ನವದೆಹಲಿ(ಜು.25): ದೇಶದಲ್ಲಿ ಕೊರೋನಾ ವೈರಸ್‌ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವ ಮಧ್ಯೆಯೇ ಕೊರೋನಾ ಮರಣ ಪ್ರಮಾಣ ಶೇ.2.38ಕ್ಕೆ ಇಳಿಕೆ ಆಗಿದೆ.

"

ಮೇನಲ್ಲಿ ಕೊರೋನಾ ಸಾವಿನ ಪ್ರಮಾಣ ಶೇ.3.2ರಷ್ಟಿತ್ತು. ಜು.10ರಂದು ಭಾರತದಲ್ಲಿ ಕೊರೋನಾ ಸಾವಿನ ಪ್ರಮಾಣ ಶೇ.2.72ಕ್ಕೆ ಇಳಿಕೆ ಆಗಿತ್ತು. ನಂತರ ಮತ್ತಷ್ಟುಇಳಿಕೆ ಕಂಡು ಜು.20ರಂದು ಶೇ.2.49ಕ್ಕೆ ಕುಸಿದಿತ್ತು. ಇದೀಗ ಮರಣ ಪ್ರಮಣ ಮತ್ತುಷ್ಟುಇಳಿಕೆ ಕಂಡಿರುವುದು ಆಶಾವಾದ ಮೂಡಿಸಿದೆ.

ವೈದ್ಯ ಗಿರಿಧರ್‌ ಕಜೆ ಬಳಿ ಆಯುರ್ವೇದ ಮೆಡಿಸಿನ್‌ ತೆಗೆದುಕೊಂಡೆ: ಕೊರೋನಾ ಗೆದ್ದ ಸಚಿವ ಸಿ. ಟಿ. ರವಿ!

ಇದೇ ವೇಳೆ ಕೊರೋನಾದಿಂದ ಗುಣಮುಖರಾದವರ ಪ್ರಮಾಣ ದೇಶದಲ್ಲಿ ಶೇ. 63.45ಕ್ಕೆ ಏರಿಕೆ ಆಗಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ಈ ವರೆಗೆ ಒಟ್ಟು 8,17,208 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, 4,40,135 ಸಕ್ರಿಯ ಪ್ರಕರಣಗಳಿವೆ.

ಒಟ್ಟು ಪ್ರಕರಣಗಳ ಸಂಖ್ಯೆ 12.87 ಲಕ್ಷಕ್ಕೆ ಏರಿಕೆ ಆಗಿದೆ. ಪ್ರತಿ 10 ಲಕ್ಷ ಜನಸಂಖ್ಯೆಗೆ 11,179 ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. 897 ಸರ್ಕಾರಿ ಮತ್ತು 393 ಖಾಸಗಿ ಪ್ರಯೋಗಾಲಯಗಳಲ್ಲಿ ಕೊರೋನಾ ಪರೀಕ್ಷೆ ಮಾಡಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.