ನನ್ನ ತಂದೆ ಕುಪ್ಪುಸ್ವಾಮಿ, ಕರುಣಾನಿಧಿಯಾಗಿದ್ದರೆ ಗೆಲ್ಲುತ್ತಿದ್ದೆ;ಸೋಲು ಅಣಕಿಸಿದವರಿಗೆ ಅಣ್ಣಾಮಲೈ ತಿರುಗೇಟು!
ನನ್ನ ತಂದೆ ಕರುಣಾನಿಧಿಯಾಗಿದ್ದರೆ ನಾನು ಗೆಲ್ಲುತ್ತಿದ್ದೆ ಎಂದು ಅಣ್ಣಾಮಲೈ ತಮ್ಮ ಸೋಲನ್ನು ಅಣಕಿಸಿದವರಿಗೆ ತಿರುಗೇಟು ನೀಡಿದ್ದಾರೆ. ಆದರೆ ತಮಿಳುನಾಡಿನಲ್ಲಿ 2026ರಲ್ಲಿ ಅಧಿಕಾರಕ್ಕೇರಲಿದೆ ಎಂದು ಖಡಕ್ ವಾರ್ನಿಂಗ್ ನೀಡಿದ್ದರೆ. ಅಣ್ಣಾಮಲೈ ಉತ್ತರ ಇದೀಗ ಭಾರಿ ಸಂಚಲನ ಸೃಷ್ಟಿಸಿದೆ.
ಚೆನ್ನೈ(ಜೂ.05) ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನ ಮೇಲೆ ಬಿಜೆಪಿ ಹಾಗೂ ಬೆಂಬಲಿಗರಿಗೆ ಭಾರಿ ನಿರೀಕ್ಷೆಗಳು ಗರಿಗೆದರಿತ್ತು. ಅದರಲ್ಲೂ ಪ್ರಮುಖವಾಗಿ ಕೆ ಅಣ್ಣಾಮಲೈ ಗೆದ್ದೇ ಗೆಲ್ಲುತ್ತಾರೆ ಅನ್ನೋ ವಿಶ್ವಾಸ ಮೂಡಿತ್ತು. ಆದರೆ ಫಲಿತಾಂಶ ಸಂಪೂರ್ಣ ಬದಲು. ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತರೆಯಲಿಲ್ಲ. ಕೊಯಂಬತ್ತೂರಿನಿಂದ ಸ್ಪರ್ಧಿಸಿದ ಅಣ್ಣಾಮಲೈ 1.18 ಲಕ್ಷ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಅಣ್ಣಾಮಲೈ ಸೋಲನ್ನು ಡಿಎಂಕೆ ನಾಯಕಿ, ಮಾಜಿ ಸಿಎಂ ಕರುಣಾನಿಧಿ ಪುತ್ರಿ ಕನ್ನಿಮೋಳಿ ಕುಹಕವಾಡಿದ್ದಾರೆ. ಇದಕ್ಕೆ ಖಡಕ್ ಪ್ರತಿಕ್ರಿಯೆ ನೀಡಿದ ಅಣ್ಣಾಮಲೈ, ನನ್ನ ತಂದೆ ಕರುಣಾನಿದಿಯಾಗಿದ್ದರೆ ನಾನು ಸುಲಭದಲ್ಲಿ ಗೆಲ್ಲುತ್ತಿದ್ದೆ ಎಂದಿದ್ದಾರೆ.
ಭಾರಿ ಆತ್ಮವಿಶ್ವಾಸದೊಂದಿಗೆ ಅಖಾಡಕ್ಕಿಳಿದಿದ್ದ ಅಣ್ಣಾಮಲೈ ಭಾರಿ ಅಂತರದಿಂದ ಸೋಲು ಕಂಡಿದ್ದಾರೆ. ಇದನ್ನು ಕನ್ನಿಮೋಳಿ ವ್ಯಂಗ್ಯವಾಡಿದ್ದರು. ಈ ಕುರಿತು ಖಾಸಗಿ ಮಾಧ್ಯಮದ ಸಂದರ್ಶನದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ತಂದೆ ಕರುಣಾನಿಧಿಯಾಗಿದ್ದರೆ ನಾನು ಗೆಲ್ಲುತ್ತಿದ್ದೆ. ಆದರೆ ನನ್ನ ತಂದೆ ಕುಪ್ಪುಸ್ವಾಮಿ. ಹೀಗಾಗಿ ಗೆಲುವಿಗೆ ಇನ್ನಷ್ಟು ಪರಿಶ್ರಮ ಬೇಕಿದೆ. ಗೆಲುವಿಗೆ ಕೆಲ ಸಮಯ ತೆಗೆದುಕೊಳ್ಳಲಿದೆ ಎಂದು ಅಣ್ಣಾಮಲೈ ಹೇಳಿದ್ದಾರೆ.
