ಕರ್ನಾಟಕ ಇನ್ನು ಮೂರು ದಿನ ಭಾರಿ ಮಳೆ. ಉತ್ತರದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಇನ್ನು ದಕ್ಷಿಣದಲ್ಲಿ ಗಾಳಿ, ಗುಡುಗು ಸಹಿ ಮಳೆ ವರದಿಯಾಗುತ್ತಿದೆ. ಇದರ ನಡುವೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗುಡುಗು, ಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ ನೀಡಿದೆ. ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ನವದೆಹಲಿ(ಮೇ.05) ಭಾರತೀಯ ಹವಾಮಾನ ಇಲಾಖೆ(IMD) ಇದೀಗ ಆರೇಂಜ್ ಅಲರ್ಟ್ ಘೋಷಿಸಿದೆ. ಇಂದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಮೇ5 ರಂದು ಹವಾಮಾನದಲ್ಲಿ ಆಗಿರುವ ವೈಪರಿತ್ಯ ದೇಶದ ಹಲವು ರಾಜ್ಯಗಳ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಸಿದೆ. ಹೀಗಾಗಿ ಅರೇಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚಿಸಿದೆ.

ವಾಯುವ್ಯ ರಾಜ್ಯಗಳಲ್ಲಿ ಭಾರಿ ಗಾಳಿ ಸಹಿತ ಮಳೆ
ಭಾರತದ ವಾಯುವ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಗುಡುಗು, ಮಿಂಚು, ಗಾಳಿ ಸಹಿತ ಮಳೆ ವಾಯುವ್ಯ ರಾಜ್ಯಕ್ಕೆ ಅಪ್ಪಳಿಸಲಿದೆ. ಈಗಾಗಲೇ ವಾಯುವ್ಯ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ಗಾಳಿ ಸಹಿತ ಮಳೆಯಾಗಲಿದೆ. ಇದು ಜನಜೀವನ ಅಸ್ತವ್ಯಸ್ತಗೊಳಿಸಲಿದೆ ಎಂದು ಎಚ್ಚರಿಸಿದೆ.

ಉತ್ತರ ಕರ್ನಾಟಕದಲ್ಲಿ 41 ಡಿಗ್ರಿ ಸೆಲ್ಸಿಯಸ್ ದಾಟಿದ ತಾಪಮಾನ! ಈ ಮೂರು ಜಿಲ್ಲೆಗಳಲ್ಲಿ ಬೆಂಕಿ ಉಗುಳುವ ಬಿಸಿಲು!

ದೆಹಲಿಯಿಂದ ಒಡಿಶಾ ವರೆಗೆ ಮಳೆ ಸೂಚನೆ
ರಾಷ್ಟ್ರರಾಜಧಾನಿ ದೆಹಲಿ ಹಾಗೂ ವ್ಯಾಪ್ತಿ ಪ್ರದೇಶದಲ್ಲೂ ಭಾರಿ ಮಳೆ ಸಂಭವವಿದೆ ಎಂದು ಇಲಾಖೆ ಸೂಚಿಸಿದೆ. ಇದೇ ವೇಳೆ ಪೂರ್ವ ಮಧ್ಯ ಹಾಗೂ ಪೂರ್ವ ಭಾರತದ ರಾಜ್ಯಗಳಲ್ಲೂ ಭಾರಿ ಮಳೆಯಾಗಲಿದೆ. ಪ್ರಮುಖಾಗಿ ಪಶ್ಚಿಮ ಬಂಗಾಳ ಹಾಗೂ ಒಡಿಶಾ ರಾಜ್ಯಗಳು ಅತೀ ಹೆಚ್ಚಿನ ಮಳೆ ಹಾಗೂ ಗಾಳಿ ಎದುರಿಸಲಿದೆ ಎಂದಿದೆ. ಹೀಗಾಗಿ ಇಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಕೆಲ ರಾಜ್ಯಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಿದೆ. ರಾಜಸ್ಥಾನ, ಗುಜರಾತ್, ಪಂಜಾಬ್, ಹರ್ಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಚತ್ತಸಘಡ, ಒಡಿಶಾ, ಜಾರ್ಖಂಡ್, ಬಿಹಾರ್, ತೆಲಂಗಾಣ ಹಾಗೂ ಆಂಧ್ರ ಪ್ರದೇಶಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಿದೆ. 

ಕರ್ನಾಟಕದ ಹಲವು ರಾಜ್ಯದಲ್ಲಿ ಮಳೆ ಸಂಭವ
ಕರ್ನಾಟಕದ ಕೊಡಗು, ಚಿಕ್ಕಮಗಳೂರು, ಬೆಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಆದರೆ ಕರ್ನಾಟಕದಲ್ಲಿ ಕೆಲ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಸೂಟನೆ ನೀಡಲಾಗಿದೆ. ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಸೂಚಿಸಿದೆ. ಮೇ5 ರಿಂದ ಮೇ 7 ರ ವರೆಗೆ ಮಳೆಯಾಗಲಿದೆ ಎಂದಿದೆ. ದಕ್ಷಿಣ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣದ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಸೂಚನೆ ನೀಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದೇ ವೇಳೆ ಕೆಲವು ಕಡೆಗಳಲ್ಲಿ ಆಲಿ ಕಲ್ಲು ಮಳೆ ಬೀಳುವ ಎಚ್ಚರಿಕೆಯನ್ನು ನೀಡಲಾಗಿದೆ. ಈ ಪೈಕಿ ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದಿದೆ.

ಬೆಂಗಳೂರಿಗರ ಗಮನಕ್ಕೆ; ರಾಜಧಾನಿಗೆ 2 ದಿನ ಆರೆಂಜ್ ಅಲರ್ಟ್, ಗುಡುಗು-ಸಿಡಿಲು ಸಹಿತ ಭಾರೀ ಮಳೆ!