ಹರ್ಯಾಣ ಕೋಮು ಗಲಭೆ; ವಿಶ್ವ ಹಿಂದೂ ಪರಿಷತ್ ಪ್ರತಿಭಟನೆಗೆ ತಡೆಕೋರಿದ್ದ ಮುಸ್ಲಿಂ ಅರ್ಜಿ ವಜಾ!
ಹಿಂದೂಗಳ ಶೋಭಯಾತ್ರೆ ಮೇಲೆ ನಡೆದ ಕಲ್ಲುತೂರಾಟದಿಂದ ಆರಂಭಗೊಂಡ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದು ಆಕಸ್ಮಿಕವಾಗಿ ಸಂಭವಿಸಿಲ್ಲ, ಭಾರಿ ಷಡ್ಯಂತ್ರ ನಡೆಸಲಾಗಿದೆ ಅನ್ನೋ ಅನುಮಾನಗಳು ಬಲವಾಗತೊಡಗಿದೆ. ಇತ್ತ ಶೋಭಯಾತ್ರೆ ಮೇಲೆ ಕಲ್ಲು ತೂರಾಟ ವಿರೋಧಿಸಿ ವಿಶ್ವ ಹಿಂದೂ ಪರಿಷತ್ ನಡೆಸುತ್ತಿರುವ ಪ್ರತಿಭಟನೆಗೆ ತಡೆಕೋರಲು ಮುಸ್ಲಿಂ ಸಂಘಟಕರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನವದೆಹಲಿ(ಆ.01) ಹರ್ಯಾಣ ಕೋಮುಗಲಭೆ ಹಿಂದೆ ಭಾರಿ ಷಡ್ಯಂತ್ರದ ಅನುಮಾನ ಬಲವಾಗುತ್ತಿದೆ. ವಿಶ್ವ ಹಿಂದೂ ಪರಿಷತ್ ಶೋಭಯಾತ್ರೆ ಮೇಲೆ ಅನ್ಯ ಕೋಮಿನ ಕಲ್ಲು ತೂರಾಟದಿಂದ ಆರಂಭಗೊಂಡ ಕೋಮುಗಲಭೆ, ಹರ್ಯಾಣ ಸೇರಿದಂತೆ ಹಲವು ಪ್ರದೇಶಗಳಿಗೆ ಹಬ್ಬಿದೆ. ಈ ಹಿಂಸಾಚಾರದಲ್ಲಿ 5 ಮಂದಿ ಮೃತಪಟ್ಟಿದ್ದಾರೆ. ಹಿಂದೂಗಳ ಶೋಭಯಾತ್ರೆ ಮೇಲೆ ಕಲ್ಲುತೂರಾಟ ನಡೆಸಿದ ಅನ್ಯಕೋಮಿನ ನಡೆಯನ್ನು ವಿರೋದಿಸಿ ವಿಶ್ವ ಹಿಂದೂ ಪರಿಷತ್ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಆದರೆ ಈ ಪ್ರತಿಭಟನೆಗೆ ತಡೆಕೋರುವಂತೆ ಮುಸ್ಲಿಂ ಮುಖಂಡರು, ಸಂಘಟನೆಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದರೆ ಸುಪ್ರೀಂ ಕೋರ್ಟ್ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆಗೆ ತಡೆ ನೀಡಲು ನಿರಾಕರಿಸಿದೆ. ಇದೇ ವೇಳೆ ಮುಸ್ಲಿಂ ಮುಖಂಡರ ಅರ್ಜಿಯನ್ನು ವಜಾಗೊಳಿಸಿದೆ.
ನುಹ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರಕ್ಕೆ ಹರ್ಯಾಣವೇ ಹೊತ್ತಿ ಉರಿದಿತ್ತು. ಅಂಗಡಿಗಳು, ವಾಹನಗಳು ಬೆಂಕಿಗೆ ಅಹುತಿಯಾಗಿತ್ತು. ಹಿಂದೂಗಳ ಮೇಲೆ ನಡೆದ ದಾಳಿಯನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಇಂದು ಗಲಭೆಪೀಡಿತ ನುಹ್ ಜಿಲ್ಲೆಯಲ್ಲೇ ಪ್ರತಿಭಟನೆ ಹಮ್ಮಿಕೊಂಡಿತ್ತು. ಇದಕ್ಕಾಗಿ ಹರ್ಯಾಣ ಪೊಲೀಸರಿಗೆ ಮನವಿ ಸಲ್ಲಿಕೆ ಮಾಡಿತ್ತು. ಈ ಮನವಿ ಮಾಹಿತಿ ಪಡೆದ ಮುಸ್ಲಿಂ ಮುಖಂಡರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿಶ್ವ ಹಿಂದೂ ಪರಿಷತ್ ಪ್ರತಿಭಟನೆಗೆ ತಡೆ ಕೋರಬೇಕೆಂದು ಮನವಿಯಲ್ಲಿ ಆಗ್ರಹಿಸಿತ್ತು.
ಹರ್ಯಾಣದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಹೊತ್ತಿ ಉರಿದ ರೆಸ್ಟೋರೆಂಟ್, ಶಾಲಾ ಕಾಲೇಜು ಬಂದ್!