ಮೋದಿ ಪ್ರಮಾಣವಚನ ಸ್ವೀಕಾರಕ್ಕೆ ಜೂನ್ 8ರ ಆಯ್ಕೆ ಹಿಂದಿದೆ ಕಾರಣ, ಜ್ಯೋತಿಷ್ಯ ಹೇಳುವುದೇನು?
ಇದೇ ವೇಳೆ ಅಣ್ಣಾಮಲೈ ಮಹತ್ವದ ಸಂದೇಶವನ್ನೂ ನೀಡಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವೋಟ್ ಶೇರ್ ಶೇಕಡಾ 11ಕ್ಕೆ ಏರಿಕೆಯಾಗಿದೆ. ತಮಿಳುನಾಡಿನಲ್ಲಿ ಬಿಜೆಪಿಯನ್ನು ನೋಟಾ ಪಾರ್ಟಿ ಎಂದು ಹೀಯಾಳಿಸುತ್ತಿದ್ದರು. ಈ ಚುನಾವಣೆಯಲ್ಲಿ ತಮಿಳುನಾಡು ಬಿಜೆಪಿಯತ್ತ ವಾಲುತ್ತಿರುವುದು ಸ್ಪಷ್ಟವಾಗಿದೆ. ಇದೀಗ ಹಲವರು ನಮ್ಮ ಸೋಲನ್ನು ಸಂಭ್ರಮಿಸುತ್ತಿದ್ದಾರೆ. ಆದರೆ 2026ರಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಎಚ್ಚರಿಸಿದ್ದಾರೆ.
I come from a humble background, my father is a farmer, not a former CM. It might take me some time to gain your trust, but I am committed to working tirelessly for the development of our nation. pic.twitter.com/8bM1M4UKJM
— Amar Prasad Reddy (@amarprasadreddy) June 5, 2024
ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆದಿಲ್ಲ, ಗೆಲುವು ಸಿಕ್ಕಿಲ್ಲ. ಶೇಕಡಾ 11 ರಷ್ಟು ವೋಟ್ ಶೇರ್ ಪಡೆದಿದ್ದೇವೆ. ಈ ವೋಟ್ ಶೇರ್ ಯಾವುದೇ ಹಣ ನೀಡಿ ಬಂದಿಲ್ಲ. ನಮ್ಮ ಕಾರ್ಯಕರ್ತರು ಗ್ರೌಂಡ್ ಲೆವೆಲ್‌ನಲ್ಲಿ ಕೆಲಸ ಮಾಡಿದ್ದಾರೆ. ಪರಿಶ್ರಮದಿಂದ ಕೆಲಸ ಮಾಡಿ ಪಕ್ಷ ಕಟ್ಟಲಾಗಿದೆ. 2026ರ ವೇಳೆಗೆ ತಮಿಳುನಾಡಿನಲ್ಲಿ ಬಿಜೆಪಿ ಭದ್ರವಾಗಿ ನೆಲೆಯೂರಲಿದೆ ಎಂದಿದ್ದಾರೆ. ಈ ಬಾರಿಯ ಹಲವು ಕ್ಷೇತ್ರದಲ್ಲಿ ಬಿಜೆಪಿಯ ಹೆಸರೇ ಇರಲಿಲ್ಲ. ಬಿಜೆಪಿಗೆ ಅಭ್ಯರ್ಥಿಗಳೇ ಇಲ್ಲದ ಊರಿನಲ್ಲೂ ಮತ ಪಡೆದಿದ್ದೇವೆ. ಸೋಲನ್ನು ಸ್ವೀಕಾರ ಮಾಡುತ್ತೇವೆ. ಆದರೆ ಇಲ್ಲಿಗೆ ನಿಲ್ಲುವುದಿಲ್ಲ. ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟುತ್ತೇವೆ ಎಂದು ಅಣ್ಣಾಮಲೈ ಹೇಳಿದ್ದಾರೆ.
ಕಟಾ ಕಟ್ 1 ಲಕ್ಷ ರೂ, ಯುಪಿ ಕಾಂಗ್ರೆಸ್ ಕಚೇರಿ ಮುಂದೆ ಗ್ಯಾರೆಂಟಿ ಆಗ್ರಹಿಸಿ ಜಮಾಯಿಸಿದ ಮಹಿಳೆಯರು!