Asianet Suvarna News Asianet Suvarna News

ಸ್ವಾತಂತ್ರ್ಯ ದಿನಾಚರಣೆ; ಕೆಂಪುಕೋಟೆಯಲ್ಲಿ ಮೋದಿ ಧ್ವಜಾರೋಹಣ ಕಾರ್ಯಕ್ರಮಕ್ಕೆ 1,800 ಗೆಸ್ಟ್!

ಆಜಾದಿ ಕಾ ಅಮೃತ ಮಹೋತ್ಸವ ಆಚರಣೆಯಲ್ಲಿರುವ ಭಾರತ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಸ್ಮರಣೀಯವಾಗಿಸಲು ಎಲ್ಲಾ ಪ್ರಯತ್ನ ನಡೆದಿದೆ. ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಈ ಬಾರಿ 1,800 ಅತಿಥಿಗಳನ್ನು ಆಹ್ವಾನಿಸಲಾಗಿದೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಪ್ರಧಾನಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಈ ಗೆಸ್ಟ್ ಯಾರು? ಇಲ್ಲಿದೆ ವಿವರ

Independence Day celebrations 1800 people invited for PM Modi led to be a part of Red Fort flag hoist ckm
Author
First Published Aug 13, 2023, 4:37 PM IST | Last Updated Aug 13, 2023, 4:38 PM IST

ನವದೆಹಲಿ(ಆ.13) ದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಈಗಾಗಲೇ ಭಾರಿ ತಯಾರಿಗಳು ನಡೆದಿದೆ. ಜೊತೆಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 77ನೇ ಸ್ವಾತಂತ್ಯ ದಿನಾಟರಣೆ ಆಚರಿಸಲಿದ್ದಾರೆ. ಧ್ವಜಾರೋಹಣ ನೇರವೇರಿಸಿ ದೇಶವನ್ನುದ್ದೇಶಿ ಭಾಷಣ ಮಾಡಲಿದ್ದಾರೆ. ಈ ಬಾರಿ ಕೆಂಪು ಕೋಟೆ ಸ್ವಾತಂತ್ರ್ಯ ದಿನಾಚರಣೆಗೆ 1,800 ವಿಶೇಷ ಅತಿಥಿಗಳನ್ನು ಆಹ್ವಾನಿಸಲಾಗಿದೆ. ರೈತರು, ಮೀನುಗಾರರು, ಕಾರ್ಮಿಕರು, ಶಿಕ್ಷಕರು ಸೇರಿದಂತೆ 1,800 ಜನರನ್ನು, ಅವರ ಕುಟುಂಬದೊಂದಿಗೆ, ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ. ಜನ ಭಾಗೀದಾರಿ ಪರಿಕಲ್ಪನೆಯಡಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. 

ಈ ವಿಶೇಷ ಅತಿಥಿಗಳು 660 ಕ್ಕೂ ಹೆಚ್ಚು ವಿವಿಧ ಗ್ರಾಮಗಳ 400 ಕ್ಕೂ ಹೆಚ್ಚು ಸರಪಂಚರನ್ನು ಒಳಗೊಂಡಿದ್ದಾರೆ. ರೈತ ಉತ್ಪಾದಕ ಸಂಸ್ಥೆಗಳ ಯೋಜನೆಯ 250 ಮಂದಿ,  ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮತ್ತು ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆಯ ತಲಾ 50 ಮಂದಿಗೆ ಆಹ್ವಾನ ನೀಡಲಾಗಿದೆ. ಇನ್ನು ಹೊಸ ಸಂಸತ್ತಿನ ಕಟ್ಟಡ ಸೇರಿದಂತೆ ಕೇಂದ್ರ ವಿಸ್ಟಾ ಯೋಜನೆಯ 50 ಶ್ರಮ ಯೋಗಿಗಳು (ನಿರ್ಮಾಣ ಕೆಲಸಗಾರರು), ಖಾದಿ ಕಾರ್ಮಿಕರು, ಗಡಿ ರಸ್ತೆಗಳ ನಿರ್ಮಾಣ, ಅಮೃತ್ ಸರೋವರ ಮತ್ತು ಹರ್ ಘರ್ ಜಲ ಯೋಜನೆಯ ತಲಾ 50 ಮತ್ತು ತಲಾ 50 ಪ್ರಾಥಮಿಕ ಶಾಲಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇನ್ನು ದಾದಿಯರು ಮತ್ತು ಮೀನುಗಾರರು ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 

 

