ಹರ್ ಘರ್ ತಿರಂಗ ಅಭಿಯಾನಕ್ಕೆ ಭರ್ಜರಿ ಸ್ಪಂದನೆ, ಪ್ರಧಾನಿ ಮೋದಿ ಸಂತಸ!
ಅಜಾದಿ ಕಾ ಅಮೃತಮ ಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ಮನೆ ಮನೆಯಲ್ಲಿ ತಿರಂಗ ಹಾರಿಸುವ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಇದೀಗ ದೇಶಾದ್ಯಂತ ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ. ಈ ಕುರಿತು ಸ್ವತಃ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.
ನವದೆಹಲಿ(ಆ.13): 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ಭಾರತ ಈಗಾಗಲೇ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಹರ್ ಘರ್ ತಿರಂಗ ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಮನೆ ಮನೆಯಲ್ಲಿ ತಿರಂಗ ಹಾರಿಸುವ ಈ ಅಭಿಯಾನಕ್ಕೆ ಇಡೀ ದೇಶದಲ್ಲಿ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮನೆ, ಕಚೇರಿ, ಮೈದಾನ, ಐತಿಹಾಸಿಕ ಕಟ್ಟಡ, ಜಲಾಶಯ ಸೇರಿದಂತೆ ದೇಶದ ಎಲ್ಲಾ ಭಾಗಗಳಲ್ಲಿ ರಾಷ್ಟ್ರ ಧ್ವಜ ಹಾರಾಡುತ್ತಿದೆ. ಇಡೀ ದೇಶ ಕೇಸರಿ ಬಿಳಿ ಹಸಿರು ವರ್ಣಗಳಿಂದ ಕಂಗೊಳಿಸುತ್ತಿದೆ. ಹಲವು ಕಟ್ಟಡಗಳು ತ್ರಿವರ್ಣ ಧ್ವಜ ಬೆಳಕಿನಲ್ಲಿ ಕಂಗೊಳಿಸುತ್ತಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ದೇಶದಲ್ಲಿ ಹರ್ ಘರ್ ತಿರಂಗ ಅಭಿಯಾನಕ್ಕೆ ವ್ಯಕ್ತವಾಗಿರುವ ಸ್ಪಂದನೆ ಅತೀವ ಸಂತಸ ತಂದಿದೆ. ದೇಶ ಪ್ರೇಮ ಪ್ರತಿಯೊಬ್ಬರ ಮನದಲ್ಲಿ ಎದ್ದುಕಾಣುತ್ತಿದೆ ಎಂದು ಮೋದಿ ಹೇಳಿದ್ದಾರೆ.
ಪ್ರಧಾನಿ ಮೋದಿ ದೇಶದ ಪ್ರಮುಖ ನಗರ, ಐತಿಹಾಸಿಕ ಕಟ್ಟಡ ಸೇರಿದಂತೆ ಹಲವೆಡೆ ತಿರಂಗ ಧ್ವಜ, ತಿರಂಗ ಬೆಳಕಿನ ಚಿತ್ತಾರಗಳ ಕುರಿತು ಟ್ವೀಟ್ ಮಾಡಿದ್ದಾರೆ. ಮೋದಿ ಕರೆಗೆ ಬಿಜೆಪಿ ನಾಯಕರು ಮಾತ್ರವಲ್ಲ, ದೇಶದ ಸೆಲೆಬ್ರೆಟಿಗಳು, ಗಣ್ಯರು ಸೇರಿದಂತೆ ಭಾರತೀಯರು ತಿರಂಗ ಹಾರಿಸಿ ರಾಷ್ಟ್ರಪ್ರೇಮ ಮೆರೆದಿದ್ದಾರೆ.
Uttara Kannada; ಸಾವಿರಾರು ವಿದ್ಯಾರ್ಥಿಗಳಿಂದ ತ್ರಿವರ್ಣ ಧ್ವಜ ಅಭಿಯಾನ
ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ 3 ದಿನಗಳ ‘ಹರ್ ಘರ್ ತಿರಂಗಾ’ ಅಭಿಯಾನ ದೇಶಾದ್ಯಂತ ಶನಿವಾರ ಸಂಭ್ರಮದಿಂದ ಆರಂಭವಾಗಿದೆ. ಕೇಂದ್ರ ಸಚಿವರು, ಮುಖ್ಯಮಂತ್ರಿಗಳಿಂದ ಹಿಡಿದು ಜನಸಾಮಾನ್ಯರು ಕೂಡ ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಿದ್ದು, ಎಲ್ಲೆಡೆ ದೇಶಭಕ್ತಿಯ ವಾತಾವರಣ ನಿರ್ಮಾಣವಾಗಿದೆ.