ಉನ್ನತಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿ; ಪೊಲೀಸ್ ಮತ್ತು ಜಿಲ್ಲಾಡಳಿತಕ್ಕೆ ಖಡಕ್ ಸೂಚನೆ!
ದೆಹಲಿಯಲ್ಲಿ ನಡೆದ ರೈತರ ಟ್ರಾಕ್ಟರ್ ರ್ಯಾಲಿ ದೇಶ ಕಂಡ ಅತೀ ಉಗ್ರ ಸ್ವರೂಪದ ರ್ಯಾಲಿಯಾಗಿ ಮಾರ್ಪಟ್ಟಿದೆ. ದಂಗೆ ಎಬ್ಬಿಸಿದ ಈ ರ್ಯಾಲಿ ನಿಯಂತ್ರಣ ತಪ್ಪಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಉನ್ನತ ಮಟ್ಟದ ಸಭನೆ ನಡೆಸಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
ಹರ್ಯಾಣ(ಜ.26): ದೆಹಲಿಯಲ್ಲಿ ರೈತರು ಆಯೋಜಿಸಿದ ಟ್ರಾಕ್ಟರ್ ರ್ಯಾಲಿ ದೇಶಕ್ಕೆ ಕಪ್ಪು ಚುಕ್ಕೆ ತಂದಿದೆ. ಎಲ್ಲಾ ಮಾರ್ಗಸೂಚಿ, ನಿಯಮಗಳನ್ನು ಗಾಳಿಗೆ ತೂರಿದ ರೈತ ಸಂಘಟನೆಗಳು ದಂಗೆ ಎಬ್ಬಿಸಿದ್ದಾರೆ. ಕೆಂಪುಕೋಟೆ ಮುತ್ತಿಗೆ ಹಾಕಿ ಸಿಖ್ ಧ್ವಜ ಹಾರಿಸಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ ನಡೆಸಿದ್ದರು. ಇದೀಗ ಮುಂಜಾಗ್ರತ ಕ್ರಮವಾಗಿ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ದೆಹಲಿ ಪೊಲೀಸ್ ಕಮಿಶನರ್, ಗುಪ್ತಚರ ಅಧಿಕಾರಿಗಳೊಂದಿಗೆ ಅಮಿತ್ ಶಾ ತುರ್ತು ಸಭೆ!
ಹರ್ಯಾಣದ ರೈತರು, ಪಂಜಾಬ್ ಭಾಗದ ರೈತರು ದೆಹಲಿಯಲ್ಲಿ ಉಗ್ರ ಸ್ವರೂಪದ ಪ್ರತಿಭಟನೆ ನಡೆಸಿದ್ದಾರೆ. ದೆಹಲಿಯಲ್ಲಿ ಪರಿಸ್ಥಿತಿ ಕೈಮೀರಿರುವ ಕಾರಣ, ಹರ್ಯಾಣಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ, ಜೊತೆಗೆ ರೈತ ಸಂಘಟನೆಗಳು ಕಾನೂನು ಕೈಗೆ ತೆಗೆದುಕೊಳ್ಳದಂತೆ ನೋಡಿಕೊಳ್ಳಲು ಸಿಎಂ ಸಭೆ ನಡೆಸಿದ್ದಾರೆ.
ಪೊಲೀಸ್ ಕಮಿಷನರ್, ಡೆಪ್ಯೂಟಿ ಕಮಿಷನರ್ ಸೇರಿದಂತೆ ಪೊಲೀಲ್ ಇಲಾಖೆ, ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ. ಗಣರಾಜ್ಯೋತ್ಸವದಂದು ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ನಡೆದ ಘಟನೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ವಿಜಯ್ ವರ್ಧನ್, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಅರೋರಾ, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಮನೋಜ್ ಯಾದವ್ ಮತ್ತು ಹಿರಿಯ ಅಧಿಕಾರಿಗಳು ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡಿದ್ದರು.