ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದಲ್ಲಿ ಯಾವ ಅಲರ್ಟ್ ಘೋಷಿಸಲಾಗಿದೆ. ಎಲ್ಲೆಲ್ಲಿ ಮಳೆಯಾಗಲಿದೆ?

ನವದೆಹಲಿ(ಮೇ.14) ದೇಶದ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಹಲೆವೆಡೆ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಇದೀಗ ಭಾರತೀಯ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಹೀಗಾಗಿ ಸಾರ್ವಜನಿಕರು ಎಚ್ಚರವಾಗಿರಬೇಕು ಎಂದಿದೆ. ಕರ್ನಾಟಕದ ಹಲವು ಭಾಗದಲ್ಲಿ ಈಗಾಗಲೇ ಮಳ ಭಾರಿ ಅವಾಂತರ ಸೃಷ್ಟಿಸಿದೆ. ಆದರೆ ಐಎಂಡಿ ಸೂಚನ ಪ್ರಕಾರ, ಮೇ.15 ರಿಂದ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದಿದೆ.

15 ರಾಜ್ಯದಲ್ಲಿ ಭಾರಿ ಮಳೆ, 2 ರಾಜ್ಯದಲ್ಲಿ ಬಿಸಿಗಾಳಿ
ಕರ್ನಾಟಕ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಪುದುಚೇರಿ, ಅಸ್ಸಾಂ, ಮೆಘಾಲಯ, ಅಂಡಮಾನ್ ನಿಕೋಬಾರ್, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ್, ಮಿಜೋರಾಂ, ತ್ರಿಪುರ, ಪಶ್ಚಿಮ ಬಂಗಾಳ, ಸಿಕ್ಕಿಂ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇದೇ ವೇಳ ಉತ್ತರ ಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಸಿಗಾಳಿ ತೀವ್ರಗೊಳ್ಳಲಿದೆ ಎಂದು ಎಚ್ಚರಿಸಿದೆ.

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ: 30ಕ್ಕೂ ಹೆಚ್ಚು ಮರಗಳು ಧರೆಗೆ!

ಬೆಂಗಳೂರು ಸೇರಿ ಹಲವೆಡೆ ಮಳೆ ಮುನ್ಸೂಚನೆ
ಈಗಾಗಲೇ ಬೆಂಗಳೂರು ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಈ ಮಳೆಯಿಂದ ಅವಾಂತರಗಳು ಸೃಷ್ಟಿಯಾಗಿದೆ. ಆದರೆ ಮಳೆ ಆರ್ಭಟ ಇಲ್ಲಿಗೆ ನಿಲ್ಲುತ್ತಿಲ್ಲ. ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮೇ.15 ರಿಂದ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಸಿದೆ. ಕರ್ನಾಟಕದ ಹಲವು ಜಿಲ್ಲೆಗಳು ಭಾರಿ ಮಳೆಗೆ ತುತ್ತಾಗಲಿದೆ. ಗಾಳಿ, ಗುಡುಗು ಸಹಿ ಮಳೆಯಿಂದ ಮರಗಳು, ಶಿಥಿಲ ಕಟ್ಟಡಗಳು, ಮನೆಗಳು ಧರೆಗುರುಳುವ ಸಾಧ್ಯತೆ ಇದೆ. ಹೀಗಾಗಿ ಅತೀವ ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚಿಸಿದೆ. 

ಬೆಂಗಳೂರು ಸೇರಿ ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು ಸೇರಿದಂತೆ ಕರ್ನಾಟಕ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಂಗಳವಾರ ದಾಖಲೆ ಪ್ರಮಾಣದಲ್ಲಿ ಮಳೆ ಸುರಿದಿದೆ. ಬೆಂಗಳೂರಿನಲ್ಲಿ 34.2ಎಂಎಂ ಮಳೆ ದಾಖಲಾಗಿತ್ತು. ಇನ್ನು ಹೆಚ್ಎಎಲ್ ಬಳಿ ಅತೀ ಹೆಚ್ಚಿನ ಮಳೆ ದಾಖಲಾಗಿದೆ. 41ಎಂಎಂ ಮಳೆ ದಾಖಲಾಗಿತ್ತು. ಮೇ.15ರಿಂದ ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. 

ಮಹಾರಾಷ್ಟ್ರದಲ್ಲಿ ಆರೇಂಜ್ ಅಲರ್ಟ್
ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಮೇ.15, 16ರಂದು ಮುಂಬೈ, ಥಾಣೆ, ರಾಯ್‌ಘಡ್, ರತ್ನಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹೀಗಾಗಿ ಇಲ್ಲಿ ಆರೇಂದ್ ಅಲರ್ಟ್ ಘೋಷಿಸಲಾಗಿದೆ. 

ಅಂಡಮಾನ್ ದ್ವೀಪಕ್ಕೆ ಮುಂಗಾರು ಪ್ರವೇಶ: ಮೇ 27 ಕೇರಳಕ್ಕೆ, ಭಾರೀ ಮಳೆ ಸಾಧ್ಯತೆ!