ಸಹೋದ್ಯೋಗಿಯ ವಿದಾಯ ಕೂಟ: ಖುಷಿಯಿಂದ ಡಾನ್ಸ್ ಮಾಡುತ್ತಿರುವಾಗಲೇ ಕುಸಿದು ಬಿದ್ದು ಪೊಲೀಸ್ ಅಧಿಕಾರಿ ಸಾವು
ಸಹೋದ್ಯೋಗಿಯ ಬೀಳ್ಕೊಡುಗೆ ಸಮಾರಂಭದಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಪೊಲೀಸ್ ಅಧಿಕಾರಿಯೊಬ್ಬರು ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ.
ನವದೆಹಲಿ: ಸಹೋದ್ಯೋಗಿಯ ಬೀಳ್ಕೊಡುಗೆ ಸಮಾರಂಭದಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಪೊಲೀಸ್ ಅಧಿಕಾರಿಯೊಬ್ಬರು ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತ ಪೊಲೀಸ್ ಅಧಿಕಾರಿಯನ್ನು ರವಿ ಕುಮಾರ್ ಎಂದು ಗುರುತಿಸಲಾಗಿದೆ. ಇವರು ಸಹೋದ್ಯೋಗಿಯ ಬೀಳ್ಕೊಡುಗೆ ಸಮಾರಂಭದಲ್ಲಿ ಖುಷಿಯಿಂದ ಬಿಂದಾಸ್ ಆಗಿ ಡಾನ್ಸ್ ಮಾಡುತ್ತಿರುವಾಗಲೇ ಈ ದುರಂತ ಸಂಭವಿಸಿದೆ. ಹರ್ಯಾಣಿ ಹಾಡೊಂದಕ್ಕೆ ಸ್ಹೋದ್ಯೋಗಿ ಜೊತೆ ಇವರು ಬಿಂದಾಸ್ ಆಗಿ ಡಾನ್ಸ್ ಮಾಡಿದ್ದು, ಸ್ವಲ್ಪ ಹೊತ್ತಿನಲ್ಲಿ ಎದೆನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಮೃತ ರವಿಕುಮಾರ್ ಅವರು ದೆಹಲಿ ಪೊಲೀಸ್ ಇಲಾಖೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕೆಲಸ ಮಾಡುತ್ತಿದ್ದರು.
ದೆಹಲಿಯ ರೂಪ್ ನಗರ್‌ನ ಪೊಲೀಸ್ ಠಾಣೆಯಲ್ಲಿ ರವಿಕುಮಾರ್ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯ್ತು. ಆದರೆ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಣೆ ಮಾಡಿದರು. ಈ ಪೊಲೀಸ್ ಅಧಿಕಾರಿಯ ಕೊನೆ ನೃತ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹರ್ಯಾಣಿ ಡಿಜೆ ಹಾಡಿಗೆ ಅವರು ಬಿಂದಾಸ್ ಆಗಿ ಸಹೋದ್ಯೋಗಿ ಜೊತೆ ಕುಣಿಯುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಸ್ವಲ್ಪ ಹೊತ್ತು ನಗುತ್ತಾ ಹಾಡಿಗೆ ಹೆಜ್ಜೆ ಹಾಕಿದ ಅವರು ಅಲ್ಲಿಂದ ಮುಂದೆ ಹೋಗಿದ್ದು, ಇದಾಗಿ ಕೆಲ ಕ್ಷಣಗಳಲ್ಲಿ ಅವರಿಗೆ ಹೃದಯಾಘಾತವಾಗಿದೆ.
ಕ್ರಿಕೆಟ್ ಮೈದಾನದಲ್ಲಿ ಕುಸಿದು ಬಿದ್ದ ಕರ್ನಾಟಕ ವೇಗಿ ಕೆ ಹೊಯ್ಸಳ ಸಾವು, ತಂಡಕ್ಕೆ ಆಘಾತ!
ಸುದ್ದಿಸಂಸ್ಥೆ ಪಿಟಿಐ ವರದಿ ಪ್ರಕಾರ, ರವಿ ಕುಮಾರ್ ಅವರು ಉತ್ತರ ಪ್ರದೇಶದ ಬಗ್ಪಾತ್ ನಿವಾಸಿಯಾಗಿದ್ದು, ದೆಹಲಿಯ ಮಾಡೆಲ್ ಟೌನ್‌ನಲ್ಲಿ ಹೆಂಡ್ತಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸ ಮಾಡುತ್ತಿದ್ದರು. 2010ರಲ್ಲಿ ಅವರು ದೆಹಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. ಕಳೆದ 45 ದಿನಗಳ ಹಿಂದಷ್ಟೇ ಅವರು ಆಂಜಿಯೋಗ್ರಾಫಿ (ಹೃದಯ ತಪಾಸಣೆ) ಮಾಡಿಸಿಕೊಂಡಿದ್ದರು. ಆದರೆ ಈಗ ಹಠಾತ್ ಆಗಿ ಸಾವನ್ನಪ್ಪಿದ್ದು, ಕುಟುಂಬ ಹಾಗೂ ಸಹೋದ್ಯೋಗಿಗಳು ಆಘಾತಕ್ಕೀಡಾಗಿದ್ದಾರೆ.
ಇತ್ತೀಚೆಗೆ ದೇಶದಲ್ಲಿ ಈ ರೀತಿ ಹಠಾತ್ ಸಾವುಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಡಾನ್ಸ್ ಮಾಡುತ್ತಲೇ ಸಾವನ್ನಪ್ಪುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕೆಲ ತಿಂಗಳ ಹಿಂದೆ ರಾಜಸ್ಥಾನದಲ್ಲಿ ಸೋದರನ ನಿವೃತ್ತಿಯ ಔತಣಕೂಟದಲ್ಲಿ ಡಾನ್ಸ್ ಮಾಡುತ್ತಿದ್ದ ಸರ್ಕಾರಿ ಶಾಲೆ ಶಿಕ್ಷಕರೊಬ್ಬರು ಹಠಾತ್ ಆಗಿ ಸಾವನ್ನಪ್ಪಿದ್ದರು. ಕಳೆದು ಏಪ್ರಿಲ್‌ನಲ್ಲಿ ಸಹೋದರಿಯ ಮದುವೆಯಲ್ಲಿ ನೃತ್ಯ ಮಾಡುತ್ತಿದ್ದ 18 ವರ್ಷದ ಯುವತಿಯೊಬ್ಬರು ಹಠಾತ್ ಆಗಿ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದರು. ಕೋವಿಡ್ ನಂತರ ಹೀಗೆ ಸಣ್ಣ ವಯಸ್ಸಿನ ಮಕ್ಕಳು, ಯುವಕರು, ಯುವತಿಯರು ಸಾವನ್ನಪ್ಪುವ ಪ್ರಕರಣ ಹೆಚ್ಚಾಗಿದೆ.
ಟಿವಿ ಲೈವ್ ಶೋನಲ್ಲಿ ಮಾತನಾಡುವಾಗಲೇ ಕುಸಿದು ಬಿದ್ದು ಸಾವು ಕಂಡ ಕೃಷಿ ತಜ್ಞ!