ಆ.15ರ ಮೋದಿ ಕೆಂಪು ಕೋಟೆ ಭಾಷಣದ ವೇಳೆ ಅಮೆರಿಕ ಸಂಸದರು ಭಾಗಿ

ಈ ಆಹ್ವಾನಿತರ ಜೊತೆಗೆ ಪ್ರತಿ ರಾಜ್ಯಹಾಗೂ ಕೇಂದ್ರಾಡಳಿತ ಪ್ರದೇಶದಿಂದ ಎಪ್ಪತ್ತೈದು ದಂಪತಿಗಳನ್ನು ಅವರ ಸಾಂಪ್ರದಾಯಿಕ ಉಡುಗೆಯಲ್ಲಿ, ಕೆಂಪು ಕೋಟೆಯಲ್ಲಿ ಸಮಾರಂಭವನ್ನು ವೀಕ್ಷಿಸಲು ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಯುದ್ಧ ಸ್ಮಾರಕ, ಇಂಡಿಯಾ ಗೇಟ್, ವಿಜಯ್ ಚೌಕ್, ನವದೆಹಲಿ ರೈಲು ನಿಲ್ದಾಣ, ಪ್ರಗತಿ ಮೈದಾನ, ರಾಜ್ ಘಾಟ್, ಜಾಮಾ ಮಸೀದಿ ಮೆಟ್ರೋ ನಿಲ್ದಾಣ, ರಾಜೀವ್ ಚೌಕ್ ಮೆಟ್ರೋ ನಿಲ್ದಾಣ, ದೆಹಲಿ ಗೇಟ್ ಮೆಟ್ರೋ ನಿಲ್ದಾಣ, ITO ಮೆಟ್ರೋ ಗೇಟ್, ನೌಬತ್ ಖಾನಾ ಮತ್ತು ಶೀಶ್ ಗಂಜ್ ಗುರುದ್ವಾರ ಸೇರಿದಂತೆ 12 ಸ್ಥಳಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳು ಮತ್ತು ಉಪಕ್ರಮಗಳಿಗೆ ಮೀಸಲಾದ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಲಾಗಿದೆ.

ಜಾಗತಿಕವಾಗಿ ಭರವಸೆ ಮೂಡಿಸಿರುವ ಯೋಜನೆಗಳು/ಉಪಕ್ರಮಗಳು: ಲಸಿಕೆ ಮತ್ತು ಯೋಗ; ಉಜ್ವಲ ಯೋಜನೆ; ಬಾಹ್ಯಾಕಾಶ ಶಕ್ತಿ; ಡಿಜಿಟಲ್ ಇಂಡಿಯಾ; ಕೌಶಲ್ಯ ಭಾರತ; ಸ್ಟಾರ್ಟ್ ಅಪ್ ಇಂಡಿಯಾ; ಸ್ವಚ್ಛ ಭಾರತ; ಸಶಕ್ತ ಭಾರತ, ನಯಾ ಭಾರತ; ಬಲಿಷ್ಠ ಭಾರತ; ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಜಲ ಜೀವನ್ ಮಿಷನ್.

ಭಾರತದ ಸ್ವಾತಂತ್ರ್ಯಕ್ಕೆ ಕೇಳಿದ್ರು ಶುಭ ಮಹೂರ್ತ, ಆಗಸ್ಟ್‌ 15ರ ದಿನಕ್ಕಾಗಿ ಕೇಳಲಾಗಿತ್ತು ಜಾತಕ!

ಆಚರಣೆಯ ಭಾಗವಾಗಿ, ರಕ್ಷಣಾ ಸಚಿವಾಲಯವು ಆಗಸ್ಟ್ 15-20 ರಿಂದ MyGov ಪೋರ್ಟಲ್‌ ನಲ್ಲಿ ಆನ್‌ಲೈನ್ ಸೆಲ್ಫಿ ಸ್ಪರ್ಧೆಯನ್ನು ನಡೆಸುತ್ತಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು 12 ಸ್ಥಾಪನೆ (Installation) ಗಳಲ್ಲಿ ಒಂದು ಅಥವಾ ಹೆಚ್ಚಿನ ಸೆಲ್ಫಿಗಳನ್ನು ತೆಗೆದುಕೊಳ್ಳಲು ಮತ್ತು ಅವುಗಳನ್ನು MyGov ಪ್ಲಾಟ್‌ ಫಾರ್ಮ್‌ ನಲ್ಲಿ ಅಪ್‌ ಲೋಡ್ ಮಾಡಲು ಜನರನ್ನು ಪ್ರೋತ್ಸಾಹಿಸಲಾಗುತ್ತದೆ. ಆನ್‌ ಲೈನ್ ಸೆಲ್ಫಿ ಸ್ಪರ್ಧೆಯ ಆಧಾರದ ಮೇಲೆ ಪ್ರತಿ ಸ್ಥಾಪನೆಯಿಂದ ಒಬ್ಬರಂತೆ ಹನ್ನೆರಡು ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ವಿಜೇತರಿಗೆ ತಲಾ 10,000 ರೂಪಾಯಿ ಬಹುಮಾನ ನೀಡಲಾಗುತ್ತದೆ.

ಮಾರ್ಚ್ 12, 2021 ರಂದು ಗುಜರಾತ್‌ ನ ಅಹಮದಾಬಾದ್‌ ನಲ್ಲಿರುವ ಸಬರಮತಿ ಆಶ್ರಮದಿಂದ ಪ್ರಧಾನ ಮಂತ್ರಿಯವರು ಪ್ರಾರಂಭಿಸಿದ 'ಆಜಾದಿ ಕಾ ಅಮೃತ ಮಹೋತ್ಸವ' ಆಚರಣೆಯು ಈ ವರ್ಷದ ಸ್ವಾತಂತ್ರ್ಯ ದಿನದಂದು ಮುಕ್ತಾಯಗೊಳ್ಳುತ್ತದೆ. 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಮೋದಿಯವರ ಕನಸನ್ನು ನನಸಾಗಿಸಲು ಕೇಂದ್ರ ಸರ್ಕಾರ ಅವಿರತ ಶ್ರಮವಹಿಸುತ್ತಿದೆ.  
 

Latest Videos
Follow Us:
Download App:
  • android
  • ios