ಖರ್ಗೆ ಬೇಡಿಕೆಯಂತೆ ರಾಜೀನಾಮೆ ಕೊಡಲು ನಾನು ಸಿದ್ಧ, ಅಮಿತ್ ಶಾ ಸ್ಫೋಟಕ ಹೇಳಿಕೆ!

ಅಂಬೇಡ್ಕರ್ ವಿವಾದ ಜೋರಾಗುತ್ತಿದ್ದಂತೆ ಅಮಿತ್ ಶಾ ಸುದ್ದಿಗೋಷ್ಠಿ ನಡೆಸಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.  ಮಲ್ಲಿಕಾರ್ಜುನ್ ಖರ್ಗೆಗೆ ನನ್ನ ರಾಜೀನಾಮೆ ಬೇಕು ಎಂದರೆ ಕೊಡಲು ನಾನು ಸಿದ್ಧ ಎಂದಿದ್ದಾರೆ. ಕೇಂದ್ರ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರ ಅಮಿತ್ ಶಾ? ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?

I will give resignation if kharge wants Amit shah press meet after Ambedkar row ckm

ನವದೆಹಲಿ(ಡಿ.18) ಅಂಬೇಡ್ಕರ್ ವಿವಾದ ಭಾರಿ ಕೋಲಾಹಲ ಸೃಷ್ಟಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಆಡಿದ ಮಾತನ್ನೇ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಅಸ್ತ್ರವಾಗಿ ಹಿಡಿದುಕೊಂಡಿದೆ. ಅಂಬೇಡ್ಕರ್‌ಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಹೋರಾಟ ನಡೆಸುತ್ತಿದೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಅಮಿತ್ ಶಾ ಹೇಳಿಕೆ ಖಂಡಿಸಿದ್ದಾರೆ. ಇಷ್ಟೇ ಅಲ್ಲ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ವಿವಾದ ಜೋರಾಗುತ್ತಿದ್ದಂತೆ ಅಮಿತ್ ಶಾ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಲ್ಲಿಕಾರ್ಜುನ ಖರ್ಗೆಗೆ ನನ್ನ ರಾಜೀನಾಮೆ ಬೇಕೆಂದರೆ ನಾನು ಕೊಡುತ್ತೇನೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದೀಗ ಅಮಿತ್ ಶಾ ರಾಜೀನಾಮೆ ಕೊಡುತ್ತಾರ ಅನ್ನೋ ಚರ್ಚೆ ಜೋರಾಗಿದೆ.

ಅಂಬೇಡ್ಕರ್ ವಿವಾದದ ಕುರಿತು ಸುದ್ದಿಗೋಷ್ಠಿ ನಡೆಸಿದ ಅಮಿತ್ ಶಾ, ಮಲ್ಲಿಕಾರ್ಜುನ ಖರ್ಗೆ ನನ್ನ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಖರ್ಗೆಯವರಿಗೆ ನನ್ನ ರಾಜೀನಾಮೆ ಬೇಕು ಎಂದರೆ ಕೊಡಲು ನಾನು ಸಿದ್ಧ. ಆದರೆ ನನ್ನ ರಾಜೀನಾಮೆಯಿಂದ ಕಾಂಗ್ರೆಸ್ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ನಾನು ರಾಜೀನಾಮೆ ನೀಡಿದರೂ ಅಂಬೇಡ್ಕರ್ ಹಾಗೂ ಸಂವಿಧಾನದ ಕುರಿತು ಕಾಂಗ್ರೆಸ್ ಪಕ್ಷದ ನಿಲವು ಬದಲಾಗಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.

