ದೆಹಲಿ(ಡಿ.16): ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ರೈತ ಪ್ರತಿಭಟನೆಗೆ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಸಂಘಟನೆಗಳ ಸದಸ್ಯರು, ರಾಜಕೀಯ ಪಕ್ಷಗಳ ಸದಸ್ಯರು ಸೇರಿಕೊಳ್ಳುತ್ತಿದ್ದಾರೆ. ಹೀಗೆ ಮಂಗಳವಾರ(ಡಿ.15) ಸಂಜೆ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆ ಸೇರಿಕೊಂಡ ಹರ್ಯಾಣ ಗುರುದ್ವಾರದ ಧರ್ಮಗುರು ಇಂದು(ಡಿ.16) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೈತರೊಂದಿಗೆ ಮೋದಿ ಮಾತುಕತೆ; ಅನ್ನದಾತನ ಹಾದಿತಪ್ಪಿಸುತ್ತಿದೆ ವಿಪಕ್ಷ ಎಂದ ಪ್ರಧಾನಿ!

65 ವರ್ಷದ ಬಾಬಾ ರಾಮ್ ಸಿಂಗ್ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿಭಟನಾ ಸ್ಥಳದಲ್ಲೇ ಈ ಘಟನೆ ನಡೆದಿದೆ. ತಕ್ಷಣವೇ ಪೊಲೀಸರು ಪಾಣಿಪತ್‌ನಲ್ಲಿರುವ ಪಾರ್ಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರೊಳಗೆ ಧರ್ಮಗುರು ಸಾವನ್ನಪ್ಪಿದ್ದರು ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಭಾರತದ ರೈತ ಪ್ರತಿಭಟನೆಗೆ ಲಂಡನ್‌‌ನಿಂದ ಬೆಂಬಲ; ಕಾರಣ ಏನು?

ಧರ್ಮಗುರು ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದಾರೆ. ಈ ಪತ್ರದಲ್ಲಿ ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದಾರೆ. ಅವರ ನೋವು ನನಗೆ ಅರ್ಥವಾಗುತ್ತೆ. ಅವರ ನೋವನ್ನು ನಾನು ಹಂಚಿಕೊಳ್ಳುತ್ತೇನೆ. ರೈತರು ನಿರಂತರ ಹೋರಾಟ ಮಾಡುತ್ತಿದ್ದರೂ, ಕೇಂದ್ರ ಸರ್ಕಾರ ನ್ಯಾಯ ಒದಗಿಸುತ್ತಿಲ್ಲ. ರೈತರ ಪ್ರತಿಭಟನೆಗೆ ಹಲವರು ಅವರದ್ದೇ ರೀತಿಯಲ್ಲಿ ಬೆಂಬಲಿಸಿದ್ದಾರೆ. ಹಲವು ಕ್ರೀಡಾಪಟುಗಳು ತಮ್ಮ ಪ್ರಶಸ್ತಿಗಳನ್ನು ವಾಪಸ್ ನೀಡಿದ್ದಾರೆ. ನಾನು ತ್ಯಾಗದ ಮೂಲಕ ಈ ಪ್ರತಿಭಟನೆ ಬೆಂಬಲಿಸುತ್ತೇನೆ ಎಂದು ಡೆತ್ ನೋಟ್‌ನಲ್ಲಿ ಹೇಳಿದ್ದಾರೆ.

ರೈತ ಪ್ರತಿಭಟನೆ ಆರಂಭಗೊಂಡ ಬಳಿಕ 20ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ. ಸರಾಸರಿ ಪ್ರಕಾರ ಪ್ರತಿ ದಿನ ಒರ್ವ ರೈತ ಸಾವನ್ನಪ್ಪುತ್ತಿದ್ದಾನೆ ಎಂದು ರೈತ ಮುಖಂಡ ಹೇಳಿದ್ದಾರೆ.