ಕರ್ನಾಟಕ ಸೇರಿ 7 ರಾಜ್ಯದಲ್ಲಿ ಮುಂದಿನ 2 ದಿನ ಮಳೆ ಸಾಧ್ಯತೆ, ಕೆಲವೆಡೆ ಅತೀವ ಚಳಿ!
ಕರ್ನಾಟಕದ ಹಲೆವೆಡೆ ಈಗಾಗಲೇ ಮಳೆರಾಯನ ಎಂಟ್ರಿಯಿಂದ ಅಪಾರ ಬೆಳೆ ಹಾನಿಯಾಗಿದೆ. ಇದೀಗ ಕರ್ನಾಟಕ ಸೇರಿದಂತೆ 7 ರಾಜ್ಯದಲ್ಲಿ ಮುಂದಿನ 2 ದಿನ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಉತ್ತರ ಭಾರತ ಅತೀವ ಚಳಿಯಿಂದ ನಡುಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ನವದೆಹಲಿ(ಜ.07) ದೇಶದ ಹಲೆವೆಡೆ ಹೊಸ ವರ್ಷದ ಆರಂಭದಲ್ಲೇ ಮಳೆರಾಯ ವಕ್ಕರಿಸಿ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಅಕಾಲಿಕ ಮಳೆಯಿಂದ ಹಲವು ಸಮಸ್ಯೆಗಳು ಎದುರಾಗಿದೆ. ಒಂದೆರೆಡು ದಿನ ಬಿಡುವು ನೀಡಿದ್ದ ಮಳೆರಾಯ ಇದೀಗ ಮುಂದಿನ ಎರಡು ದಿನ ಮತ್ತೆ ಸುರಿಯು ಸೂಚನೆ ನೀಡಿದೆ. ಮುಂದಿನ 2 ದಿನ ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಇದೇ ವೇಳೆ ಉತ್ತರ ಭಾರತ ಅತೀವ ಚಳಿಯಿಂದ ನಡುಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹಿಮಾಚಲ ಪ್ರದೇಶ, ಉತ್ತರಖಂಡ, ಪಂಜಾಬ್, ಹರ್ಯಾಣ, ಚಂಡೀಘಡ, ದೆಹಲಿ, ಉತ್ತರ ಪ್ರದೇಶದಲ್ಲಿ ಜನವರಿ 8 ಮತ್ತು 9 ರಂದು ತೀವ್ರ ಮಳೆಯಾಗವು ಸಾಧ್ಯತೆ ಇದೆ. ಇದೇ ವೇಳೆ ಗುಜರಾತ್, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದ ಉತ್ತರ ಭಾಗದಲ್ಲಿ ಮತ್ತೆ ಮಳೆಯಾಗಲಿದೆ ಎಂದಿದೆ. ಇದೇ ವೇಳೆ ಕರ್ನಾಟಕದ ಕೆಲ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಜನವರಿ 8 ರಿಂದ 10ರ ವರೆಗೆ ಮಳೆಯಾಗಲಿದೆ ಎಂದಿದೆ. ತಮಿಳುನಾಡು ಹಾಗೂ ಕೇರಳದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ. ಇದರಿಂದ ಕರ್ನಾಟಕದ ಕೆಲ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕೊಡಗಿನಲ್ಲಿ 2 ದಿನಗಳಿಂದ ಅಕಾಲಿಕ ಮಳೆ: ಕಾಫಿ, ಭತ್ತ ಸೇರಿದಂತೆ ವಿವಿಧ ಬೆಳೆಗಳು ಹಾಳು, ಸಂಕಷ್ಟದಲ್ಲಿ ರೈತರು!
ಪಂಜಾಬ್, ಹರ್ಯಾಣ, ದೆಹಲಿ, ರಾಜಸ್ಥಾನ , ಚಂಡಿಘಡದಲ್ಲಿ ಅತೀವ ಚಳಿ ಕಾಡಲಿದೆ. ಜನವರಿ 8 ಮತ್ತು 9 ರಂದು ಅತೀವ ಚಳಿ ಹಾಗೂ ಮಂಜು ಕವಿದ ವಾತಾವರಣ ಇರಲಿದೆ ಎಂದು ಐಎಂಡಿ ಹೇಳಿದೆ. ಇತ್ತ ಕರ್ನಾಟಕದಲ್ಲಿ ಮುಂದಿನ ಮೂರು ತಿಂಗಳು ಅಕಾಲಿಕ ಮಳೆ ಕುರಿತು ಈಗಾಗಲೇ ಹವಾಮಾನ ಇಲಾಖೆ ಎಚ್ಚರಿಸಿದೆ.
10 ಸಾವಿರ ಬೆಳೆ ನಷ್ಟ ಪರಿಹಾರ ನೀಡಿ: ಗೋವಿಂದರಾಜು
ಮುಂಬರುವ ಬೇಸಿಗೆಯ ತಾಪಕ್ಕೆ ತಂಪೆರೆಯುವಷ್ಟು ವಾಡಿಕೆಗಿಂತ ತುಸು ಹೆಚ್ಚಿನ ಮಳೆ ಮುಂದಿನ ಮೂರು ತಿಂಗಳಿನಲ್ಲಿ ರಾಜ್ಯದಲ್ಲಿ ಸುರಿಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ರಾಜ್ಯದಲ್ಲಿ ಜನವರಿ, ಫೆಬ್ರವರಿ ಹಾಗೂ ಮಾರ್ಚ್ ಅವಧಿಯಲ್ಲಿ 15.4 ಮಿ.ಮೀ ನಷ್ಟು ವಾಡಿಕೆ ಮಳೆಯಾಗುತ್ತದೆ. ಈ ಪ್ರಮಾಣ ಹಾಗೂ ಇದಕ್ಕಿಂತ ಹೆಚ್ಚಿನ ಮಳೆಯಾಗಲಿದೆ. ಇದರಿಂದ ರಾಜ್ಯದಲ್ಲಿ ಸ್ವಲ್ಪ ಮಟ್ಟಿಗೆ ನೀರಿನ ಬವಣೆ ಕಡಿಮೆ ಮಾಡಲಿದೆ. ಜತೆಗೆ, ಮುಂಬರುವ ಬೇಸಿಗೆಯಲ್ಲಿ ಉಂಟಾಗುವ ಬಿಸಿಲಿನ ತಾಪವನ್ನು ಕಡಿಮೆಗೊಳಿಸಲಿದೆ ಎಂದು ಹವಾಮಾನ ತಜ್ಞರು ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದ್ದಾರೆ. ಮುಂಗಾರು ಮತ್ತು ಹಿಂಗಾರು ಮಳೆ ಕೊರತೆಯಿಂದ ಕಂಗೆಟ್ಟಿರುವ ರಾಜ್ಯದಲ್ಲಿ ಮುಂದಿನ ಬೇಸಿಗೆ ಕಳೆಯುವುದು ಚಿಂತೆಯಾಗಿದೆ. ಈ ನಡುವೆ ಜನವರಿಯಿಂದ ಮಾರ್ಚ್ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆ ಪ್ರಮಾಣ ಅಥವಾ ವಾಡಿಕೆ ಪ್ರಮಾಣಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂಬ ಹವಾಮಾನ ಇಲಾಖೆಯ ಮುನ್ಸೂಚನೆ ಸ್ವಲ್ಪ ಮಟ್ಟಿಗೆ ಆತಂಕ ದೂರವಾಗಿಸಿದೆ.