ಡಿಎಂಕೆಯನ್ನು ಕುಟುಂಬ ರಾಜಕಾರಣ ಪಕ್ಷ ಎಂದು ಟೀಕಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿರುಗೇಟು ನೀಡಿರುವ ತಮಿಳುನಾಡು ಸಚಿವ ಹಾಗೂ ಸಿಎಂ ಎಂ.ಕೆ. ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್, ‘ನಿಮ್ಮ ಮಗ ಎಷ್ಟುರನ್ ಗಳಿಸಿದ್ದಾರೆ? ಹೇಗೆ ಅವರು ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಕಾರ್ಯದರ್ಶಿಯಾಗಿದ್ದಾರೆ’ ಎಂದು ಪ್ರಶ್ನಿಸಿದ್ದಾರೆ.
ಚೆನ್ನೈ: ಡಿಎಂಕೆಯನ್ನು ಕುಟುಂಬ ರಾಜಕಾರಣ ಪಕ್ಷ ಎಂದು ಟೀಕಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿರುಗೇಟು ನೀಡಿರುವ ತಮಿಳುನಾಡು ಸಚಿವ ಹಾಗೂ ಸಿಎಂ ಎಂ.ಕೆ. ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್, ‘ನಿಮ್ಮ ಮಗ ಎಷ್ಟುರನ್ ಗಳಿಸಿದ್ದಾರೆ? ಹೇಗೆ ಅವರು ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಕಾರ್ಯದರ್ಶಿಯಾಗಿದ್ದಾರೆ’ ಎಂದು ಪ್ರಶ್ನಿಸಿದ್ದಾರೆ. ಶುಕ್ರವಾರ ರಾಮೇಶ್ವರಂನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ್ದ ಅಮಿತ್ ಶಾ ‘ತಮಿಳು ನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹಾಗೂ ಡಿಎಂಕೆ ಕುಟುಂಬ ರಾಜಕಾರಣ ಮಾಡುತ್ತಿದೆ’ ಎಂದು ಟೀಕಿಸಿದ್ದರು.
ಭಾನುವಾರ ಚೆನ್ನೈನಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್ ‘ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕನಾದೆ, ಸಚಿವ ಸ್ಥಾನ ಪಡೆದಿದ್ದೇನೆ. ನಮ್ಮ ಪಕ್ಷದ ನಾಯಕರು ನನ್ನನ್ನು ಮುಖ್ಯಮಂತ್ರಿ ಮಾಡುವ ಗುರಿ ಹೊಂದಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಆದರೆ, ನಿಮ್ಮ ಮಗ ಬಿಸಿಸಿಐ ಕಾರ್ಯದರ್ಶಿಯಾಗಿದ್ದು ಹೇಗೆ? ಅವರು ಎಷ್ಟುಕ್ರಿಕೆಟ್ ಪಂದ್ಯಗಳನ್ನಾಡಿದ್ದಾರೆ ಮತ್ತು ಎಷ್ಟು ರನ್ ಗಳಿಸಿದ್ದಾರೆ ಎಂದು ನಾನು ಅವರನ್ನು ಕೇಳುತ್ತೇನೆ ಎಂದಿದ್ದಾರೆ.
ಗೆಳತಿ ಜತೆ CM ಸ್ಟಾಲಿನ್ ಮೊಮ್ಮಗನ ಫೋಟೋ ವೈರಲ್, ಬಿರುಗಾಳಿ ಎಬ್ಬಿಸಿದ ಉದಯನಿಧಿ ಮಗನ ಲವ್ವಿಡವ್ವಿ!
ರಾಜ್ಯಪಾಲ ರವಿ ರಾಜ್ಯದ ಶಾಂತಿಗೆ ಅಪಾಯಕಾರಿ: ರಾಷ್ಟ್ರಪತಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಪತ್ರ