Asianet Suvarna News Asianet Suvarna News

ಪ್ರಾಥಮಿಕ ಕೃಷಿ ಸಾಲ ಸಂಸ್ಥೆಗಳಲ್ಲಿ ಪೆಟ್ರೋಲಿಯಂ, ಪಡಿತರ ಸೇಲ್‌?: ಅಮಿತ್‌ ಶಾ

ಪ್ರಾಥಮಿಕ ಕೃಷಿ ಸಾಲ ಸಂಘಗಳಿಗೆ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟ, ನ್ಯಾಯಬೆಲೆ ಅಂಗಡಿಗಳನ್ನು ನಡೆಸುವುದು ಹಾಗೂ ಆಸ್ಪತ್ರೆ, ಶೈಕ್ಷಣಿಕ ಸಂಸ್ಥೆಗಳ ಅಭಿವೃದ್ಧಿ ಮೊದಲಾದ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಅನುಮತಿ ನೀಡಲು ಕೇಂದ್ರ ಸರ್ಕಾರವು ಹೊಸ ಮಸೂದೆಯನ್ನು ಪ್ರಸ್ತಾಪಿಸಿದೆ. 

Home Minister Amit Shah to attend 100th International Day of Cooperatives celebration in New Delhi gvd
Author
Bangalore, First Published Jul 5, 2022, 4:00 AM IST

ನವದೆಹಲಿ (ಜು.05): ಪ್ರಾಥಮಿಕ ಕೃಷಿ ಸಾಲ ಸಂಘಗಳಿಗೆ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟ, ನ್ಯಾಯಬೆಲೆ ಅಂಗಡಿಗಳನ್ನು ನಡೆಸುವುದು ಹಾಗೂ ಆಸ್ಪತ್ರೆ, ಶೈಕ್ಷಣಿಕ ಸಂಸ್ಥೆಗಳ ಅಭಿವೃದ್ಧಿ ಮೊದಲಾದ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಅನುಮತಿ ನೀಡಲು ಕೇಂದ್ರ ಸರ್ಕಾರವು ಹೊಸ ಮಸೂದೆಯನ್ನು ಪ್ರಸ್ತಾಪಿಸಿದೆ. 100ನೇ ಅಂತಾರಾಷ್ಟ್ರೀಯ ಸಹಕಾರಿ ದಿನಾಚರಣೆಯ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಹಕಾರ ಸಚಿವ ಅಮಿತ್‌ ಶಾ ಈ ಪ್ರಸ್ತಾಪಿತ ಮಸೂದೆಯ ಬಗ್ಗೆ ಸೋಮವಾರ ಘೋಷಿಸಿದ್ದಾರೆ.

‘ಸಹಕಾರ ಸಚಿವಾಲಯ ಮಂಡಿಸಿದ ಈ ಮಸೂದೆಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್‌ ಸಮಿತಿಯು ಈಗಾಗಲೇ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರಗಳು ಹಾಗೂ ಇತರೆ ಮಧ್ಯಸ್ಥಿಕೆದಾರರಿಗೆ ತಮ್ಮ ಸಲಹೆಗಳನ್ನು ಜು.19ರ ಒಳಗಾಗಿ ತಿಳಿಸುವಂತೆ ಸೂಚನೆ ನೀಡಲಾಗಿದೆ’ ಎಂದರು. ಪ್ರಾಥಮಿಕ ಕೃಷಿ ಸಾಲ ಸಂಘಗಳು ತಮ್ಮ ಸದಸ್ಯರಿಗೆ ಕೃಷಿ ಚಟುವಟಿಕೆಗಳಿಗಾಗಿ ಅಲ್ಪ ಹಾಗೂ ಮಧ್ಯಮಾವಧಿಯ ಸಾಲ ಒದಗಿಸುತ್ತವೆ. ಪ್ರಸ್ತುತ ಮಾದರಿ ನಿಯಮಾವಳಿಗಳು ಪ್ರಾಥಮಿಕ ಕೃಷಿ ಸಾಲ ಸಂಘಗಳಿಗೆ ತಮ್ಮ ಪ್ರಮುಖ ವ್ಯವಹಾರ ಹೊರತುಪಡಿಸಿ ಇತರೆ ಚಟುವಟಿಕೆಗಳಲ್ಲಿ ಭಾಗಿಯಾಗಲು ಅನುಮತಿ ಕೊಡುವುದಿಲ್ಲ. 

