ದಿಲ್ಲಿ ಸರ್ಕಾರ ನಡೆಸುವ ನನಗೆ ನೊಬೆಲ್ ಪ್ರಶಸ್ತಿ ಕೊಡಬೇಕು, ಸಿಎಂ ಕೇಜ್ರಿವಾಲ್ ವಿಭಿನ್ನ ಆಗ್ರಹ!
ದೆಹಲಿಯಲ್ಲಿ ಸರ್ಕಾರ ಮುನ್ನಡೆಸುವ ನನಗೆ ನೊಬೆಲ್ ಪ್ರಶಸ್ತಿ ಕೊಡಬೇಕು ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ತಮಗೆ ತಾವೇ ಸರ್ಟಿಫಿಕೇಟ್ ಕೊಡಲು ಕೇಜ್ರಿವಾಲ್ ಆಗ್ರಹಿಸಿದ್ದೇಕೆ?
ನವದೆಹಲಿ(ಫೆ.25) ಲೋಕಸಭಾ ಚುನಾವಣಾ ಕಸರತ್ತು ನಡೆಯುತ್ತಿದೆ. ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಮಾಡಿಕೊಂಡಿರುವ ಆಮ್ ಆದ್ಮಿ ಪಾರ್ಟಿ ಹೊಸ ಉತ್ಸಾಹದಲ್ಲಿದೆ. ಇದರ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮಗೆ ನೊಬೆಲ್ ಪ್ರಶಸ್ತಿ ನೀಡಬೇಕು ಎಂದಿದ್ದಾರೆ. ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಲು ವಿಶೇಷ ಅಸ್ತ್ರವನ್ನೇ ಬಳಸಿಕೊಂಡಿರುವ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರೋಧ, ಲೆಫ್ಟಿನೆಂಟ್ ಗವರ್ನರ್ ಅಡ್ಡಾಗಾಲಿನ ನಡುವೆ ಯಶಸ್ವಿಯಾಗಿ ಸರ್ಕಾರ ನಡೆಸಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿರುವ ನನೆಗೆ ನೊಬೈಲ್ ಪ್ರಶಸ್ತಿ ನೀಡಬೇಕು ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿಯಲ್ಲಿ ಆಪ್ ಸರ್ಕಾರ ಅತ್ಯುತ್ತಮ ದರ್ಜೆಯ ಸರ್ಕಾರಿ ಶಾಲೆ ಆರಂಭಿಸಿದ್ದೇವೆ. ಬಡವರು, ಸಾಮಾನ್ಯರಿಗೂ ಅತ್ಯುತ್ತಮ ಗುಣಮಟ್ಟದ ಶಿಕ್ಷಣಕ್ಕೆ ನಾವು ಒತ್ತು ನೀಡಿದ್ದೇವೆ. ವಿಶ್ವದ ಹಲವು ಪ್ರತಿನಿಧಿಗಳು ಇಲ್ಲಿಗೆ ಬಂದು ನಮ್ಮ ಸರ್ಕಾರಿ ಶಾಲೆ ಕುರಿತು ಅಧ್ಯಯನ ಮಾಡುತ್ತಿದ್ದಾರೆ. ಆದರೆ ಬಿಜೆಪಿ ಸರ್ಕಾರಿ ಶಾಲೆಯನ್ನು ಅಭಿವೃದ್ದಿ ಮಾಡಲು ಬಿಡುತ್ತಿಲ್ಲ. ಬಿಜೆಪಿಗರ ಮಕ್ಕಳು ಪ್ರತಿಷ್ಠಿತ ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಹೀಗಾಗಿ ಇತರ ಸಾಮಾನ್ಯರ ಮಕ್ಕಳು ಅದೇ ದರ್ಜೆಯ ಗುಣಮಟ್ಟದ ಶಿಕ್ಷಣ ಪಡೆಯಲು ಬಿಡುತ್ತಿಲ್ಲ. ಬಿಜೆಪಿಗರು ದೆಹಲಿಯಲ್ಲಿ ಆಸ್ಪತ್ರೆ ಕ್ಟಟಲು ಅಡ್ಡಿಯಾಗಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಮೋದಿ ಡಿಗ್ರಿ ಪ್ರಶ್ನಿಸಿದ ಕೇಜ್ರಿವಾಲ್‌ಗೆ ಹಿನ್ನಡೆ, ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್!