ಕರ್ನಾಟಕದ ಇಡೀ ಗ್ರಾಮವೇ ವಕ್ಫ್‌ ಆಸ್ತಿ ಆಗಿದೆ: ಕೇಂದ್ರ ಸಚಿವ ಅಮಿತ್‌ ಶಾ ಪ್ರಸ್ತಾಪ

ಕಾಂಗ್ರೆಸ್ ಹಿಂದಿನಿಂದಲೂ ಹೇಳಿಕೆಗಳನ್ನು ತಿರುವುಚುವುದ, ಅಂಕಿ ಅಂಶಗಳನ್ನು ಮರೆಮಾಚುವುದು ಮಾಡುತ್ತಿದೆ. ನಾನು ರಾಜ್ಯಸಭೆಯಲ್ಲಿ ಮಾತನಾಡಿರುವುದು ರೆಕಾರ್ಡ ಇದೆ. ಇದರ ಸಂಪೂರ್ಣ ಭಾಷಣವನ್ನು ಕೇಳಿಸಿಕೊಳ್ಳಿ. ಮಾಧ್ಯಮಗಳು ನನ್ನ ಸಂಪೂರ್ಣ ಭಾಷಣವನ್ನು ಜನರ ಮುಂದೆ ತಲುಪಿಸಿ. ಕತ್ತರಿ ಹಾಕಿ ಬೇರೊಂದು ಅರ್ಥದಲ್ಲಿ ತೋರಿಸಬೇಡಿ ಎಂದು ಅಮಿತ್ ಶಾ ಮನವಿ ಮಾಡಿದ್ದರೆ. ಕಾಂಗ್ರೆಸ್ ಯಾವತ್ತೂ ಸಂವಿಧಾನ ವಿರೋಧಿ, ಅಂಬೇಡ್ಕರ್ ವಿರೋಧಿ, ಮೀಸಲಾತಿ ವಿರೋಧಿಯಾಗಿದೆ. ಸಂವಿಧಾನವನ್ನು ತುರ್ತು ಪರಿಸ್ಥಿತಿಯಲ್ಲಿ ಬಡುಮೇಲು ಮಾಡಿರುವುದು ಎಲ್ಲರೂ ನೋಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ಕಾಂಗ್ರೆಸ್ ಯಾವತ್ತೂ ಸುಳ್ಳುಗಳನ್ನೇ ಹೇಳಿ ಅದನ್ನೇ ಬಂಡವಾಳ ಮಾಡಿಕೊಳ್ಳುತ್ತದೆ. ಇದೀಗ ಅಂಬೇಡ್ಕರ್ ಕುರಿತು ನನ್ನ ಹೇಳಿಕೆಯನ್ನು ತದ್ವಿರುದ್ಧವಾಗಿ ಪ್ರಚಾರ ಮಾಡುತ್ತಿದೆ. ಅಂಬೇಡ್ಕರ್‌ಗೆ ಅವಮಾನ ಮಾಡುತ್ತಲೇ ಬಂದಿರುವ ಕಾಂಗ್ರೆಸ್ ಇದೀಗ ಸುಳ್ಳು ಅಸ್ತ್ರವನ್ನು ಹಿಡಿದು ತಮ್ಮ ನಿಲುವು, ಮಾಡಿರುವ ಕೃತ್ಯಗಳನ್ನು ಮರೆ ಮಾಚಲು ಮುಂದಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ. 

ರಾಜ್ಯಸಭೆಯಲ್ಲಿ ಅಮಿತ್ ಶಾ ತಮ್ಮ ಭಾಷಣದ ವೇಳೆ ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಅನ್ನೋದು ಈಗ ಕೆಲವರಿ ಫ್ಯಾಶನ್ ಆಗಿದೆ. ಇಷ್ಟು ಬಾರಿ ದೇವರ ನಾಮ ಜಪಿಸಿದರೆ ಏಳು ಜನ್ಮಗಳ ವರೆಗೆ ಸ್ವರ್ಗ ಪ್ರಾಪ್ತಿಯಾಗುತ್ತದೆ. ಆದರೆ ಕಾಂಗ್ರೆಸ್ ನಿಮ್ಮ ಅಂಬೇಡ್ಕರ್ ಅಸಲಿಯತ್ತು ನಾನು ಬಿಡಿಸಿ ಹೇಳುತ್ತೇನೆ ಎಂದಿದ್ದಾರೆ. ಇದೇ ವೇಳೆ ಅಮಿತ್ ಶಾ, ನೀವು ಹೆಸರಿಗೆ ಮಾತ್ರ ಅಂಬೇಡ್ಕರ್, ಆದರೆ ಮಾಡಿದ್ದು ಯಾವ ಅನಾಚಾರ ಅನ್ನೋದು ಇಲ್ಲಿದೆ ಎಂದು ಒಂದೊಂದೆ ಘಟನೆಯನ್ನು ಅಮಿತ್ ಶಾ ಬಿಚ್ಚಿಟ್ಟಿದ್ದಾರೆ.

ಜವಾಹರ್ ಲಾಲ್ ನೆಹರೂ ಕಾರಣದಿಂದ ಅಂಬೇಡ್ಕರ್ ಅನಿವಾರ್ಯವಾಗಿ ಮೊದಲ ಕ್ಯಾಬಿನೆಟ್‌ನಿಂದ ರಾಜೀನಾಮೆ ನೀಡಿ ಹೊರಬರಬೇಕಾಯಿತು. ಅಂಬೇಡ್ಕರ್‌ ಅವರನ್ನು ಸದಾ ನಿರ್ಲಕ್ಷಿಸಿ, ಅವಮಾನಿಸಿದ್ದು ಕಾಂಗ್ರೆಸ್ ಎಂದಿದ್ದಾರೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಸೇರಿದಂತೆ ಹಲವು ವಿಪಕ್ಷಗಳು ಅಮಿತ್ ಶಾ ಹಾಗೂ ಬಿಜೆಪಿ ವಿರುದ್ಧ ಮುಗಿಬಿದ್ದಿದೆ. ಬಿಜೆಪಿ ಅಸಲಿ ಮುಖ ಹೊರಬಂದಿದೆ. ಬಿಜೆಪಿ ಯಾವತ್ತೂ ಅಂಬೇಡ್ಕರ್‌ಗೆ ಗೌರವ ನೀಡುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.  ಇದು ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಗಿದೆ.
 

Latest Videos
Follow Us:
Download App:
  • android
  • ios