ಹೇಮಂತ್‌ಗೆ ಮತ್ತೆ ಜಾರ್ಖಂಡ್ ಸಿಎಂ ಪಟ್ಟ- ಸರ್ಕಾರ ರಚನೆಗೆ ಹಕ್ಕು ಮಂಡನೆ

ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಚಂಪೈ ರಾಜೀನಾಮೆ ಸಲ್ಲಿಸಿದರು. ಮರುಕ್ಷಣವೇ ಹೇಮಂತ್ ಅವರು ಸರ್ಕಾರ ರಚನೆಗೆ ಹಕ್ಕುಮಂಡಿಸಿ, ತಮಗೆ ಬಹು ಮತ ಇದೆ ಎಂದು ಸೂಚಿಸುವ ಶಾಸಕರ ಬೆಂಬಲ ಪತ್ರ ನೀಡಿದರು. 

Hemant Soren likely to take oath as Jharkhand Chief Minister today mrq

ರಾಂಚಿ: ಭ್ರಷ್ಟಾಚಾರದ ಪ್ರಕರಣದಲ್ಲಿ ಜೈಲು ಸೇರಿ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಹೇಮಂತ್ ಸೊರೇನ್ ಅವರು ಮತ್ತೆ 5 ತಿಂಗಳ ಬಳಿಕ ಜಾರ್ಖಂಡ್ ಮುಖ್ಯಮಂತ್ರಿಯಾಗುವುದು ನಿಶ್ಚಿತವಾಗಿದೆ. ಬುಧವಾರ ನಡೆದ ಅಚ್ಚರಿಯ ವಿದ್ಯಮಾನದಲ್ಲಿ ಹಾಲಿ ಮುಖ್ಯಮಂತ್ರಿ ಚಂಪೈಸೊರೇನ್‌ರಾಜೀನಾಮೆ ನೀಡಿದ್ದು, ಹೇಮಂತ್ ಅವರುಸರ್ಕಾರರಚನೆಗೆ ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದಾರೆ. ಗುರುವಾರ ಇಲ್ಲಿನ ಡೆದ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ನಾಯಕರ ಸಭೆಯಲ್ಲಿ ಹಾಲಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರನ್ನು ಕೆಳಗಿಳಿಸಿ ಮರಳಿ ಹೇಮಂತ್ ಅವರನ್ನು ಸಿಎಂಮಾಡಲು ನಿರ್ಧರಿಸಲಾಯಿತು. ಅಲ್ಲದೆ, ಹೇಮಂತ್ ಅವರನ್ನು ಶಾಸ ಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡುವ ನಿರ್ಣಯವನ್ನೂ ಸ್ವೀಕರಿಸಲಾಯಿತು.

ಇದಾದ ಕೆಲವೇ ಹೊತ್ತಿನಲ್ಲಿ ಚಂಪೈ ಹಾಗೂ ಹೇಮಂತ್‌ ಒಟ್ಟಿಗೇ ರಾಜಭವನಕ್ಕೆ ತೆರಳಿದರು. ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಚಂಪೈ ರಾಜೀನಾಮೆ ಸಲ್ಲಿಸಿದರು. ಮರುಕ್ಷಣವೇ ಹೇಮಂತ್ ಅವರು ಸರ್ಕಾರ ರಚನೆಗೆ ಹಕ್ಕುಮಂಡಿಸಿ, ತಮಗೆ ಬಹು ಮತ ಇದೆ ಎಂದು ಸೂಚಿಸುವ ಶಾಸಕರ ಬೆಂಬಲ ಪತ್ರ ನೀಡಿದರು. 

ರಾಜ್ಯಪಾಲರು ಆಹ್ವಾನ ನೀಡಿದ ನಂತರ ಹೇಮಂತ್ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಭೂಅಕ್ರಮ ಪ್ರಕರಣದಲ್ಲಿ ಬಂಧನ ಖಚಿತ ವಾಗುತ್ತಲೇ ಕಳೆದ ಜ.31ರಂದು ಹೇಮಂತ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಪ್ರಕರಣದಲ್ಲಿ ಜೂ.28ರಂದು ಜಾಮೀನು ಸಿಕ್ಕು ಬಿಡುಗಡೆಯಾಗಿದ್ದರು. ಈ ನಡುವೆ ಜೆಎಂಎಂ ನಾಯಕ ಚಂಪೈ ಸೊರೇನ್ ಫೆ.2ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. 

ಅಕ್ರಮ ಹಣ ವರ್ಗಾವಣೆ ಕೇಸ್‌: 5 ತಿಂಗಳ ಬಳಿಕ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಜಾಮೀನು

ಬಿಜೆಪಿ ಟೀಕೆ

ಈ ನಡುವೆ ರಾಜ್ಯದಲ್ಲಿನ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ, ಸಂಸದ ನಿಶಿಕಾಂತ್ ದುಬೆ, ರಾಜ್ಯದಲ್ಲಿ ಚಂಪೈ ಸೊರೇನ್ ಯುಗ ಮುಗಿಯಿತು. ಕುಟುಂಬ ಆಧರಿತ ಪಕ್ಷದಲ್ಲಿ, ಕುಟುಂಬದ ಹೊರಗಿನವರಿಗೆ ರಾಜಕೀಯ ಭವಿಷ್ಯ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ' ಎಂದು ವ್ಯಂಗ್ಯವಾಡಿದ್ದಾರೆ.

ಹೇಮಂತ್ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಇ.ಡಿ

ಅತ್ತ ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಮುಖ್ಯಮಂತ್ರಿ ಆಗಲು ವೇದಿಕೆ ಸಿದ್ಧವಾದ ಬೆನ್ನಲ್ಲೇ, ಅವರಿಗೆ ದಿಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇ.ಡಿ.) ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಒಂದು ವೇಳೆ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದರೆ ಹೇಮಂತ್ ಗೊಂದಲಕ್ಕೆ ಒಳಗಾಗುವುದು ನಿಶ್ಚಿತ.

ರಾಂಚಿಯಲ್ಲಿ ಇಂಡಿಯಾ ಮಹಾ ಶಕ್ತಿ ಪ್ರದರ್ಶನ: ಹೇಮಂತ್ ಸೊರೇನ್, ಕೇಜ್ರಿವಾಲ್‌ಗೆ ಖಾಲಿ ಕುರ್ಚಿ ಇಟ್ಟು ಗೌರವ

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಸೊರೇನ್‌ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇ,ಡಿ. ಜ.31ರಂದು ಬಂಧಿಸಿತ್ತು. ಹೀಗಾಗಿ ಅಂದೇ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ‘ಸೊರೇನ್‌ ಅವರು ರಾಜ್ಯದ ರಾಜಧಾನಿ ರಾಂಚಿಯ ಬಾರ್ಗೇನ್ ಆಂಚಲ್‌ನಲ್ಲಿ ಕಾನೂನುಬಾಹಿರವಾಗಿ 8.86 ಎಕರೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಮುಖ್ಯಮಂತ್ರಿಯಾಗಿ ತಮ್ಮ ಸ್ಥಾನ ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ಇ.ಡಿ. ಆರೋಪಿಸಿತ್ತು. ಆದರೆ ಇದು ಸುಳ್ಳು ಆರೋಪ ಎಂದು ಸೊರೇನ್‌ ಪರ ವಕೀಲರಾದ ಹಿರಿಯ ನ್ಯಾಯವಾದಿ ಕಪಿಲ್‌ ಸಿಬಲ್‌ ವಾದಿಸಿದ್ದರು.

Latest Videos
Follow Us:
Download App:
  • android
  • ios