ಅಸ್ಸಾಂ ನೂತನ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ ಆಯ್ಕೆ!
* ಗುವಾಹಟಿಯಲ್ಲಿ ಬಿಜೆಪಿ ಪಕ್ಷದ ಶಾಸಕಾಂಗ ಪಕ್ಷದ ಸಭೆ
* ಗುವಾಹಟಿಯಲ್ಲಿ ನಡೆದ ಬಿಜೆಪಿ ಪಕ್ಷದ ಶಾಸಕಾಂಗ ಪಕ್ಷದ ಸಭೆ
* ಭಾನುವಾರ ಬೆಳಗ್ಗೆ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸರ್ಬಾನಂದ ಸೋನೋವಾಲ್
ಗುವಾಹಟಿ(ಮೇ.09): ಅಸ್ಸಾಂನ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಗುವಾಹಟಿಯಲ್ಲಿ ನಡೆದ ಬಿಜೆಪಿ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಅವಿರೋಧವಾಗಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಇಂದು, ಭಾನುವಾರ ಬೆಳಗ್ಗೆ ಸರ್ಬಾನಂದ ಸೋನೋವಾಲ್ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಗವರ್ನರ್ ಜಗದೀಶ್ ಮುಖಿ , ಈ ರಾಜೀನಾಮೆಯನ್ನು ಸೋನೋವಾಲ್ ರಾಜ್ಯಪಾಲರು ಅಂಗೀಕರಿಸಿದ್ದರು.
126 ಸದಸ್ಯ ಬಲವುಳ್ಳ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ 60 ಕ್ಷೇತ್ರಗಳಲ್ಲಿ ಹಾಗೂ ಮಿತ್ರಪಕ್ಷಗಳಾದ ಎಜಿಪಿ 9 ಕ್ಷೇತ್ರಗಳಲ್ಲಿ, ಯುಪಿಪಿಎಲ್ 6 ಕ್ಷೇತ್ರಗಳಲ್ಲಿ ಜಯ ಸಾಧಿಸಿವೆ.
ಹಿಮಂತ ಬಿಸ್ವಾ ಶರ್ಮಾ ಅವರು ಅಸ್ಸಾಂನ ಮುಂದಿನ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.