ನಿಜಾನಾ?: ಅಯೋಧ್ಯೆ ತೀರ್ಪಿಗೆ ಹಿಂದೂ ಮಹಾಸಭಾ ಮೇಲ್ಮನವಿ?
ಸುಪ್ರೀಂಕೋರ್ಟ್ ಅಯೋಧ್ಯೆ ತೀರ್ಪಿಗೆ ಮೇಲ್ಮನವಿ?/ ಮಸೀದಿಗೆ ಜಾಗ ನೀಡುವ ಸುಪ್ರೀಂಕೋರ್ಟ್ ನಿರ್ಧಾರಕ್ಕೆ ವಿರೋಧ?/ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅಖಿಲ ಭಾರತ ಹಿಂದೂ ಮಹಾಸಭಾ ಚಿಂತನೆ/ ‘ದೇವಾಲಯ ಇದೆ ಎಂದು ಸಾಬೀತಾಗಿದ್ದರೆ ಮಸೀದಿ ನಿರ್ಮಾಣಕ್ಕೆ ಜಾಗ ಏಕೆ’?/ ತೀರ್ಪಿನ ಸಂಪೂರ್ಣ ಅಧ್ಯಯನ ಬಳಿಕ ನಿರ್ಧಾರ ಎಂದ ಅಧ್ಯಕ್ಷ ಶಿಶಿರ್ ಚತುರ್ವೇದಿ/
ನವದೆಹಲಿ(ನ.13): ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡಬೇಕು ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ಅಖಿಲ ಭಾರತ ಹಿಂದೂ ಮಹಾಸಭಾ ಪ್ರಶ್ನಿಸಲಿದೆ ಎನ್ನಲಾಗಿದೆ.
ಅಯೋಧ್ಯೆಯ ಪ್ರಮುಖ ಸ್ಥಳದಲ್ಲೇ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿಯನ್ನು ಸುನ್ನಿ ವಕ್ಫ್ ಬೋರ್ಡ್ ಗೆ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ರಾಮನಿಗೆ ದೊರೆತ ಅಯೋಧ್ಯೆ: ಶತಮಾನಗಳ ನಂಬಿಕೆಗೆ ಸುಪ್ರೀಂ ತೀರ್ಪಿನ ನೈವೇದ್ಯೆ!
ಆದರೆ ಈ ನಿರ್ಧಾರಕ್ಕೆ ನಮ್ಮ ಆಕ್ಷೇಪವಿದ್ದು, ಈ ಸಂಬಂಧ ಪರಿಶೀಲನಾ ಅರ್ಜಿ ಸಲ್ಲಿಸಲು ಚಿಂತಿಸುತ್ತಿರುವುದಾಗಿ ಹಿಂದೂ ಮಹಾಸಭಾ ಹೇಳಿದೆ.
ಅಯೋಧ್ಯೆಯಲ್ಲಿ ದೇವಾಲಯ ಇತ್ತು ಎಂದು ಸಾಬೀತಾಗಿದ್ದರೆ ಸುನ್ನಿ ವಕ್ಫ್ ಬೋರ್ಡ್ ಗೆ ಭೂಮಿ ಏಕೆ ಕೊಡಬೇಕು ಎಂಬುದು ಹಿಂದೂ ಮಹಾಸಭಾ ವಾದವಾಗಿದೆ.
ಬಾಬರ್ ಅಯೋಧ್ಯೆ(5 ಎಕರೆ)ಯಲ್ಲೇ ಇರಲಿದ್ದಾನೆ: ಸಹೋದರರ ನಂಬಿಕೆ ಮುಖ್ಯ ಎಂದ ಸುಪ್ರೀಂ!
ಸದ್ಯ ಸುಪ್ರೀಂಕೋರ್ಟ್ ತೀರ್ಪನ್ನು ಅಧ್ಯಯನ ಮಾಡಲಾಗುತ್ತಿದ್ದು, ನಂತರ ಪರಿಶೀಲನಾ ಅರ್ಜಿ ಸಲ್ಲಿಸುವ ಕುರಿತು ನಿರ್ಧಾರ ಪ್ರಕಟಿಸಲಾಗುವುದು ಎಂದು ಅಖಿಲ ಭಾರತೀಯ ಹಿಂದೂ ಮಹಾಸಭಾ ಅಧ್ಯಕ್ಷ ಶಿಶಿರ್ ಚತುರ್ವೇದಿ ಸ್ಪಷ್ಟಪಡಿಸಿದ್ದಾರೆ.
ಅಯೋಧ್ಯೆ ತೀರ್ಪು: ರಾಮಜನ್ಮಭೂಮಿ ಸನಿಹ ಮಸೀದಿಗಿಲ್ಲ ಜಾಗ?