ಹೊಸ ಇತಿಹಾಸ ಸೃಷ್ಟಿಸಿದ ರಿಕ್ಕಿ ಕೇಜ್, ರಾಷ್ಟ್ರಗೀತೆಗೆ ಸ್ಪೆಷಲ್ ಟ್ಯೂನ್ ಟಚ್ ಕೊಟ್ಟ ಗ್ರ್ಯಾಮಿ ಪ್ರಶಸ್ತಿ ವಿಜೇತ!
ಗ್ರ್ಯಾಮಿ ಪ್ರಶಸ್ತಿ ವಿಜೇತ ಭಾರತದ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಭಾರತದ ರಾಷ್ಟ್ರಗೀತೆಗೆ ಅವರು ಹೊಸ ಬಗೆಯ ಟ್ಯೂನ್‌ಅನ್ನು ನೀಡಿದ್ದಾರೆ.

ಬೆಂಗಳೂರು (ಆ.14): ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ಗೆದ್ದಿರುವ ಸಂಗೀತ ನಿರ್ದೇಶಕ ಮತ್ತು ಪರಿಸರವಾದಿ ರಿಕ್ಕಿ ಕೇಜ್ ಹೊಸ ಇತಿಹಾಸವೊಂದನ್ನು ಸೃಷ್ಟಿಸಿದ್ದಾರೆ. ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಟ್ಟಿದ್ದಾರೆ. ಸ್ವಾತಂತ್ರ್ಯ ದಿನಕ್ಕೂ ಮುನ್ನ ದಿನ ಅಂದ್ರೆ ಇದೇ 14ರಂದು ಸಂಜೆ 5 ಗಂಟೆಗೆ ರಿಕ್ಕಿ ಕೇಜ್ ಸಾರಥ್ಯದ ವಿಭಿನ್ನ ಬಗೆಯ ರಾಷ್ಟ್ರಗೀತೆ ಬಿಡುಗಡೆಯಾಗಿದೆ. ವಿಶೇಷ ಅಂದರೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ ಅಂದರೆ ಲಂಡನ್ ಅಬೇ ರೋಡ್ ಸ್ಟುಡಿಯೋಸ್ ನಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಕೇವಲ 3 ಗಂಟೆ ಸಮಯದಲ್ಲಿಯೇ, 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಸಹಯೋಗದಲ್ಲಿ ಜನಗಣಮನ ಸಿದ್ಧವಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ರಿಕ್ಕಿ ಕೇಜ್ ಮಾಹಿತಿ ಹಂಚಿಕೊಂಡಿದ್ದಾರೆ.
ಮೋದಿ ಶ್ವೇತಭವನ ಔತಣಕ್ಕೆ ಕರ್ನಾಟಕದ ಸಂಗೀತ ನಿರ್ದೇಶಕ ರಿಕ್ಕಿ ಕೇಜ್‌ಗೆ ಆಹ್ವಾನ
ರಿಕ್ಕಿ ಕೇಜ್ ಮಾತನಾಡಿ, ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಡಲಾಗಿದೆ. ಈ ರಾಷ್ಟ್ರಗೀತೆ ಪ್ರೆಸೆಂಟ್ ಮಾಡಲು ನಾನು ಕಾತುರನಾಗಿದ್ದೆ. ಲಂಡನ್ ಮೂಲದ ರಾಯಲ್ ಫಿಲ್ಹಾರ್ಮೋನಿಕ್ ಆರ್ಕೆಸ್ಟ್ರಾದ ಸಹಯೋಗದಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಈ ಹಿಂದೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಕೈಚಳಕದಿಂದ ಭಾರತದ ರಾಷ್ಟ್ರಗೀತೆ ಸಿದ್ಧವಾಗಿದೆ ಎಂದು ಸಂತಸ ಹಂಚಿಕೊಂಡರು.
Ricky Kej: ಗ್ರ್ಯಾಮಿಗೆ ರಿಕ್ಕಿ ಕೇಜ್ 3ನೇ ಬಾರಿ ನಾಮ ನಿರ್ದೇಶನ