ಲಕ್ನೋ(ಜ.24): ಕೊರೋನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ 5 ರಾಜ್ಯಗಳು ಕೊರೋನಾ ಸಂಬಂಧ ಹೊಸ ನಿರ್ಬಂಧಗಳನ್ನು ಹೇರಿದೆ. ಹಾಗೆಯೇ ವಿಮಾನ ನಿಲ್ದಾಣ ಮತ್ತು ಗಡಿ ಪ್ರದೇಶಗಳಲ್ಲಿ ಕೊರೋನಾ ಪರೀಕ್ಷೆ ಮಾಡುವುದನ್ನು ಕಡ್ಡಾಯ ಮಾಡಿದೆ.

ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿತ್ತು. ಈ ನಿಟ್ಟಿನಲ್ಲಿ ಈ ಎರಡೂ ರಾಜ್ಯಗಳು ಕಠಿಣ ಲಾಕ್ಡೌನ್ ಜಾರಿ ಮಾಡಿದೆ. ಹಲವು ನಗರಗಳಲ್ಲಿ ಕರ್ಫ್ಯೂ ಕೂಡಾ ಜಾರಿ ಮಾಡಲಾಗಿದೆ.

ಬೆಂಗಳೂರು: ಅಪಾರ್ಟ್‌ಮೆಂಟಲ್ಲಿ 20 ಜನಕ್ಕೆ ಸೋಂಕು, ಆತಂಕದಲ್ಲಿ ಜನತೆ..!

ಉತ್ತರ ಪ್ರದೇಶ, ಮಧ್ಯ ಪ್ರದೇಶ, ಗುಜರಾತ್ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ಇಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಕಳೆದ 15 ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ದಿಢೀರ್ ಏರಿಕೆಯಾಗಿದೆ.

ಕರ್ನಾಟಕದಲ್ಲಿಯೂ ಕೇರಳ ಸಂಪರ್ಕಿಸುವ ಗಡಿಗಳಲ್ಲಿ ಕೊರೋನಾ ಪರೀಕ್ಷೆ ನಡೆಸಲಾಗುತ್ತಿದೆ. ಕೇರಳದಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

ಮಾಸ್ಕ್, ಅಂತರ ಮರೆತ್ರೆ, ಜನ- ಜಾತ್ರೆ ಹೀಗೆ ಇದ್ರೆ ಕೊರೊನಾ 2 ನೇ ಅಲೆ

ರಾಜಸ್ಥಾನದಲ್ಲಿ ಜೋಧ್ಪುರದಲ್ಲಿ ಮಾರ್ಚ್ 21ರ ತನಕ ಸೆಕ್ಷನ್ 144 ಜಾರಿ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಅಮರಾವತಿ, ಮುಂಬೈ, ನಾಗ್ಪುರ, ಪುಣೆ, ಅಂಧೇರಿ ಸೇರಿ ಹಲವು ಕಂಡೆ ಕ್ಲಾಂಪ್ಡೌನ್ ಮಾಡಲಾಗಿದೆ.

ಭಾರತದಲ್ಲಿ 10,584 ಹೊಸ ಪ್ರಕರಣಗಳು ಸೇರಿ ಕೊರೋನಾ ಒಟ್ಟು ಸಂಖ್ಯೆ 1,10,16,434 ದಾಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.