ಮುಸ್ಲಿಂ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆಗೆ ಅವಕಾಶ ಮಾಡಿಕೊಟ್ಟಿದೆ. ಇದೇ ವೇಳೆ, ಪ್ರತಿಭಟನೆ ಶಾಂತಿಯುತವಾಗಿಬೇಕು. ಯಾವುದೇ ಕಾನೂನ ಉಲ್ಲಂಘನೆಯಾಗಬಾರದು. ಇದೇ ವೇಳೆ ದ್ವೇಷದ ಭಾಷಣ, ಸಂಘರ್ಷಕ್ಕೆ ಎಡೆ ಮಾಡಿಕೊಡುವ ಮಾತುಗಳನ್ನು ಆಡುವಂತಿಲ್ಲ ಎಂದು ವಿಶ್ವ ಹಿಂದೂ ಪರಿಷತ್‌ಗೆ ಸೂಚಿಸಿದೆ.
ಇತ್ತ ವಿಶ್ವ ಹಿಂದೂ ಪರಿಷತ್ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗಗೆ ಹೆಚ್ಚುವರಿ ಭದ್ರತೆ ನಿಯೋಜಿಸಲು ಸರ್ಕಾರಕ್ಕೆ ಸೂಚಿಸಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪ್ಯಾರಾ ಮಿಲಿಟರಿ ಪಡೆಯನ್ನು ನಿಯೋಜಿಸಲು ಸೂಚಿಸಿದೆ. ಯಾವುದೇ ಅಹಿತರ ಘಟನೆಗೆ ಅವಕಾಶ ಮಾಡಿಕೊಡಬಾರದು. ಭದ್ರತೆಗ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳುವಂತೆ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಈ ಕೋಮುಗಲಭೆ ನುಹ್ ಸಮೀಪದ ಗುರುಗ್ರಾಮಕ್ಕೂ ಹಬ್ಬಿದ್ದು, ಸೋಮವಾರ ತಡರಾತ್ರಿ ಮಸೀದಿಗೆ ನುಗ್ಗಿದ ಉದ್ರಿಕ್ತರು ಬೆಂಕಿ ಹಚ್ಚಿದ್ದು, ಇಮಾಂ ಮೇಲೆ ದಾಳಿ ಮಾಡಿದ್ದಾರೆ. ಈ ಘಟನೆಯಲ್ಲಿ ಇಮಾಂ ಮೃತಪಟ್ಟಿದ್ದಾರೆ. ಇದೇ ವೇಳೆ, ಗುರುಗ್ರಾಮದಲ್ಲಿ ಮಂಗಳವಾರ ಸಂಜೆ ವೇಳೆ ಕೆಲವು ರೆಸ್ಟೋರೆಂಟ್ ಹಾಗೂ ಅಂಗಡಿಗಳಿಗೆ ನುಗ್ಗಿ ಬೆಂಕಿ ಹಚ್ಚಲಾಗಿದೆ. ಇದೇ ವೇಳೆ, ನೂಹ್‌ನಲ್ಲಿ ಸೋಮವಾರ ನಡೆದ ಘರ್ಷಣೆಯ ವೇಳೆ ಗಾಯಗೊಂಡಿದ್ದ ಮತ್ತಿಬ್ಬರು ಮಂಗಳವಾರ ಸಾವಿಗೀಡಾಗಿದ್ದು ಒಟ್ಟು ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಮಣಿಪುರ ಪೊಲೀಸರಿಗೆ ಸುಪ್ರೀಂ ಹಿಗ್ಗಾಮುಗ್ಗಾ ಚಾಟಿ: ತನಿಖೆಗೆ ಎಸ್‌ಐಟಿ/ಜಡ್ಜ್ ಸಮಿತಿ ನೇಮಕದ ಸುಳಿವು
ಜಿಲ್ಲೆಯಾದ್ಯಂತ ನಡೆದ ಹಿಂಸಾಚಾರದಲ್ಲಿ ಸುಮಾರು 120 ವಾಹನಗಳಿಗೆ ಹಾನಿ ಮಾಡಲಾಗಿದೆ. ಇದೇ ವೇಳೆ ಪ್ರತಿಭಟನಾಕಾರರು ಕಲ್ಲುತೂರಾಟ ನಡೆಸಿದ್ದು, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘರ್ಷಣೆಯನ್ನು ತಡೆಗಟ್ಟಲು ನೂಹ್‌ನಲ್ಲಿ ಕಫä್ರ್ಯ, ಗುರುಗ್ರಾಮ ಮತ್ತು ಫರೀದಾಬಾದ್‌ಗಳಲ್ಲಿ ನಿಷೇದಾಜ್ಞೆ ಹೇರಲಾಗಿದೆ. ಮೊಬೈಲ್ ಇಂಟರ್ನೆಟ್ ಬಂದ್ ಮಾಡಲಾಗಿದೆ. ಈ ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಈವರೆಗೆ 80 ಮಂದಿಯನ್ನು ಬಂಧಿಸಲಾಗಿದೆ.