Asianet Suvarna News Asianet Suvarna News

ಸಂಕಷ್ಟಗಳ ಸುಳಿಯಲ್ಲಿ ಆಪ್, ಜೈಲಿನಲ್ಲಿರುವ ಸತ್ಯೇಂದ್ರ ಜೈನ್ ವಿರುದ್ದ ಸಿಬಿಐ ತನಿಖೆಗೆ ಆದೇಶ!

ಆಮ್ ಆದ್ಮಿ ಪಾರ್ಟಿ ಸಂಕಷ್ಟಗಳ ಸುಲಿಯಲ್ಲಿ ಸಿಲುಕಿದೆ. ಜೈಲು ಸೇರಿದ ಆಪ್ ನಾಯಕರ ವಿರುದ್ದ ತನಿಖೆ ತೀವ್ರಗೊಳ್ಳುತ್ತಿದೆ. ಸುದೀರ್ಘ ದಿನಗಳಿಂದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ಸಿಬಿಐ ತನಿಖೆಗೆ ಆದೇಶ ನೀಡಲಾಗಿದೆ.
 

Home ministry sanction CBI inquiry against AAP Jailed leader Satyendra Jain on Extortion case ckm
Author
First Published Mar 29, 2024, 7:41 PM IST

ನವದೆಹಲಿ(ಮಾ.29) ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಮ್ ಆದ್ಮಿ ಪಾರ್ಟಿಗೆ ಒಂದರ ಮೇಲೊಂದರಂತೆ ಸಂಕಷ್ಟಗಳು ಎದುರಾಗುತ್ತಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಬಳಿಕ ಆಪ್ ಜಂಗಾಬಲವೇ ಉಡುಗಿ ಹೋಗಿದೆ. ಇದರ ನಡುವೆ ಜೈಲಿನಲ್ಲಿ ಸರಿಸುಮಾರು 2 ವರ್ಷಗಳಿಂದ ಜೈಲಿನಲ್ಲಿರುವ ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ದ ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ ಸತ್ಯೇಂದ್ರ ಜೈನ್, ತಿಹಾರ್ ಜೈಲಿನಿಂದ ಕೋಟಿ ಕೋಟಿ ರೂಪಾಯಿ ಸುಲಿಗೆ ಮಾಡಿದ್ದಾರೆ ಅನ್ನೋ ಆರೋಪದ ಕುರಿತು ತನಿಖೆಯನ್ನು ಸಿಬಿಐಗೆ ನೀಡಲಾಗಿದೆ.

ಸತ್ಯೇಂದ್ರ ಜೈನ್‌ ಹಾಗೂ ಮಾಜಿ ಜೈಲಧಿಕಾರಿ ರಾಜ್‌ ಕುಮಾರ್‌ ಸೇರಿದಂತೆ ಹಲವರು ವಂಚಕ ಸುಕೇಶ್‌ ಚಂದ್ರಶೇಖರ್‌ ಸೇರಿದಂತೆ ಹಲವು ಕೈದಿಗಳೀಗೆ ಕಾರಾಗೃಹದಲ್ಲಿ ಸುಖ-ವೈಭೋಗ ಕಲ್ಪಿಸಲು ಸುಲಿಗೆ ಮಾಡಿದ್ದಾರೆ ಅನ್ನೋ ಆರೋಪ ಗಂಭೀರವಾಗಿದೆ. ಈ ಕುರಿತು ಹಲವು ದಾಖಲೆಗಳು ಲಭ್ಯವಾಗಿದೆ. ಇತ್ತ ವಂಚಕ ಸುಕೇಶ್ ಕೂಡ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ವಂಚಕ ಸುಕೇಶ್ ಚಂದ್ರಶೇಖರ್ ಸೇರಿದಂತೆ ಇತರ ಪ್ರಮುಖ ಕೈದಿಗಳಿಗೆ ಜೈಲಿನಲ್ಲಿ ಸುಖ ವೈಭೋಗ ಕಲ್ಪಿಸಲು ಸತ್ಯೇಂದ್ರ ಜೈನ್ ಕಂತುಗಳಲ್ಲಿ 10 ಕೋಟಿ ರೂಪಾಯಿ ಪಡೆದಿದ್ದಾರೆ ಅನ್ನೋ ಆರೋಪಕ್ಕೆ ಹಲವು ಸಾಕ್ಷ್ಯಗಳು ಲಭ್ಯವಾಗಿತ್ತು.

ಅರವಿಂದ್ ಕೇಜ್ರಿವಾಲ್‌ಗೆ ಹಿನ್ನಡೆ, ಎಪ್ರಿಲ್ 1ವರೆಗೆ ಇಡಿ ಕಸ್ಟಡಿ ವಿಸ್ತರಿಸಿದ ಕೋರ್ಟ್!

ಈ ಸಾಕ್ಷ್ಯಗಳ ಆಧಾರದಲ್ಲಿ ಸತ್ಯೇಂದ್ರ ಜೈನ್ ವಿರುದ್ಧ ಹೆಚ್ಚಿನ ತನಿಖೆ ನಡೆಸಲು ಸಿಬಿಐ ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗ ಅನುಮತಿ ನೀಡುವಂತೆ ಮನವಿ ಮಾಡಿತ್ತು. ಈ ಕುರಿತು ಲೆಫ್ಟಿನೆಂಟ್ ಗವರ್ನರ್ ಈ ವರ್ಷದ ಆರಂಭದಲ್ಲಿ ಸಿಬಿಐ ತನಿಖೆಗೆ ಅನುಮತಿ ನೀಡಿದ್ದರು. ಈ ಅನುಮತಿ ಬಳಿಕ ಕೇಂದ್ರ ಗೃಹ ಸಚಿವಾಲಯ ಇದೀಗ ಸಿಬಿಐ ತನಿಖೆಗೆ ಆದೇಶ ಹೊರಡಿಸಿದೆ.  

ವಂಚಕ ಸುಕೇಶ್ ಚಂದ್ರಶೇಖರ್‌ ಜೈಲಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ. ಇಷ್ಟೇ ಅಲ್ಲ ಇದೇ ಜೈಲಿನಿಂದ ಕೆಲ ಉದ್ಯಮಿಗಳಿಂದ ಕೋಟಿ ಕೋಟಿ ರೂಪಾಯಿ ಹಣ ವಸೂಲಿ ಮಾಡಿದ್ದ. ಈ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆಪ್ ನಾಯಕ ಸತ್ಯೇಂದ್ರ ಜೈನ್ ಹೆಸರು ಕೂಡ ಕೇಳಿಬಂದಿತ್ತು. ಇದಕ್ಕೆ ಪೂರಕ ದಾಖೆಗಳು ಲಭ್ಯವಾಗಿತ್ತು.

ದೆಹಲಿ ಸಿಎಂ ಕೇಜ್ರಿವಾಲ್‌ ಸೆರೆಗೆ ಆಕ್ಷೇಪಿಸಿದ ಅಮೆರಿಕಕ್ಕೆ ಭಾರತ ತರಾಟೆ
 

Follow Us:
Download App:
  • android
  • ios