Asianet Suvarna News Asianet Suvarna News

ನಷ್ಟ ಭರಿಸಿದರಷ್ಟೇ ಸಾರ್ವಜನಿಕ ಆಸ್ತಿ ಹಾನಿಕೋರರಿಗೆ ಜಾಮೀನು? ತಪ್ಪಿದರೆ ಜೈಲೇ ಗತಿ

ಪ್ರತಿಭಟನೆ ಸಂದರ್ಭಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳ ಮೇಲೆ ಹಾನಿ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಲು ಕಾನೂನು ಆಯೋಗ ಶಿಫಾರಸು ಮಾಡಿದೆ. ಆಸ್ತಿ ಹಾನಿ ಮಾಡುವವರಿಂದ, ಹಾನಿಯಾದ ಆಸ್ತಿಯ ಮೌಲ್ಯವನ್ನು ಸಂಪೂರ್ಣ ವಸೂಲಿ ಮಾಡಬೇಕು. ಆರೋಪಿಗಳಿಗೆ ಜಾಮೀನು ಬೇಕೆಂದರೂ ಹಾನಿಯಾದ ಆಸ್ತಿಯ ಮೌಲ್ಯದಷ್ಟು ಹಣವನ್ನು ಠೇವಣಿ ಆಗಿರಿಸಿಕೊಂಡು ಜಾಮೀನು ನೀಡಬೇಕು ಎಂದು ಕಾನೂನು ಆಯೋಗವು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

 

If the property is damaged during the protest, the protestors have to bear the loss Law Commission makes important recommendation to Centre akb
Author
First Published Feb 5, 2024, 8:55 AM IST

ನವದೆಹಲಿ: ಪ್ರತಿಭಟನೆ ಹಾಗೂ ಇತರ ಸಂದರ್ಭಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳ ಮೇಲೆ ಹಾನಿ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಲು ಈಗಿರುವ ಕಾನೂನುಗಳು ತಿದ್ದುಪಡಿ ಆಗಬೇಕು. ಈ ರೀತಿ ಆಸ್ತಿ ಹಾನಿ ಮಾಡುವವರಿಂದ, ಹಾನಿಯಾದ ಆಸ್ತಿಯ ಮೌಲ್ಯವನ್ನು ಸಂಪೂರ್ಣ ವಸೂಲಿ ಮಾಡಬೇಕು. ಇಂಥ ಪ್ರಕರಣಗಳಲ್ಲಿ ಜಾಮೀನು ಬೇಕೆಂದರೂ ಹಾನಿಯಾದ ಆಸ್ತಿಯ ಮೌಲ್ಯದಷ್ಟು ಹಣವನ್ನು ಠೇವಣಿ ಆಗಿರಿಸಿಕೊಂಡು ಜಾಮೀನು ನೀಡಬೇಕು ಎಂದು ಕಾನೂನು ಆಯೋಗವು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಶಿಫಾರಸು ಏನು?

  • ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವವರ ವಿರುದ್ಧ ಕ್ರಮ ಆಗಬೇಕು
  • ಇದಕ್ಕಾಗಿ ಈಗಿರುವ ಕಾನೂನು ಗಳಿಗೆ ತಿದ್ದುಪಡಿ ಮಾಡಬೇಕು
  • ಹಾನಿಯಾಗಿರುವ ಆಸ್ತಿಯ ಮೌಲ್ಯವನ್ನು ವಸೂಲು ಮಾಡಬೇಕು
  • ಆಸ್ತಿಯ ಮೌಲ್ಯದಷ್ಟು ಹಣವನ್ನು ಠೇವಣಿ ಮಾಡಿಸಿಕೊಂಡು ಜಾಮೀನು ಕೊಡಬೇಕು
  • ಇಂತಹ ಕ್ರಮದಿಂದ ಆಸ್ತಿಪಾಸ್ತಿಗೆ ಹಾನಿ ಮಾಡುವವರು ಪಾಠ ಕಲಿಯುತ್ತಾರೆ ಎಂದು ಶಿಫಾರಸು

ಆಸ್ತಿಪಾಸ್ತಿ ಹಾನಿ ಸಂದರ್ಭದಲ್ಲಿ ಯಾರು ಪ್ರತಿಭಟನೆಯ ನೇತೃತ್ವ ವಹಿಸಿರುತ್ತಾರೋ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು. ಅವರಿಂದಲೇ ಹಾನಿ ಮೌಲ್ಯವನ್ನು ವಸೂಲು ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಅದು ಕಳೆದ ಶುಕ್ರವಾರ ಮಾಡಿದ ಶಿಫಾರಸಿನಲ್ಲಿ ಹೇಳಿದೆ.  ಕೇಂದ್ರ ಕೆಲ ವರ್ಷ ಹಿಂದೆಯೇ ಇಂತದ್ದೊಂದು ಕಾಯ್ದೆ ಜಾರಿಗೆ ಒಲವು ತೋರಿತ್ತಾದರೂ, ಅದು ಫಲ ಕೊಟ್ಟಿರಲಿಲ್ಲ. ಆದರೆ ಅದಾದ ಬಳಿಕ ವಿವಿಧ ಪ್ರಕರಣಗಳಲ್ಲಿ ಸುಪ್ರೀಂ, ಕೆಲ ಹೈಕೋರ್ಟ್‌ಗಳು ಇಂಥ ಘಟನೆ ತಡೆಯಲು ಕೆಲವೊಂದು ನಿರ್ದೇಶನ ನೀಡಿದ್ದವು. ಈ ಹಿನ್ನೆಲೆ ಇದೀಗ ಸ್ವತಃ ಕಾನೂನು ಆಯೋಗವೇ ಆಸ್ತಿಗೆ ಹಾನಿ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆಯಲು ಆರೋಪಿಗಳು ಪೂರ್ಣ ಪ್ರಮಾಣದ ದಂಡ ಕಟ್ಟಿಕೊಡುವುದನ್ನು ಕಡ್ಡಾಯಗೊಳಿಸುವ ಕಾಯ್ದೆ ಕುರಿತು ಶಿಫಾರಸು ಮಾಡಿದೆ. ಕಾಯ್ದೆ ಜಾರಿಯಾದರೆ ಬಳಿಕ ಉಳಿದವರು ಎಚ್ಚೆತ್ತು ಇಂಥ ಘಟನೆಗಳಿಂದ ಹಿಂದೆ ಸರಿಯುತ್ತಾರೆ ಎಂಬುದು ಕಾಯ್ದೆ ಜಾರಿಯ ಹಿಂದಿನ ಉದ್ದೇಶವಾಗಿದೆ.

Follow Us:
Download App:
  • android
  • ios