ಭಾರತದಲ್ಲಿ 17092 ಹೊಸ ಪ್ರಕರಣಗಳು ದಾಖಲು ಮತ್ತೆ ಏರಿಕೆಯತ್ತ ಸಾಗಿದ ಕೊರೋನಾ ಪ್ರಕರಣ ಸಂಖ್ಯೆ ಸಾವಿನ ಸಂಖ್ಯೆಯಲ್ಲೂ ಏರಿಕೆ, ಮಾರ್ಗಸೂಚಿ ಪಾಲಿಸಲು ಮನವಿ

ನವದೆಹಲಿ(ಜು.02): ದೇಶದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ಮತ್ತೊಮ್ಮೆ ಎಚ್ಚರಿಕೆ ಕರೆಗೆಂಟೆಯಾಗಿದೆ. ತಜ್ಞರ ಸೂಚನೆಯಂತೆ ನಿಧಾನವಾಗಿ ಏರಿಕೆಯಾಗುತ್ತಿದ್ದ ಕೋವಿಡ್ ಪ್ರಕರಣದ ವೇಗೆ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ 17092 ಹೊಸ ಪ್ರಕರಣಗಳು ದಾಖಲಾಗಿದೆ. ಇಷ್ಟೇ ಅಲ್ಲ 29 ಸಾವು ಸಂಭವಿಸಿದೆ.

ಮುಂಬೈನಲ್ಲಿ 9 ವರ್ಷದ ಬಾಲಕಿ ಕೋವಿಡ್‌ಗೆ ಬಲಿಯಾಗಿದ್ದಾಳೆ. ಇತರ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ 9 ವರ್ಷದ ಬಾಲಕಿಗೆ ಕೊರೋನಾ ಅಂಟಿಕೊಂಡಿತು. ಚಿಕಿತ್ಸೆಗೆ ಸ್ಪಂದಿಸಿದ ಬಾಲಕಿ ಮೃತಪಟ್ಟಿದ್ದಾಳೆ. ಆದರೆ ಮುಂಬೈನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. 1265 ಹೊಸ ಪ್ರಕರಣಗಳು ಮುಂಬೈನಲ್ಲಿ ಪತ್ತೆಯಾಗಿದೆ.

ಎರಡನೇ ಬಾರಿ ಕೋವಿಡ್ ಸೋಂಕು ತಗುಲಿದರೆ ಅಪಾಯ ಹೆಚ್ಚು!

ಬೆಂಗಳೂರಿನಲ್ಲಿ ಪ್ರಕರಣಗಳ ಸಂಖ್ಯೆ 1,000 ಗಡಿ ದಾಟಿದೆ. ಇತ್ತ ದೆಹಲಿಯಲ್ಲಿ 813 ಕೋವಿಡ್ ಪ್ರಕರಣ ದಾಖಲಾಗಿದೆ. ಒಡಿಶಾದಲ್ಲಿ 1,000 ಕೋವಿಡ್ ಪ್ರಕರಣ ದಾಖಲಾಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯು 1,09,568ಕ್ಕೆ ಏರಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ದರವು ಶೇ. 4.14ರಷ್ಟಿದ್ದು, ವಾರದ ಪಾಸಿಟಿವಿಟಿ ದರವು ಶೇ. 3.56ಕ್ಕೆ ಏರಿಕೆಯಾಗಿದೆ. ಕೋವಿಡ್‌ ಚೇತರಿಕೆ ದರವು ಶೇ. 98.54ರಷ್ಟಿದೆ. ದೇಶದಲ್ಲಿ ಈವರೆಗೆ ಒಟ್ಟು 197.84 ಕೋಟಿ ಡೋಸು ಕೋವಿಡ್‌ ಲಸಿಕೆಯನ್ನು ವಿತರಿಸಲಾಗಿದೆ.

ಬರೋಬ್ಬರಿ ನಾಲ್ಕು ತಿಂಗಳ ನಂತರ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸ್ಪೋಟಗೊಂಡಿದೆ. ಶುಕ್ರವಾರ 1008 ಹೊಸ ಪ್ರಕರಣ ಪತ್ತೆಯಾಗಿದ್ದರೆ, ಶನಿವಾರ ಮತ್ತೆ 1,000 ಪ್ರಕರಣ ಪತ್ತೆಯಾಗಿದೆ. ಪಾಸಿಟಿವಿಟಿ ದರ ಶೇ.4.24ಕ್ಕೆ ಏರಿಕೆಯಾಗಿದೆ. 

ನಗರದಲ್ಲಿ ಫೆಬ್ರವರಿ 20ರ ಬಳಿಕ ಇದೀಗ ಒಂದು ಸಾವಿರಕ್ಕೂ ಅಧಿಕ ಸೋಂಕು ಪ್ರಕರಣ ದೃಢಪಟ್ಟಿವೆ. ಇನ್ನು ಶುಕ್ರವಾರ 770 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 5,814 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 93 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 12 ಮಂದಿ ಐಸಿಯು ಮತ್ತು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 8340 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 1045 ಮಂದಿ ಮೊದಲ ಡೋಸ್‌, 2779 ಮಂದಿ ಎರಡನೇ ಡೋಸ್‌ ಮತ್ತು 4516 ಮಂದಿ ಮೂರನೇ ಡೋಸ್‌ ಲಸಿಕೆ ಪಡೆದಿದ್ದಾರೆ.

ನಗರದಲ್ಲಿ 18,850 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 14,770 ಆರ್‌ಟಿಪಿಸಿಆರ್‌ ಹಾಗೂ 4,080 ಮಂದಿ ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆ ನಡೆಸಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ. ಶುಕ್ರವಾರ ಮಹದೇವಪುರದಲ್ಲಿ 7 ಪ್ರದೇಶಗಳು ಕಂಟೈನ್ಮೆಂಟ್‌ನಿಂದ ಮುಕ್ತವಾಗಿವೆ. ನಗರದಲ್ಲಿ ಒಟ್ಟು 13 ಕಂಟೈನ್ಮೆಂಟ್‌ ವಲಯಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ಕೋವಿಡ್ ಸಾಂಕ್ರಾಮಿಕ ಮುಗಿದಿಲ್ಲ, 110 ರಾಷ್ಟ್ರದಲ್ಲಿ ಸೋಂಕು ಹೆಚ್ಚುತ್ತಿದೆ; WHO ವಾರ್ನಿಂಗ್‌

ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 155 ಮಂದಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದ್ದು, ಅವರಲ್ಲಿ ಉಡುಪಿ ತಾಲೂಕಿನ 1 ಮತ್ತು ಕಾರ್ಕಳ ತಾಲೂಕಿನ 3 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ದಿನ 8 ಮಂದಿ ಸೋಂಕಿತರು ಗುಣಮುಖರಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 21 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 539 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.