ಗುರುವಾರ ಶಸ್ತ್ರಾಸ್ತ್ರ ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಸಾಧಿಸುವ ಕುರಿತ ವೆಬಿನಾರ್‌ನಲ್ಲಿ ಮಾತನಾಡಿದ ಪ್ರಧಾನಿ, ಭಾರತೀಯ ಸಾಗರ ಪ್ರದೇಶ ವ್ಯಾಪ್ತಿಗೆ ಭದ್ರತೆ ಒದಗಿಸುವ ಸ್ಥಾನದವನ್ನು ಇನ್ನಷ್ಟು ಬಲಿಷ್ಠಗೊಳಿಸಲಿದೆ ಎಂದು ಹೇಳಿದ್ದಾರೆ.

ಅಟೋಮೆಟಿಕ್ ರೂಟ್ ಮೂಲಕ ಮೊದಲಬಾರಿಗೆ ದೇಶದಲ್ಲಿ ಶಸ್ತ್ರಾಸ್ತ್ರ ಉತ್ಪಾದನೆಯಲ್ಲಿ ಶೇ.74ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅನುಮತಿ ನೀಡಲಾಗಿದೆ. ಆರ್ಡ್‌ನೆನ್ಸ್ ಫ್ಯಾಕ್ಟರಿ ಮಂಡಳಿಯ ಸಾಂಸ್ಥಿಕೀಕರಣದೊಂದಿಗೆ ನಾವು ಮುಂದುವರಿಯುತ್ತಿದ್ದೇವೆ ಎಂದಿದ್ದಾರೆ.

JEE-NEET ವಿಚಾರದಲ್ಲೂ ರಾಜಕೀಯ ಮಾಡುತ್ತಿರುವವರು ಯಾರು? ಮೋದಿಗೆ ಬಂದ ಪತ್ರ

ದೇಶಿಯ ಶಸ್ತ್ರಾಸ್ತ್ರ ಉತ್ಪಾದನೆಯನ್ನು ಹೆಚ್ಚಿಸಲು ತೆಗೆದುಕೊಂಡ ಕ್ರಮಗಳನ್ನು ತಿಳಿಸಿದ ಪ್ರಧಾನಿ, ದೇಶೀಯ ತಾಂತ್ರಿಕತೆಯನ್ನು ಅಭಿವೃದ್ಧಿಪಡಿಸುವುದು ನಮ್ಮ ಗುರಿ ಎಂದಿದ್ದಾರೆ. ಪರವಾನಗಿ ನಿಯಮಗಳನ್ನು ಸಡಿಲಗೊಳಿಸುವುದು, ಸರಳ ರಫ್ತು ನಿಯಮಗಳನ್ನು ಮಾಡಲಾಗಿದೆ ಎಂದಿದ್ದಾರೆ.

ಕಳೆದ ಹಲವು ವರ್ಷಗಳಲ್ಲಿ ಭಾರತ ಪ್ರಮುಖ ಶಸ್ತ್ರಾಸ್ತ್ರ ಆಮದು ರಾಷ್ಟ್ರವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ನಮ್ಮಲ್ಲಿ ಶ್ತಸ್ತ್ರಾಸ್ತ್ರ ಉತ್ಪಾದನೆ ಸಾಮರ್ಥ್ಯ ಹೆಚ್ಚಿತ್ತು. ಆದರೆ ಅದಕ್ಕೆ ಸಿಗಬೇಕಾದಷ್ಟು ಪ್ರಾಮುಖ್ಯತೆ ಅಂದು ಸಿಗಲಿಲ್ಲ. ಅಂತಹ ಸ್ಥಿತಿ ಈಗ ಬದಲಾಗುತ್ತಿದೆ ಎಂದಿದ್ದಾರೆ.

ಇಸ್ರೇಲ್ ನಿರ್ಮಿತ ಫಾಲ್ಕನ್ ಖರೀದಿಗೆ ಭಾರತ ಒಪ್ಪಂದ: ಚೀನಾ, ಪಾಕ್‌ಗೆ ಶುರುವಾಯ್ತು ನಡುಕ!

ಈಗಾಗಲೇ ಶಸ್ತ್ರಾಸ್ತ್ರ ರಫ್ತಿಗೆ ಹಲವು ರಾಷ್ಟ್ರಗಳಿಂದ ಬೇಡಿಕೆ ಬಂದಿದೆ ಎಂದು ಡಿಫೆನ್ಸ್ ಸ್ಟಾಫ್ ಮುಖ್ಯಸ್ಥ ಜ. ಬಿಪಿನ್ ರಾವತ್ ತಿಳಿಸಿದ್ದಾರೆ. ಆರ್ಟಿಲರಿಯಂತೆ, ರಾಡರ್‌ಗಳಿಗೂ ಹೆಚ್ಚಿನ ಬೇಡಿಕೆ ಇದೆ ಎಂದಿದ್ದಾರೆ.