವ ಸುಳಿವು ನೀಡಿದ್ದಾರೆ. ಭಾರತ್ ಜೋಡೋ ಯಾತ್ರೆಯೊಂದಿಗೆ ತಮ್ಮ ಇನ್ನಿಂಗ್ಸ್ ಮುಕ್ತಾಯವಾಗಬಹುದು ಎಂದು ಸೋನಿಯಾ ಗಾಂಧಿ ಹೇಳಿದ್ದು, ಅಲ್ಲದೆ ಈ ಯಾತ್ರೆ ಪಕ್ಷಕ್ಕೆ ತಿರುವು ಎಂದು ಬಣ್ಣಿಸಿದ್ದಾರೆ. 

ಛತ್ತೀಸ್‌ಗಢದ ರಾಜಧಾನಿ ನಯಾ ರಾಯ್‌ಪುರದಲ್ಲಿ ಕಾಂಗ್ರೆಸ್‌ ಪಕ್ಷದ 3 ದಿನಗಳ ಮಹಾಧಿವೇಶನದ 2ನೇ ದಿನದಂದು 15,000 ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಸೋನಿಯಾ ಗಾಂಧಿ, ನನಗೆ ಅತ್ಯಂತ ಸಂತೋಷಕರ ಸಂಗತಿಯೆಂದರೆ, ನನ್ನ ಇನ್ನಿಂಗ್ಸ್ ಭಾರತ್ ಜೋಡೋ ಯಾತ್ರೆಯೊಂದಿಗೆ ಮುಕ್ತಾಯಗೊಳ್ಳಬಹುದು. ಯಾತ್ರೆಯು ಒಂದು ಮಹತ್ವದ ತಿರುವು ನೀಡಿದೆ. ಭಾರತದ ಜನರು ಅಗಾಧವಾಗಿ ಸಾಮರಸ್ಯ, ಸಹಿಷ್ಣುತೆ ಮತ್ತು ಸಮಾನತೆಯನ್ನು ಬಯಸುತ್ತಾರೆ ಎಂಬುದನ್ನು ಇದು ಸಾಬೀತುಪಡಿಸಿದೆ ಎಂದು ಹೇಳಿದರು.

ಇದನ್ನು ಓದಿ: ಸಿಡಬ್ಲ್ಯುಸಿಗೆ ಸದಸ್ಯರ ನೇಮಕದ ಪರಮಾಧಿಕಾರ ಖರ್ಗೆ ಹೆಗಲಿಗೆ: ಸೋನಿಯಾ, ರಾಹುಲ್‌ಗೆ ಕಾಯಂ ಸದಸ್ಯತ್ವ

2004 ಮತ್ತು 2009 ರಲ್ಲಿ ಡಾ. ಮನಮೋಹನ್ ಸಿಂಗ್ ಅವರ ಸಮರ್ಥ ನಾಯಕತ್ವದ ಜೊತೆಗೆ ನಮ್ಮ ಗೆಲುವು ನನಗೆ ವೈಯಕ್ತಿಕ ತೃಪ್ತಿ ನೀಡಿತು. ಆದರೆ ನನಗೆ ಹೆಚ್ಚು ತೃಪ್ತಿ ನೀಡಿದ್ದು, ನನ್ನ ಇನ್ನಿಂಗ್ಸ್ ಭಾರತ್ ಜೋಡೋ ಯಾತ್ರೆಯೊಂದಿಗೆ ಮುಕ್ತಾಯಗೊಳ್ಳಬಹುದು, ಇದು ಕಾಂಗ್ರೆಸ್‌ಗೆ ಮಹತ್ವದ ತಿರುವಾಗಿದೆ ಎಂದು ನಯಾ ರಾಯ್‌ಪುರದಲ್ಲಿ ಕಾಂಗ್ರೆಸ್ ಸಂಸದೆ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ಬಳಿಕ, ಇದು ಕಾಂಗ್ರೆಸ್ ಮತ್ತು ಇಡೀ ದೇಶಕ್ಕೆ ಸವಾಲಿನ ಸಮಯ. ಬಿಜೆಪಿ-ಆರ್‌ಎಸ್‌ಎಸ್ ದೇಶದ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡು ಬುಡಮೇಲು ಮಾಡಿದೆ. ಇದು ಕೆಲವು ಉದ್ಯಮಿಗಳಿಗೆ ಒಲವು ತೋರುವ ಮೂಲಕ ಆರ್ಥಿಕ ವಿನಾಶಕ್ಕೆ ಕಾರಣವಾಗಿದೆ ಎಂದೂ  ಛತ್ತೀಸ್‌ಗಢದ ರಾಯ್‌ಪುರದಲ್ಲಿ ಕಾಂಗ್ರೆಸ್ ಸಂಸದೆ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಬಿಜೆಪಿ ವಿರುದ್ಧ ಟೀಕೆ ಮಾಡಿದ್ದಾರೆ.

