ವಿದೇಶದಲ್ಲಿರುವ ಭಾರತೀಯರಿಗೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲು ಅನುಮತಿ
ಆಯೋಧ್ಯೆಯಲ್ಲಿ ಭವ್ಯವಾದ ಶ್ರೀ ರಾಮ ಮಂದಿರ ನಿರ್ಮಾಣವಾಗುತ್ತಿದೆ. 2024ರ ಜನವರಿಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದೆ. ಇದರ ನಡುವೆ ಕೇಂದ್ರ ಗೃಹ ಸಚಿವಾಲಯ ವಿದೇಶದಲ್ಲಿರುವ ಭಾರತೀಯರಿಗೆ ಸಿಹಿ ಸುದ್ದಿ ನೀಡಿದೆ. ಇದೀಗ ವಿದೇಶದಲ್ಲಿರುವ ಭಾರತೀಯರೂ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲು ಅನುಮತಿ ನೀಡಿದೆ.

ನವದೆಹಲಿ(ಅ.18) ಆಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಆರಂಭಗೊಳ್ಳುತ್ತಿದ್ದಂತೆ ವಿದೇಶದಲ್ಲಿದ್ದ ಭಾರತೀಯರಿಗೆ ನಿರಾಸೆಯಾಗಿತ್ತು. ಕಾರಣ ವಿದೇಶದಲ್ಲಿನ ಭಾರತೀಯರು ಶ್ರೀ ರಾಮ ಮಂದಿರ ನಿರ್ಮಾಣದಲ್ಲಿ ಅಳಿಲು ಸೇವೆ ನೀಡಲು ಕೇಂದ್ರ ಗೃಹ ಸಚಿವಾಲಯದ ಅನುಮತಿ ಸಿಕ್ಕಿರಲಿಲ್ಲ. ಇದೀಗ ವಿದೇಶದಲ್ಲಿ ನೆಲೆಸಿರುವ ಭಾರತೀಯರು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲು ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ. ಹೌದು. ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿದೇಶಿ ಫಂಡ್ ಪಡೆಯಲು ಗ್ರೀನ್ ಸಿಗ್ನಲ್ ನೀಡಲಾಗಿದೆ.
ವಿದೇಶಿ ಕೊಡುಗೆ ನಿಯಂತ್ರಣ ಕಾಯಿದೆ (FCRA )2010ರ ಅಡಿಯಲ್ಲಿ ವಿದೇಶದಿಂದ ಸ್ವಯಂಪ್ರೇರಿತ ದೇಣಿಗೆ ಸ್ವೀಕರಿಸಲು ಅನುಮತಿ ನೀಡಲಾಗಿದೆ. ಕೇಂದ್ರ ಸಚಿವ ಗೃಹ ಸಚಿವಾಲಯ FCRA ಅಡಿಯಲ್ಲಿ ರಾಮಜನ್ಮಭೂಮಿ ತೀರ್ಥ ಟ್ರಸ್ಟ್‌ನ್ನು ನೋಂದಣಿ ಮಾಡಿಕೊಂಡಿದೆ ಎಂದು ಟ್ರಸ್ಟ್ ಹೇಳಿದೆ. ಇದೇ ವೇಳೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ರಾಮಜನ್ಮಭೂಮಿ ತೀರ್ಥ ಟ್ರಸ್ಟ್‌ನ ಅಧಿಕೃತ ಬ್ಯಾಂಕ್ ಖಾತೆಗೆ ಮಾತ್ರ ದೇಣಿಗೆ ಹಣ ನೀಡಬೇಕು. ಇತರ ಯಾವುದೇ ಮೂಲಗಳಿಂದ ದೇಣಿಗೆ ಸ್ವೀಕರಿಸುವುದಿಲ್ಲ ಎಂದು ಟ್ರಸ್ಟ್ ಸ್ಪಷ್ಟಪಡಿಸಿದೆ.
ರಾಮ ಭೂಮಿ ಪಡೆದವರಿಗೆ ಸಿಂಧ್ ಮರಳಿ ಪಡೆಯಲು ಸಾಧ್ಯವಿಲ್ಲವೇ?ಸಿಎಂ ಯೋಗಿ ಮಾತಿಗೆ ಬೆಚ್ಚಿದ ಪಾಕಿಸ್ತಾನ!
ಎನ್‌ಜಿಒ ಅಥವಾ ಟ್ರಸ್ಟ್ ವಿದೇಶಿ ಫಂಡ್ ಸ್ವೀಕರಿಸಲು FCRA ಬ್ಯಾಂಕ್ ಖಾತೆ ಹೊಂದಿರಬೇಕು. ಈ ಖಾತೆ ದೆಹಲಿಯ ಸಂಸದ್ ಮಾರ್ಗ್‌ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ರಾಂಚ್‌ನಲ್ಲಿ ಬ್ಯಾಂಕ್ ಖಾತೆ ಹೊಂದಿರಬೇಕು. ಈ ಖಾತೆಯಿಂದ ಮಾತ್ರ ವಿದೇಶಿ ದೇಣಿಗೆ ಅಥವಾ ಫಂಡ್ ಸ್ವೀಕರಿಸಲು ಸಾಧ್ಯ. ಜೂನ್ ತಿಂಗಳಲ್ಲಿ FCRA ಲೈಸೆನ್ಸ್‌ಗೆ ರಾಮಜನ್ಮಭೂಮಿ ತೀರ್ಥ ಟ್ರಸ್ಟ್ ಅರ್ಜಿ ಸಲ್ಲಿಕೆ ಮಾಡಿತ್ತು.
2020ರಲ್ಲಿ ರಾಮಜನ್ಮಭೂಮಿ ತೀರ್ಥ ಟ್ರಸ್ಟ್ ಭಾರತದಲ್ಲಿ ರಾಮ ಮಂದಿ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಲು ಆರಂಭಿಸಿತ್ತು. ದೇಶಾದ್ಯಂತ ರಾಮ ಭಕ್ತರು ದೇಣಿಗೆ ನೀಡಿದ್ದರು. ಆದರೆ ವಿದೇಶದಲ್ಲಿ ನೆಲೆಸಿರುವ ಭಾರತೀಯರು ದೇಣಿಗೆ ನೀಡಲು ಇಚ್ಚೆ ವ್ಯಕ್ತಪಡಿಸಿದ್ದರು. ಆದರೆ ಟ್ರಸ್ಟ್ ಆರಂಭಿಕ ಹಂತದಲ್ಲೇ ಸದ್ಯ ಭಾರತದಲ್ಲಿರುವ ರಾಮ ಭಕ್ತರಿಂದ ಮಾತ್ರ ದೇಣಿಗೆ ಸ್ವೀಕರಿಸಲಾಗುತ್ತದೆ ಎಂದಿತ್ತು. ಇತ್ತೀಚೆಗೆ ಜೂನ್ ತಿಂಗಳಲ್ಲಿ ವಿದೇಶಿ ದೇಣಿಗೆ ಪಡೆಯಲು ಟ್ರಸ್ಟ್ ಅರ್ಜಿ ಸಲ್ಲಿಸಿತ್ತು.
ಆಯೋಧ್ಯೆ ಶ್ರೀ ರಾಮ ಮಂದಿರಕ್ಕೆ ನೀಡಿದ ಮಸೀದಿ ಜಾಗ ವಾಪಸ್‌ಗೆ ಮುಸ್ಲಿಮರ ಪಟ್ಟು, ವಿವಾದ ಶುರು!