ದೆಹಲಿ ಸ್ಫೋಟ ಬೆನ್ನಲ್ಲೇ ಎಲ್ಲಾ ವಿಮಾನ ನಿಲ್ದಾಣ ಸೇರಿ ಹಲವೆಡೆ ಹೈ ಅಲರ್ಟ್ ಘೋಷಣೆ!

ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಲಘು ಬಾಂಬ್ ಸ್ಫೋಟದ ಬೆನ್ನಲ್ಲೇ ದೇಶದ ಪ್ರಮುಖ ವಿಮಾನ ನಿಲ್ದಾಣ, ಸರ್ಕಾರಿ ಕಚೇರಿ ಸೇರಿದಂತ ಪ್ರಮುಖ ತಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

High alert issued at all airports government buildings after Delhi blast ckm

ದೆಹಲಿ(ಜ.29): ದೆಹಲಿಯ ಇಸ್ರೇಲ್ ರಾಭಾರಿ ಕಚೇರಿ ಬಳಿ ಸಂಭವಿಸಿದ ಬಾಂಬ್ ಸ್ಫೋಟಕ್ಕ ಹಲವು ವಾಹನಗಳು ಜಖಂ ಗೊಂಡಿದೆ. ಅದೃಷ್ಠವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ದೆಹಲಿ ಬಾಂಬ್ ಸ್ಫೋಟದ ಬೆನ್ನಲ್ಲೇ ಇದೀಗ ಎಲ್ಲಾ ವಿಮಾನ ನಿಲ್ದಾಣಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.

ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟ; 4-5 ವಾಹನ ಡ್ಯಾಮೇಜ್

ವಿಮಾನ ನಿಲ್ದಾಣ, ಸರ್ಕಾರಿ ಕಚೇರಿ, ಪ್ರಮುಖ ತಾಣ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ದೆಹಲಿ ಸುತ್ತಮುತ್ತ ಹೆಚ್ಚುವರಿ ಭದ್ರತಾ ಪಡೆ ನಿಯೋಜಿಸಲಾಗಿದೆ. ಪ್ರತಿ ವಾಹನಗಳ ತಪಾಸನೆ ನಡೆಯುತ್ತಿದೆ. ಎಲ್ಲಾ ರಾಜ್ಯ ಹಾಗೂ ನಗರಗಳಲ್ಲಿ ಹೆಚ್ಚುವರಿ ಭದ್ರತಾ ಪಡೆ ನಿಯೋಜಿಸಲು ಸೂಚಿಸಲಾಗಿದೆ.

 

ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಸ್ರೇಲ್ ಕಚೇರಿ ಕಟ್ಟದ ಬಳಿ ಬಾಂಬ್ ಸ್ಫೋಟಗೊಂಡಿದೆ. ಇಲ್ಲಿ ಪಾರ್ಕ್ ಮಾಡಿದ್ದ ಕಾರುಗಳು ಜಖಂ ಹೊಂಡಿದೆ. ಹೂ ಕುಂಡದಲ್ಲಿ IED ಸ್ಫೋಟಕವಿಟ್ಟು ಬಾಂಬ್ ಸ್ಫೋಟಿಸಲಾಗಿದೆ ಅನ್ನೋ ಮಾಹಿತಿಯನ್ನು ಪೊಲೀಸರು ಬಹಿರಂಗ ಪಡಿಸಿದ್ದಾರೆ

Latest Videos
Follow Us:
Download App:
  • android
  • ios