74ನೇ ಸ್ವಾತಂತ್ರ್ಯೋತ್ಸವ: ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ವೈಭವ!
ಕೊರೋನಾತಂಕ ನಡುವೆಯೇ 74ನೇ ಸ್ವಾತಂತ್ರ್ಯೋತ್ಸವ| ಕೆಂಪು ಕೋಟೆಯಲ್ಲಿ ಪಿಎತ್ರಿವರ್ಣ ಧ್ವಜ ಹಾರಿಸಿದ ಪಿಎಂ ಮೋದಿ| ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪಾರ್ಚನೆ ಮಾಡಿದ ಪ್ರಧಾನಿ
ನವದೆಹಲಿ(ಆ.15): ಕೊರೋನಾತಂಕ ನಡುವೆಯೇ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಈಗಾಗಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ.
"
ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣಕ್ಕೂ ಮುನ್ನ ರಾಜ್ಘಾಟ್ಗೆ ಭೇಟಿ ನೀಡಿದ ಪಿಎಂ ಮೋದಿ ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಇದಾದ ಬಳಿಕ ಕೆಂಪುಕೋಟೆಗೆ ಆಗಮಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಧಾನಿ ಮೋದಿಯವರನ್ನು ಬರಮಾಡಿಕೊಂಡರು. ಲೆಫ್ಟಿನೆಂಟ್ ಕರ್ನರ್ ಗೌರವ್ ಎಸ್ ಯೆವಾಲ್ಕರ್ ನೇತೃತ್ವದಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಹಾನರ್ ಸಲ್ಲಿಸಲಾಯ್ತು.
ಇನ್ನು ಕೊರೋನಾತಂಕ ಹಿನ್ನೆಲೆ ಕೆಂಪುಕೋಟೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಕೆಲವೇ ಗಣ್ಯರಿಗೆ ಪ್ರವೇಶ ನೀಡಲಾಗಿದ್ದು, ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
"