ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರ್ಕಾರ, ಗುತ್ತಿಗೆದಾರರಿಂದ ಶೇ.40ರಷ್ಟು ಲಂಚ ಪಡೆಯುತ್ತಿದೆ ಎಂದು ಆರೋಪಿಸಲು ಕಾಂಗ್ರೆಸ್‌ ಆರಂಭಿಸಿದ್ದ ಪೇಸಿಎಂ ಅಭಿಯಾನವನ್ನು ಇದೀಗ ಪಕ್ಷದ ನಾಯಕ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧವೇ ಬಳಸಿದ್ದಾರೆ.

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರ್ಕಾರ, ಗುತ್ತಿಗೆದಾರರಿಂದ ಶೇ.40ರಷ್ಟು ಲಂಚ ಪಡೆಯುತ್ತಿದೆ ಎಂದು ಆರೋಪಿಸಲು ಕಾಂಗ್ರೆಸ್‌ ಆರಂಭಿಸಿದ್ದ ಪೇಸಿಎಂ ಅಭಿಯಾನವನ್ನು ಇದೀಗ ಪಕ್ಷದ ನಾಯಕ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧವೇ ಬಳಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇಂದ್ರ ಸರ್ಕಾರ ಅಪನಗದೀಕರಣ ಜಾರಿಗೊಳಿಸಿ ಮಂಗಳವಾರಕ್ಕೆ 6 ವರ್ಷ ತುಂಬಿದ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ, ‘ಅಪನಗದೀಕರಣ ಎಂಬುದು ದೇಶದ ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ನಿರ್ನಾಮ ಮಾಡಿ, ದೇಶದ ಆರ್ಥಿಕತೆಯನ್ನು ತಮ್ಮ ಶ್ರೀಮಂತ ಸ್ನೇಹಿತರ ಕೈಗೆ ಒಪ್ಪಿಸಲು ‘ಪೇಪಿಎಂ’ ನಡೆಸಿದ ಉದ್ದೇಶಪೂರ್ವಕ ಕೃತ್ಯ’ ಎಂದು ವ್ಯಂಗ್ಯವಾಡಿದ್ದಾರೆ.

No Road No Tax: ಪೇಸಿಎಂ ನಂತರ ಭಿತ್ತಿ ಪತ್ರಗಳನ್ನು ಅಂಟಿಸಿ ಕಾಂಗ್ರೆಸ್‌ನಿಂದ ಹೊಸ ಅಭಿಯಾನ

ಕಳೆದ ತಿಂಗಳು ಕರ್ನಾಟಕ ಹಲವು ಕಡೆ ಕಾಂಗ್ರೆಸ್‌ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇರುವ ಪೇಸಿಎಂ ಪೋಸ್ಟರ್‌ಗಳನ್ನು ಅಂಟಿಸಿತ್ತು. ಈ ಬಗ್ಗೆ ಪೊಲೀಸರು ಪ್ರಕರಣ ಕೂಡಾ ದಾಖಲಿಸಿಕೊಂಡಿದ್ದರು.

ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧದ ಪೇಸಿಎಂ ಮೊಕದ್ದಮೆ ವಜಾ