ದೆಹಲಿಯ ಪ್ರತಿ ಯೋಜನೆ, ಕಾರ್ಯಕ್ರಮಗಳಿಗೆ ಲೆಫ್ಟಿನೆಂಟ್ ಗವರ್ನರ್ ಅಡ್ಡಗಾಲು ಹಾಕುತ್ತಿದ್ದಾರೆ. ಇವರಿಬ್ಬರ ಮಧ್ಯೆ ನಾನು ದೆಹಲಿಯಲ್ಲಿ ಹೇಗೆ ಸರ್ಕಾರ ಮುನ್ನಡೆಸುತ್ತಿದ್ದೇನೆ ಅನ್ನೋದು ನನಗೆ ಮಾತ್ರ ಗೊತ್ತು. ಹೆಜ್ಜೆ ಹೆಜ್ಜೆಗೂ ಅಡ್ಡಿಯಾಗುತ್ತಿರುವ ಬಿಜೆಪಿ ಹಾಗೂ ಗವರ್ನರ್ ನಡುವೆ ಯಶಸ್ವಿಯಾಗಿ ಸರ್ಕಾರ ನಡೆಸುತ್ತಿರುವ ನನಗೆ ನೊಬೆಲ್ ಪ್ರಶಸ್ತಿಯೇ ನೀಡಬೇಕು ಎಂದು ಕೇಜ್ರಿವಾಲ್ ಹೇಳಿದ್ದಾರೆ.
ನನಗೆ ಜನರೆ ನೊಬೆಲ್ ಪ್ರಶಸ್ತಿ. ನಾನು ದೆಹಲಿಯಲ್ಲಿ ಸಾಮಾನ್ಯ ಜನರೊಂದಿಗೆ ಮಾತನಾಡುವಾಗ ಆಪ್ ಮೇಲೆ ಮಾತ್ರ ನಮಗೆ ವಿಶ್ವಾಸ ಎಂದಿದ್ದಾರೆ. ಈ ವಿಶ್ವಾಸ ಉಳಿಸಿಕೊಳ್ಳಲು ನಾನು ಪ್ರಯತ್ನಿಸುತ್ತಿದ್ದೇನೆ. ರಾಜಕೀಯವಾಗಿ ಮುಗಿಸಲು ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಇದರ ನಡುವೆ ಜನರಿಗೆ ಅತ್ಯುತ್ತಮ ಶಾಲೆ, ಆಸ್ಪತ್ರೆ, ಮೂಲಭೂತ ಸೌಕರ್ಯಗಳ ಅಭಿವೃದ್ದಿಯನ್ನು ಸರ್ಕಾರ ಮಾಡುತ್ತಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿ ಹೈಕೋರ್ಟ್ ಜಾಗದಲ್ಲಿ ಆಮ್ ಆದ್ಮಿ ಪಕ್ಷದ ಕಚೇರಿ, ಸುಪ್ರೀಂನಿಂದ ಆಪ್‌ಗೆ ಛೀಮಾರಿ!
ಬಿಜೆಪಿ ರಾಜಕೀಯ ದಾಳಕ್ಕೆ ನಾವು ಬಲಿಯಾಗುದಿಲ್ಲ. ಹೋರಾಟ ಮಾಡುತ್ತೇವೆ. ನ್ಯಾಯ ಸಿಗುವವರೆಗೂ ಹೋರಾಡುತ್ತೇವೆ. ನಮ್ಮದು ಸತ್ಯ ಹಾಗೂ ನ್ಯಾಯದ ದಾರಿ ಎಂದು ಕೇಜ್ರಿವಾಲ್ ಕೇಂದ್ರ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.