ಶಾ ಮಾತು ಉಳಿಸಿಕೊಂಡಿದ್ದರೆ ಅಘಾಡಿ ಹುಟ್ಟುತ್ತಿರಲಿಲ್ಲ: ಉದ್ಧವ್ ಠಾಕ್ರೆ

ಪ್ರಸ್ತಾಪಿತ ಮಸೂದೆಯು ಸಂಘಗಳಿಗೆ ಬ್ಯಾಂಕ್‌ ಮಿತ್ರ ಹಾಗೂ ಸಾಮಾನ್ಯ ಸೇವಾ ಕೇಂದ್ರವಾಗಿ ಕಾರ್ಯ ನಿರ್ವಹಿಸಲು ಅನುಮತಿ ನೀಡುತ್ತದೆ. ಹೀಗಾಗಿ ಈ ಸಂಘಗಳು ನ್ಯಾಯಬೆಲೆ ಅಂಗಡಿ ಸ್ಥಾಪಿಸುವುದು, ರೈತರಿಗೆ ಧಾನ್ಯ ಸಂಗ್ರಹಣೆಗೆ ಉಗ್ರಾಣ ಸೌಲಭ್ಯವ ಒದಗಿಸುವುದು ಮಾತ್ರವಲ್ಲದೇ ಶಿಕ್ಷಣ, ಆರೋಗ್ಯ, ಪ್ರವಾಸ, ಪರಿಸರ, ಸುಸ್ಥಿರ ಬೆಳವಣಿಗೆ ಚಟುವಟಿಕೆಗಳಲ್ಲಿ ಕಾರ್ಯ ನಿರ್ವಹಿಸಬಹುದಾಗಿದೆ. ಪ್ರಸ್ತುತ ದೇಶದಲ್ಲಿ 63,000 ಪ್ರಾಥಮಿಕ ಕೃಷಿ ಸಾಲ ಸಂಘಗಳಿದ್ದು, ಸುಮಾರು 13 ಕೋಟಿ ರೈತರು ಇದರ ಸದಸ್ಯತ್ವ ಪಡೆದಿದ್ದಾರೆ. 2025ರ ವೇಳೆಗೆ 3 ಲಕ್ಷ ಪ್ರಾಥಮಿಕ ಕೃಷಿ ಸಾಲ ಸಂಘಗಳ ಸ್ಥಾಪನೆಯ ಗುರಿಯನ್ನು ಸರ್ಕಾರ ಹೊಂದಿದೆ.

ಮುಂದಿನ 30 ರಿಂದ 40 ವರ್ಷ ಬಿಜೆಪಿ ಯುಗ: ಭಾರತ ವಿಶ್ವಗುರುವಾಗುತ್ತಿದೆ. ಸಂಪೂರ್ಣ ಭಾರತದಲ್ಲಿ ಬಿಜೆಪಿ ಆವರಿಸುತ್ತಿದೆ. ಜನಪರ ಆಡಳಿತ, ಅಭಿವೃದ್ಧಿಗಾಗಿ ಜನರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಹೀಗಾಗಿ ಮುಂದಿನ 30 ರಿಂದ 40 ವರ್ಷ ಬಿಜೆಪಿ ಯುಗ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ತೆಲಂಗಾಣದಲ್ಲಿ ಆಯೋಜಿಸಿದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅಮಿತ್ ಶಾ, ಕಟುಂಬ ರಾಜಕಾರಣ, ಜಾತೀಯತೆ ಹಾಗೂ ತುಷ್ಟೀಕರಣದ ರಾಜಕೀಯದಿಂದ ದಶಕಗಳ ವರೆಗೆ ಭಾರತೀಯರು ಸಂಕಷ್ಟ ಅನುಭವಿಸಿದ್ದಾರೆ. 

2002 ಗುಜರಾತ್‌ ಹಿಂಸಾಚಾರದ ವೇಳೆ ನಡೆದಿದ್ದೇನು? ಸಂದರ್ಶನದಲ್ಲಿ ಮೌನ ಮುರಿದ ಗೃಹ ಸಚಿವ ಅಮಿತ್ ಶಾ!

2014ರಿಂದ ನರೇಂದ್ರ ಮೋದಿ ಆಡಳಿತ ದೇಶದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಹೊಸ ಬದಲಾವೆಗೆ ನಾಂದಿ ಹಾಡಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ತೆಲಂಗಾಣದ ಕುಟುಂಬ ರಾಜಕೀಯ ಅಂತ್ಯಗೊಳಿಸಲು ಬಿಜೆಪಿ ಶಕ್ತವಾಗಿದೆ. ಇತರ ರಾಜ್ಯಗಳು ಹಾಗೂ ಕೇಂದ್ರದ ಆಡಳಿತ ಗಮನಿಸಿರುವ ತೆಲಂಗಾಣ ಜನತೆ ಇದೀಗ ಬಿಜೆಪಿಯತ್ತ ಒಲವು ತೋರಿದ್ದಾರೆ. ತೆಲಂಗಾಣ ಮಾತ್ರವಲ್ಲ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತಮಿಳುನಾಡು, ಒಡಿಶಾದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

Follow Us:
Download App:
  • android
  • ios