ನವದೆಹಲಿ(ಏ.19): ಕೊರೋನಾ ವೈರಸ್ ಆತಂಕ ಹೆಚ್ಚಾಗಿದೆ. ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ. ಇದರ ನಡುವೆ ಕೊರೋನಾ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ, ದೇಶದ ವೈದ್ಯರು ಹಾಗೂ ಲಸಿಕೆ ಉತ್ಪಾದಕರ ಜೊತೆ ಮೋದಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ಸಭೆ ಬಳಿಕ ಪ್ರಧಾನಿ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ. 18 ವರ್ಷ ಎಲ್ಲರಿಗೂ ಮೇ.01ರಿಂದ ಲಸಿಕೆ ನೀಡಲು ಘೋಷಿಸಿದ್ದಾರೆ.

ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್‌ಗೆ ಕೊರೋನಾ; ಏಮ್ಸ್ ಆಸ್ಪತ್ರೆ ದಾಖಲು!

ಅತೀ ಕಡಿಮೆ ಸಮಯದಲ್ಲಿ ಗರಿಷ್ಠ ಸಂಖ್ಯೆಯ ಭಾರತೀಯರಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಇದೀಗ ಕೊರೋನಾ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದರ ಫಲವಾಗಿ ಮೇ.01ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡಲಾಗುವುದು ಎಂದು ಮೋದಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಸಂಶೋಧನಾ ಸಂಸ್ಥೆಗಳು, ಅಂತಾರಾಷ್ಟ್ರೀಯ ಔಷಧಿ ತಯಾರಕರಿಗೆ ಹೆಚ್ಚಿನ ನೆರವು ನೀಡಿದೆ. ಈ ಮೂಲಕ ಲಸಿಕೆ ಉತ್ಪಾದನೆ ವೇಗ ಹೆಚ್ಚಿಸಲಾಗಿದೆ.  ಭಾರತದ ಖಾಸಗಿ ವಲಯದ ಲಸಿಕೆ ಉತ್ಪಾದನಾ ಸಾಮರ್ಥ್ಯದ ಬಲವನ್ನು ಅಭೂತಪೂರ್ವ ನಿರ್ಣಾಯಕ ಹಂತಗಳ ಮೂಲಕ ವೃದ್ಧಿಸಲಾಗಿದೆ. ಪಿಎಂ ಮೋದಿಯವರ ಸೂಚನೆಗಳ ಪ್ರಕಾರ, ಭಾರತವು ಪ್ರತಿ ಉತ್ಪಾದಕರೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದೆ.