ಪವನ್ ಮುಂಜಾಲ್‌ಗೆ ನಿಕಟವಾಗಿರುವ ವ್ಯಕ್ತಿಯ ವಿರುದ್ಧ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ದೂರು ದಾಖಲಿಸಿದೆ. ಈ ಹಿನ್ನೆಲೆ ಈ ದೂರಿಗೆ ಸಂಬಂಧಿಸಿದಂತೆ ಇಡಿ ತನಿಖೆ ನಡೆದಿದೆ ಎಂದು ತಿಳಿದುಬಂದಿದೆ. 

ಹೊಸದಿಲ್ಲಿ (ಆಗಸ್ಟ್‌ 1, 2023): ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ಹೀರೋ ಮೋಟೋಕಾರ್ಪ್ ಕಾರ್ಯನಿರ್ವಾಹಕ ಅಧ್ಯಕ್ಷ ಪವನ್ ಮುಂಜಾಲ್ ಮತ್ತು ಇತರರ ವಿರುದ್ಧ ರೇಡ್‌ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ನಿಬಂಧನೆಗಳ ಪ್ರಕಾರ ದೆಹಲಿ ಮತ್ತು ನೆರೆಯ ಗುರುಗ್ರಾಮ್‌ನಲ್ಲಿರುವ ಆವರಣದಲ್ಲಿ ಶೋಧ ಕಾರ್ಯ ನಡೆಸಲಾಗಿದೆ. 

ಆದರೆ, ಈ ಸಂಬಂಧ ಜಾರಿ ನಿರ್ದೇಶನಾಲಯ ತಕ್ಷಣವೇ ರೇಡ್‌ನ ವಿವರಗಳನ್ನು ಹಂಚಿಕೊಳ್ಳಲಿಲ್ಲ ಎಂದು ತಿಳಿದುಬಂದಿದೆ. ಅಘೋಷಿತ ವಿದೇಶಿ ಕರೆನ್ಸಿಯನ್ನು ಸಾಗಿಸಿದ ಆರೋಪದ ಮೇಲೆ ತನಿಖೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಪವನ್ ಮುಂಜಾಲ್‌ಗೆ ನಿಕಟವಾಗಿರುವ ವ್ಯಕ್ತಿಯ ವಿರುದ್ಧ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ದೂರು ದಾಖಲಿಸಿದೆ. ಈ ಹಿನ್ನೆಲೆ ಈ ದೂರಿಗೆ ಸಂಬಂಧಿಸಿದಂತೆ ಇಡಿ ತನಿಖೆ ನಡೆದಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಇದನ್ನು ಓದಿ: ನಾನಿಲ್ಲದಿದ್ರೆ ರಾಜಸ್ಥಾನ ಸಿಎಂ ಜೈಲಲ್ಲಿರ್ತಿದ್ರು; ಇಡಿ, ಐಟಿ ರೇಡ್‌ ವೇಳೆ ಬಚಾವ್ ಮಾಡಿದ್ದೆ: ಕಾಂಗ್ರೆಸ್‌ ಶಾಸಕ

ಈ ಮಧ್ಯೆ, ತೆರಿಗೆ ವಂಚನೆ ತನಿಖೆಯ ಭಾಗವಾಗಿ ಕಳೆದ ವರ್ಷ ಮಾರ್ಚ್‌ನಲ್ಲಿ ಆದಾಯ ತೆರಿಗೆ ಇಲಾಖೆಯು ಪವನ್‌ ಮುಂಜಾಲ್ ಮತ್ತು ದೇಶದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟಾರ್‌ಕಾರ್ಪ್ ಕಚೇರಿಗಳ ಮೇಲೆ ರೇಡ್‌ ನಡೆಸಿತ್ತು. Hero MotoCorp ಕ್ಯಾಲೆಂಡರ್ ವರ್ಷದಲ್ಲಿ ಯುನಿಟ್ ವಾಲ್ಯೂಮ್ ಮಾರಾಟಕ್ಕೆ ಸಂಬಂಧಿಸಿದಂತೆ 2001 ರಲ್ಲಿ ವಿಶ್ವದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕರಾಗಿತ್ತು. ಮತ್ತು ಕಳೆದ 20 ಸತತ ವರ್ಷಗಳಿಂದ ನಂ. 1 ಆಗೇ ಉಳಿದಿದೆ. 

ಮಾರ್ಚ್ 2022 ರಲ್ಲಿ, ಆದಾಯ ತೆರಿಗೆ ಇಲಾಖೆಯು ಹೀರೋ ಮೋಟೋಕಾರ್ಪ್ ಕಚೇರಿಯಲ್ಲಿ ತೆರಿಗೆ ವಂಚನೆ ಆರೋಪದ ಮೇಲೆ ಹುಡುಕಾಟ ನಡೆಸಿದಾಗಲೂ ಪವನ್‌ ಮೂಂಜಾಲ್‌ ನಿವಾಸದ ಮೇಲೆ ಇಡಿ ರೇಡ್‌ ನಡೆಸಿತ್ತು. 

ಇದನ್ನೂ ಓದಿ: I.N.D.I.A ಒಕ್ಕೂಟಕ್ಕೆ ಶಾಕ್: ಲಾಲೂ ಯಾದವ್‌, ಕುಟುಂಬಸ್ಥರ 6 ಕೋಟಿ ರೂ. ಮೌಲ್ಯದ ಆಸ್ತಿ ಸೀಜ್‌!

