ಉತ್ತರಾಖಂಡದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಗುರುವಾರ ಪ್ರವಾಹ ಮತ್ತು ಭೂಕುಸಿತಕ್ಕೆ ಸಿಲುಕಿ ಒಬ್ಬ ಸಾವನ್ನಪ್ಪಿದ್ದಾನೆ. 14 ಜನ ಕಣ್ಮರೆಯಾಗಿದ್ದಾರೆ. ಸುಮಾರು 20 ಜನ ಗಾಯಗೊಂಡಿದ್ದಾರೆ. ಚರ್ಮೋಲಿ ಜಿಲ್ಲೆಯ 4 ಹಳ್ಳಿಗಳ 30ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ

ಗೋಪೇಶ್ವರ (ಉತ್ತರಾಖಂಡ) : ಉತ್ತರಾಖಂಡದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಗುರುವಾರ ಪ್ರವಾಹ ಮತ್ತು ಭೂಕುಸಿತಕ್ಕೆ ಸಿಲುಕಿ ಒಬ್ಬ ಸಾವನ್ನಪ್ಪಿದ್ದಾನೆ. 14 ಜನ ಕಣ್ಮರೆಯಾಗಿದ್ದಾರೆ. ಸುಮಾರು 20 ಜನ ಗಾಯಗೊಂಡಿದ್ದಾರೆ. ಚರ್ಮೋಲಿ ಜಿಲ್ಲೆಯ 4 ಹಳ್ಳಿಗಳ 30ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಕುಂಟಾರಿ ಲಗಫಲಿ, ಕುಂಟಾರಿ ಲಗಸರ್ಪಣಿ, ಸೇರ ಮತ್ತು ಧರ್ಮ ಹಳ್ಳಿಗಳ 33 ಮನೆಗಳು, ಹಲವು ಅಂಗಡಿಗಳು, ಗೋಶಾಲೆಗಳು ಪ್ರವಾಹಕ್ಕೆ ಸಿಲುಕಿ ಧ್ವಂಸಗೊಂಡಿವೆ. 14 ಜನ ಕಾಣೆಯಾಗಿದ್ದು, ಸುಮಾರು 20 ಜನ ಗಾಯಗೊಂಡಿದ್ದಾರೆ. ಮಳೆ ಸಂಬಂಧಿತ ಘಟನೆಗಳಿಗೆ 200ಕ್ಕೂ ಅಧಿಕ ಜನ ಅತಂತ್ರರಾಗಿದ್ದಾರೆ ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್ ಧಾಮಿ ತಿಳಿಸಿದ್ದಾರೆ.

ತಲೆಗೆ ಗಂಭೀರ ಗಾಯವಾಗಿರುವ ಮಗು ಸೇರಿದಂತೆ ತೀವ್ರವಾಗಿ ಗಾಯಗೊಂಡಿರುವವರನ್ನು ರಿಷಿಕೇಶದ ಏಮ್ಸ್‌ ಆಸ್ಪತ್ರೆಗೆ ಏರ್‌ಲಿಫ್ಟ್‌ ಮಾಡಲಾಗುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ಪ್ರವಾಹಪೀಡಿತ ಪ್ರದೇಶಗಳನ್ನು ತಲುಪಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.

ಸೆ.21ರವರೆಗೆ ರಾಜ್ಯದಲ್ಲಿ ಮಳೆಯ ಅಬ್ಬರ, ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು : ಕರ್ನಾಟಕದಲ್ಲಿ ಮಳೆ ಮತ್ತೊಮ್ಮೆ ಚುರುಕುಗೊಂಡಿದ್ದು, ರಾಜ್ಯದ ಹಲವೆಡೆ ಮುಂದಿನ ಏಳು ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನೈರುತ್ಯ ಮಾನ್ಸೂನ್ ಚುರುಕಾದ ಹಿನ್ನೆಲೆ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ

ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ರೈತರು ಎಚ್ಚರಿಕೆಯಿಂದ ಇರಬೇಕೆಂದು ಇಲಾಖೆ ಸೂಚಿಸಿದೆ.

 ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ದಾವಣಗೆರೆ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ಶಿವಮೊಗ್ಗ, ಹಾಸನ, ಚಿತ್ರದುರ್ಗ, ರಾಮನಗರ, ವಿಜಯನಗರ, ಬಳ್ಳಾರಿ ಮುಂತಾದ ಕಡೆಗಳಲ್ಲಿ ಚದುರಿದ ರೀತಿಯಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿಯೂ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.