ನವದೆಹಲಿ(ಆ.11): ಕೊರೋನಾ ವೈರಸ್‌ನ ಆತಂಕದ ಮಧ್ಯೆಯೂ ಸೆಪ್ಟೆಂಬರ್‌ ಅಂತ್ಯ ಅಥವಾ ಅಕ್ಟೋಬರ್‌ನಲ್ಲಿ ಪ್ರೌಢಶಾಲೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಆದರೆ, ಈ ಸಂಬಂಧ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

SSLC ಫಲಿತಾಂಶ: ಚಿಕ್ಕಬಳ್ಳಾಪುರ ನಂ.1: ಸಚಿವ ಸುಧಾಕರ್‌ ಸಂತಸ

ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ಶಾಲೆಗಳ ಆರಂಭಕ್ಕೆ ಹೆಚ್ಚಿನ ರಾಜ್ಯ ಸರ್ಕಾರಗಳು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಶಾಲೆಗಳ ಆರಂಭಕ್ಕೆ ಯಾವುದೇ ಕಾಲಮಿತಿ ನಿಗದಿಪಡಿಸಿಕೊಂಡಿಲ್ಲ. ಆದರೆ, ಹೈಸ್ಕೂಲುಗಳನ್ನು ಮಾತ್ರ ಆರಂಭಿಸುವ ಸಾಧ್ಯತೆಯ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಒಂದು ವೇಳೆ ಈ ಬಗ್ಗೆ ನಿರ್ಧಾರ ಕೈಗೊಂಡರೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗುವುದು. ಪರಿಸ್ಥಿತಿಯನ್ನು ಆಧರಿಸಿ ರಾಜ್ಯ ಸರ್ಕಾರಗಳು ಪ್ರೌಢಶಾಲೆಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಇದೇ ವೇಳೆ ಪ್ರಸಕ್ತ ಶೈಕ್ಷಣಿಕ ವರ್ಷ ಶೂನ್ಯ ಸಾಧನೆಯ ವರ್ಷ ಆಗಿರುವುದಿಲ್ಲ. ವರ್ಷಾಂತ್ಯದ ವೇಳೆಗೆ ಪರೀಕ್ಷೆಗಳನ್ನು ಆಯೋಜಿಸುವ ವಿಶ್ವಾಸವಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಂಸದೀಯ ಸಮಿತಿಯೊಂದಕ್ಕೆ ತಿಳಿಸಿದ್ದಾರೆ.

ಪೌರ ಕಾರ್ಮಿಕರ ಕಾಲು ತೊಳೆದು ಪೂಜೆ ಮಾಡಿ ಕೃತಜ್ಞತೆ ಸಲ್ಲಿಸಿದ ಬಜಾರ್ ನಟ ಧನ್ವೀರ್!

ಇದೇ ವೇಳೆ ಸಮಿತಿ ಮುಖ್ಯಸ್ಥ ವಿನಯ್‌ ಸಹಸ್ರಬುದ್ಧೆ, ಸಮುದಾಯ ರೆಡಿಯೋ ಹಾಗೂ ಟ್ರಾನ್ಸಿಸ್ಟರ್‌ಗಳ ಮೂಲಕ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಬಗ್ಗೆ ಹಾಗೂ ಕ್ವಶ್ಚನ್‌ ಬ್ಯಾಂಕ್‌ ಸ್ಥಾಪಿಸಿ ಪರೀಕ್ಷೆ ಆಯೋಜಿಸುವ ಬಗ್ಗೆ ಸಲಹೆ ನೀಡಿದ್ದಾರೆ.