ಕಾಂಗ್ರೆಸ್‌ನ 85 ನೇ ಸರ್ವಸದಸ್ಯರ ಅಧಿವೇಶನವು ಶುಕ್ರವಾರ ಪ್ರಾರಂಭವಾಗಿದ್ದು, 3 ದಿನಗಳ ಈ ಎಐಸಿಸಿ ಮಹಾಧಿವೇಶನದಲ್ಲಿ 2024 ರ ಲೋಕಸಭೆ ಚುನಾವಣೆಗೆ ಇತರ ವಿರೋಧ ಪಕ್ಷಗಳೊಂದಿಗೆ ಚುನಾವಣಾ ಮೈತ್ರಿ ಸೇರಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ.

ಬೆಂಬಲಿಗರನ್ನು ಒಟ್ಟುಗೂಡಿಸುವ ಮತ್ತು ಮತದಾರರೊಂದಿಗೆ ಪಕ್ಷದ ಸಂಪರ್ಕ ಕಡಿತಗೊಂಡಿರುವುದನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ರಾಹುಲ್ ಗಾಂಧಿ ನೇತೃತ್ವದ ಬೃಹತ್ ದೇಶಾದ್ಯಂತದ ಕಾಲ್ನಡಿಗೆಯ ಭಾರತ್ ಜೋಡೋ ಯಾತ್ರೆಯ ಹಿನ್ನೆಲೆಯಲ್ಲಿ ಎಐಸಿಸಿ ಮಹಾಧಿವೇಶನ ನಡೆಸಲಾಗುತ್ತಿದೆ. ಈ ಅಧಿವೇಶನದ ಮೊದಲ ದಿನದಂದು, ಕಾಂಗ್ರೆಸ್ ಉಸ್ತುವಾರಿ ಸಮಿತಿಯು ಪಕ್ಷದ ಉನ್ನತ ಮಂಡಳಿಯಾದ ಕಾರ್ಯಕಾರಿ ಸಮಿತಿಗೆ ಚುನಾವಣೆ ನಡೆಸದಿರಲು ನಿರ್ಧರಿಸಿತು ಮತ್ತು ಅದರ ಸದಸ್ಯರನ್ನು ನಾಮನಿರ್ದೇಶನ ಮಾಡಲು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡಿದೆ.

ಇದನ್ನು ಓದಿ: ಕಾಂಗ್ರೆಸ್‌ ಬೊಕ್ಕಸ ತುಂಬಿಸಲು ಸದಸ್ಯತ್ವ ಶುಲ್ಕ ಹೆಚ್ಚಳಕ್ಕೆ ನಿರ್ಧಾರ; ಭಾರತ್‌ ಜೋಡೋ ಯಾತ್ರೆ ಎಫೆಕ್ಟ್‌..!

ಒಂದರ ಹಿಂದೊಂದು ಚುನಾವಣೆಯ ಸೋಲು ಮತ್ತು ನಾಯಕರ ನಿರ್ಗಮನಕ್ಕಾಗಿ ವರ್ಷಗಳ ಆಂತರಿಕ ಕಚ್ಚಾಟದ ನಂತರ, ಸೋನಿಯಾ ಗಾಂಧಿಯವರು ಅಕ್ಟೋಬರ್‌ನಲ್ಲಿ ಗಾಂಧಿ ಕುಟುಂಬದ ನಿಷ್ಠಾವಂತ ಮಲ್ಲಿಕಾರ್ಜುನ ಖರ್ಗೆಯವರಿಗೆ 137 ವರ್ಷಗಳ ಹಿಂದಿನ ಪಕ್ಷದ ಚುಕ್ಕಾಣಿ ನೀಡಿದ್ದಾರೆ. ಈವರೆಗೆ ಗಾಂಧಿ ಕುಟುಂಬವೇ ಪಕ್ಷದ ಹಿಡಿತ ಹೊಂದಿತ್ತು.

ಇದನ್ನೂ ಓದಿ: ಕಾಂಗ್ರೆಸ್‌ನಿಂದ ಮಾಜಿ ಪ್ರಧಾನಿ ಪಿವಿ ನರಸಿಂಹರಾವ್‌ಗೆ ನೀಡದ ಸತ್ಕಾರ ಗಾಂಧಿ ಕುಟುಂಬಕ್ಕೆ..!

Latest Videos
Follow Us:
Download App:
  • android
  • ios