 PMLA ಎಂದರೇನು?
ತೆರಿಗೆ ವಂಚನೆ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳ ವಿರುದ್ಧ ಹೋರಾಡುವ ಪ್ರಯತ್ನದಲ್ಲಿ, 2002 ರಲ್ಲಿ ಮನಿ ಲಾಂಡರಿಂಗ್ ತಡೆಗಟ್ಟುವಿಕೆ ಕಾಯ್ದೆ (PMLA) ಜಾರಿಗೆ ತರಲಾಯಿತು. ಈ ಕಾಯ್ದೆಯು ಅಕ್ರಮವಾಗಿ ಗಳಿಸಿದ ಮೂಲಗಳಿಂದ ಗಳಿಸಿದ ಆಸ್ತಿಯನ್ನು ವಶಪಡಿಸಿಕೊಳ್ಳಲು ಸರ್ಕಾರ ಅಥವಾ ಸಾರ್ವಜನಿಕ ಪ್ರಾಧಿಕಾರವನ್ನು ಶಕ್ತಗೊಳಿಸುತ್ತದೆ. ಅಕ್ರಮವಾಗಿ ಗಳಿಸಿದ ಹಣವನ್ನು ಕಾನೂನುಬದ್ಧ ಹಣವನ್ನಾಗಿ ಪರಿವರ್ತಿಸುವ ಅತಿರೇಕದ ಅಭ್ಯಾಸಕ್ಕೆ ಕಡಿವಾಣ ಹಾಕುವ ಉದ್ದೇಶವನ್ನು ಈ ಕಾಯ್ದೆ ಹೊಂದಿದೆ.

ವ್ಯಕ್ತಿಯೊಬ್ಬರು ಅಕ್ರಮ ಹಣ ವರ್ಗಾವಣೆಯಲ್ಲಿ ತಪ್ಪಿತಸ್ಥರೆಂದು ಕಂಡುಬಂದರೆ ಅವರು ಮೂರರಿಂದ ಏಳು ವರ್ಷಗಳವರೆಗೆ ಜೈಲು ಸೇರಬಹುದು. ತಪ್ಪಿತಸ್ಥ ವ್ಯಕ್ತಿ ದಂಡಕ್ಕೂ ಗುರಿಯಾಗುತ್ತಾರೆ.

ಇದನ್ನೂ ಓದಿ: ಮೋದಿ ರ‍್ಯಾಲಿ ವೇಳೆ ಬಾಂಬ್ ಸ್ಫೋಟ ಪ್ರಕರಣ: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ NIA ರೇಡ್‌

 ಪ್ರಸ್ತುತ, Hero Motorcorp ದೇಶದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿದೆ. ಇದು ಕಳೆದ ಎರಡು ದಶಕಗಳಲ್ಲಿ ತನ್ನ ಜಾಗತಿಕ ಅಸ್ತಿತ್ವವನ್ನು ಬಲಪಡಿಸಿದೆ. ಪ್ರಸ್ತುತ, ಇದು ಏಷ್ಯಾ, ಆಫ್ರಿಕಾ ಮತ್ತು ದಕ್ಷಿಣ ಮತ್ತು ಮಧ್ಯ ಅಮೆರಿಕದ 40 ದೇಶಗಳಲ್ಲಿ ತನ್ನ ಉತ್ಪನ್ನಗಳನ್ನು ರಫ್ತು ಮಾಡುತ್ತದೆ.

ಹೀರೋ ಮೋಟೋಕಾರ್ಪ್‌ನ ಅಧ್ಯಕ್ಷ ಮತ್ತು ನಿರ್ದೇಶಕರಲ್ಲದೆ, ಪವನ್ ಮುಂಜಾಲ್ ಮುಂಜಾಲ್ ಆಕ್ಮೆ ಪ್ಯಾಕೇಜಿಂಗ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಪ್ಯಾನ್ ಮೈನಿಂಗ್ ಪ್ರೈವೇಟ್ ಲಿಮಿಟೆಡ್, ಬಹದ್ದೂರ್ ಚಂದ್ ಇನ್ವೆಸ್ಟ್‌ಮೆಂಟ್ ಪ್ರೈವೇಟ್ ಲಿಮಿಟೆಡ್, ಹೀರೋ ಇನ್ವೆಸ್ಟ್‌ಕಾರ್ಪ್ ಪ್ರೈವೇಟ್ ಲಿಮಿಟೆಡ್, ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್‌ ಹೀರೋ ಫ್ಯೂಚರ್ ಎನರ್ಜಿಸ್ ಗ್ಲೋಬಲ್ ಲಿಮಿಟೆಡ್ ಮತ್ತು ರಾಕ್‌ಮ್ಯಾನ್ ಇಂಡಸ್ಟ್ರೀಸ್ ಲಿಮಿಟೆಡ್‌ನ ನಿರ್ದೇಶಕರ ಮಂಡಳಿಯ ಭಾಗವಾಗಿದ್ದಾರೆ.

ಇದನ್ನೂ ಓದಿ: ಸೈಬರ್‌ ಕ್ರಿಮಿನಲ್ಸ್‌ ವಿರುದ್ಧ 5000 ಪೊಲೀಸರ ದಾಳಿ: ನೋಯ್ಡಾ ಬಳಿಯ 300 ಪ್ರದೇಶದಲ್ಲಿ ಕಾರ್ಯಾಚರಣೆ; 125 ವಂಚಕರ ವಶಕ್ಕೆ